Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಮುಭಾವನೆ‌ ಬಿತ್ತುವವರನ್ನು ದೂರವಿಡಿ:...

ಕೋಮುಭಾವನೆ‌ ಬಿತ್ತುವವರನ್ನು ದೂರವಿಡಿ: ಶಾಸಕ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ5 March 2022 8:08 PM IST
share
ಕೋಮುಭಾವನೆ‌ ಬಿತ್ತುವವರನ್ನು ದೂರವಿಡಿ: ಶಾಸಕ ಪ್ರಿಯಾಂಕ್ ಖರ್ಗೆ

ಕಲಬುರಗಿ: ಉರ್ದು ಮಾಧ್ಯಮದ ಶಾಲೆ ಉದ್ಘಾಟನೆ ಹಿಂದೂ ಸಂಪ್ರದಾಯದಂತೆ ನಡೆದಿದೆ.‌ ಇದು ನಮ್ಮೊಳಗೆ ಭ್ರಾತೃತ್ವತೆ ಹಾಗೂ ಸಹೋದರತೆ ಇನ್ನೂ ಬಲಿಷ್ಠವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ‌ ಸಚಿವ,  ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಅವರು ಹೇಳಿದರು.

ದಿಗ್ಗಾಂವ ಗ್ರಾಮದಲ್ಲಿ ರೂ 15 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಾ ಬಾಬು ಜಗಜೀವನ ರಾಂ ಭವನದ, ರೂ 40 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಸರ್ಕಾರಿ ಶಾಲಾ ಕೊಠಡಿ, ರೂ 84 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಉರ್ದು ಮಾಧ್ಯಮ ಶಾಲೆಯ ಕೊಠಡಿಗಳ ಉದ್ಘಾಟನೆ‌ ಹಾಗೂ ರೂ‌ 66.70 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸಿಸಿ‌ರಸ್ತೆಗೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡುತ್ತಿದ್ದರು.

ದೇಶದಲ್ಲಿ ಧರ್ಮಗಳ ನಡುವೆ ಭಾತೃತ್ವತೆ ಬಲಿಷ್ಠವಾಗಿದೆ. ಎಲ್ಲರೂ ಒಂದೇ ಎನ್ನುವ ಸಂವಿಧಾನದ ಆಶಯದಂತೆ ಎಲ್ಲವೂ ನಡೆದಿದೆ. ಆದರೂ, ಈ ನಡುವೆ ಹಿಜಾಬ್- ಕೇಸರಿ‌ ಗಲಾಟೆ ನಡೆದಿದ್ದು ದುರದೃಷ್ಟಕರ. ಮಕ್ಕಳ ಕೈಗೆ ಕೇಸರಿ ಶಾಲು ಕೊಟ್ಟವರು ಯಾರು? ಮಕ್ಕಳಿಗೆ ಉತ್ಕೃಷ್ಟ ಶಿಕ್ಷಣ ಕೊಡಿಸುವ ಬದಲು ಕೇಸರಿ‌ ಹಿಜಾಬ್ ಎಂದು ನಡೆಯುತ್ತಿರುವ ಗಲಾಟೆಗೆ ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದರು.

ಧರ್ಮದ ಆಚರಣೆಗಳು ಆಯಾ ವ್ಯಕ್ತಿಗಳ ನಡುವೆ ನಡೆಯುವ ವೈಯಕ್ತಿಕ ವಿಷಯವಾಗಿದೆ. ನಾನು ನಾಸ್ತಿಕ‌ ನನಗೆ ದೇವರು, ಪೂಜೆ ಇತ್ಯಾದಿ ಬಗ್ಗೆ ಒಲವಿಲ್ಲ. ನನಗೆ ಬಸವಣ್ಣನವರ ತತ್ವದ ಮೇಲೆ ನಂಬಿಕೆ ಇದೆ. ನಾನು‌ ಸಂವಿಧಾನವನ್ನು ಗೌರವಿಸುತ್ತೇನೆ. ಆದರೆ, ಯಾವುದೇ ಧಾರ್ಮಿಕ‌ ಆಚರಣೆ ಮಾಡುವವರಿಗೆ ನನ್ನ‌ ವಿರೋಧವಿಲ್ಲ.  ನನಗೆ ಯಾವ ಧರ್ಮದವರು ಕರೆಯುತ್ತಾರೋ ಅಲ್ಲಿಗೆ ಹೋಗುತ್ತೇನೆ. ನೀವು ಕೂಡಾ ಶೈಕ್ಷಣಿಕ ಕ್ಷೇತ್ರದಲ್ಲಿ ಧರ್ಮವನ್ನು ಬೆರಸಬೇಡಿ. ಮಕ್ಕಳಿಗೆ ವೈಜ್ಞಾನಿಕತೆ ಬೆಳೆಸಿ,  ಕೋಮುಭಾವನೆ ಬಿತ್ತುವವರನ್ನು ನಮ್ಮ ಚಿತ್ತಾಪುರ ಕ್ಷೇತ್ರದಿಂದ ದೂರವಿಡಿ ಎಂದು ಮನವಿ‌ ಮಾಡಿದರು.

ವೇದಿಕೆಯ ಮೇಲೆ ಭೀಮಣ್ಣ ಸಾಲಿ, ಮುಕ್ತಾರ್ ಪಟೇಲ್,‌ ಶಿವರುದ್ರ ಭೇಣಿ,  ಸಿದ್ದು ಪಾಟೀಲ್,  ಸೇರಿದಂತೆ ಮತ್ತಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X