Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬಜೆಟ್‌ನಲ್ಲಿ ಸಾಮಾಜಿಕ ವಲಯಗಳಿಗೆ ಪಾಲು...

ಬಜೆಟ್‌ನಲ್ಲಿ ಸಾಮಾಜಿಕ ವಲಯಗಳಿಗೆ ಪಾಲು ಇಳಿಕೆ

ಆರ್ಥಿಕ ಸಮೀಕ್ಷೆ ಬಹಿರಂಗ

ಜಿ.ಮಹಾಂತೇಶ್ಜಿ.ಮಹಾಂತೇಶ್6 March 2022 8:36 AM IST
share
ಬಜೆಟ್‌ನಲ್ಲಿ ಸಾಮಾಜಿಕ ವಲಯಗಳಿಗೆ ಪಾಲು ಇಳಿಕೆ

ಬೆಂಗಳೂರು, ಮಾ.5: ಶಿಕ್ಷಣ, ಆರೋಗ್ಯ, ವೈದ್ಯಕೀಯ ಸೌಕರ್ಯ, ಪೌಷ್ಠಿಕಾಂಶ, ನೀರು ಸರಬರಾಜು ಮತ್ತು ವಸತಿ ವಲಯಗಳಿಗೆ ರಾಜ್ಯ ನೀಡುತ್ತಿರುವ ಹಣದ ಪಾಲು ಕಡಿಮೆಯಾಗುತ್ತಾ ಬಂದಿದೆ ಎಂಬ ಸಂಗತಿಯನ್ನು ಕರ್ನಾಟಕ ಆರ್ಥಿಕ ಸಮೀಕ್ಷೆಯು ಬಹಿರಂಗಪಡಿಸಿದೆ.

ವೆಚ್ಚ ಮತ್ತು ಬಜೆಟ್ ಹಂಚಿಕೆಗೆ ಸಂಬಂಧಿಸಿದಂತೆ ವಿಸ್ತ್ರತವಾಗಿ ವಿಶ್ಲೇಷಿಸಿರುವ ಕರ್ನಾಟಕ ಆರ್ಥಿಕ ಸಮೀಕ್ಷೆಯು ಕೃಷಿ, ಗ್ರಾಮೀಣಾಭಿವೃದ್ಧಿ ವಲಯಕ್ಕೆ ಮಾಡಿರುವ ವೆಚ್ಚ ಮತ್ತು ಸಾಮಾಜಿಕ ವಲಯಗಳಿಗೆ ಮಾಡಿರುವ ವೆಚ್ಚದೊಂದಿಗೆ ತುಲನೆ ಮಾಡಿದೆ.

ರಾಜ್ಯವು ಶಿಕ್ಷಣ ಮತ್ತು ಆರೋಗ್ಯದ ವಲಯದಲ್ಲಿ ಇನ್ನೂ ಹೆಚ್ಚಿನ ಬಂಡವಾಳವನ್ನು ಹೂಡುವ ಅಗತ್ಯವಿದೆ. ರಾಜ್ಯದ ಎಲ್ಲ ಜನರಿಗೆ ಆರೋಗ್ಯ ಸೇವೆಗಳನ್ನು ಪೂರೈಸಲು, ವೃದ್ಧಾಪ್ಯವನ್ನು ತಲುಪಿರುವವರಿಗೆ ಆರೈಕೆ ಮತ್ತು ಅವರ ಆರೋಗ್ಯವನ್ನು ಕಾಪಾಡಬೇಕೆಂದರೆ ಆರೋಗ್ಯ ವಲಯದ ಮೇಲೆ ಹೆಚ್ಚಿನ ಬಂಡವಾಳವನ್ನು ತೊಡಗಿಸಬೇಕಾಗಿದೆ ಎಂದು ಸಮೀಕ್ಷೆ ವರದಿಯಲ್ಲಿ ಅಭಿಪ್ರಾಯಪಡಲಾಗಿದೆ.

   2012ರಲ್ಲಿ ಆರೋಗ್ಯ ವಲಯಕ್ಕೆ ರಾಜ್ಯಗಳ ಸರಾಸರಿ ವೆಚ್ಚ ಶೇ.4.2ರಷ್ಟಿತ್ತು. ಇದು 2022ರ ಹೊತ್ತಿಗೆ ಶೇ. 5.5ಕ್ಕೆ ಏರಿಕೆಯಾಗಿದೆ. ಆದರೆ ಕರ್ನಾಟಕದ ವೆಚ್ಚವು 2012ರಲ್ಲಿ ಶೇ. 3.9ರಷ್ಟಿದ್ದರೆ 2022ರಲ್ಲಿ ಶೇ.5 ಮಾತ್ರ ಇದೆ. ಅದೇ ಸಮಯದಲ್ಲಿ ಶಿಕ್ಷಣದ ಮೇಲಿನ ವೆಚ್ಚವೂ ಪ್ರತೀ ವರ್ಷ ಕುಗ್ಗುತ್ತಲೇ ಬಂದಿದೆ. ಶಿಕ್ಷಣ ಮತ್ತು ಆರೋಗ್ಯ ವಲಯದಲ್ಲಿ ರಾಜ್ಯಗಳ ಸರಾಸರಿ 2012ರಲ್ಲಿ ಶೇ.16.3ರಷ್ಟಿದ್ದರೆ 2022ರಲ್ಲಿ ಶೆ.13.9ಕ್ಕೆ ಇಳಿಯುತ್ತದೆ. ಆದರೆ ಕರ್ನಾಟಕ ಇದೇ ಅವಧಿಯಲ್ಲಿ ಇನ್ನೂ ಕಡಿಮೆ ಮೊತ್ತವನ್ನು ಹಂಚಿಕೆ ಮಾಡಿರುತ್ತದೆ ಎಂದು ಸಮೀಕ್ಷೆ ವರದಿಯು ಬಹಿರಂಗಗೊಳಿಸಿದೆ. ಅಂದರೆ 2012ರಲ್ಲಿ ಶೇ.14.7ರಷ್ಟು ಮತ್ತು 2022ರಲ್ಲಿ ಶೇ.11.8ರಷ್ಟಾಗಿದೆ.

ಶಾಲೆಯಲ್ಲಿ ಮಕ್ಕಳ ಸಂಖ್ಯೆ ಸ್ಥಿರವಾಗಿ ಉಳಿದಿದೆ. ಅದರಲ್ಲೂ ಸರಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆಯಾಗಿದೆ ಎನ್ನುವುದು ಸತ್ಯವಾದರೂ ಉತ್ತಮ ಗುಣಮಟ್ಟದ ದುಡಿಯುವ ವರ್ಗವನ್ನು ಸೃಷ್ಟಿಸುವ ಉದ್ದೇಶದಿಂದ ಉನ್ನತ ಶಿಕ್ಷಣದಲ್ಲಿ ಇನ್ನು ಹೆಚ್ಚಿನ ಬಂಡವಾಳವನ್ನು ಹೂಡುವ ಅಗತ್ಯವಿದೆ ಎಂದು ಸಮಿಕ್ಷೆ ವರದಿಯು ಒತ್ತಿ ಹೇಳಿದೆ.

ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ವಲಯಗಳನ್ನು ಅವಲಂಬಿಸಿರುವರ ಮೇಲಿನ ತಲಾ ವೆಚ್ಚಕ್ಕೂ ಇತರ ವಲಯಗಳನ್ನು ಅವಲಂಬಿಸಿರುವರ ಮೇಲಿನ ತಲಾ ವೆಚ್ಚಕ್ಕೂ ಸಾಕಷ್ಟು ವ್ಯತ್ಯಾಸದ ಮೇಲೆ ಸಮೀಕ್ಷೆ ವರದಿಯು ಬೆಳಕು ಚೆಲ್ಲಿದೆ.

ಒಟ್ಟು ತಲಾ ವೆಚ್ಚವಾಗಿ 2017-18ರಿಂದ 2021-22ರವರೆಗೆ 1,46,786 ರೂ. ವೆಚ್ಚ ಮಾಡಿದೆ. ಇದರಲ್ಲಿ ಇತರ ವಲಯಗಳ ಮೇಲೆ ಇದೇ ಅವಧಿಯಲ್ಲಿ 86, 003 ರೂ. ವೆಚ್ಚ ಮಾಡಿದೆ. ಅಂದರೆ 60,783 ಕೋಟಿ ರೂ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ವಲಯಕ್ಕೆ ವೆಚ್ಚ ಮಾಡಿದಂತಾಗಿದೆ.

2017-18ರಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ವಲಯಕ್ಕೆ ತಲಾ ವೆಚ್ಚದ ರೂಪದಲ್ಲಿ 25,472 ರೂ. ಖರ್ಚಾದರೆ ಇತರೆ ವಲಯಗಳ ಮೇಲಿನ ತಲಾ ವೆಚ್ಚವು 16,093 ರೂ. ಆಗಿದೆ. 2022ರ ವರ್ಷಕ್ಕೆ ಇದು 29,772 ಮತ್ತು 18,371 ಕೋಟಿ ರೂ. ಆಗುತ್ತದೆ. ಕೈಗಾರಿಕೆ, ಸೇವೆ ಮತ್ತು ನಗರಾಭಿವೃದ್ಧಿ ವಲಯಗಳಿಗೆ ಅಸಮರ್ಪಕವಾಗಿ ಹಂಚಿಕೆಯಾಗುತ್ತಿದೆ ಎಂದೂ ಸಮೀಕ್ಷೆ ವರದಿಯಲ್ಲಿ ಹೇಳಲಾಗಿದೆ.

ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ವಲಯಗಳು ನಿರೀಕ್ಷಿತ ಬೆಳವಣಿಗೆ ಸಾಧಿಸಲು ಇಷ್ಟು ಬೃಹತ್ ಪ್ರಮಾಣದಲ್ಲಿ ಹೂಡಿಕೆ ನಿರೀಕ್ಷಿಸಬೇಕು. ಆದರೆ ಇಂತಹುದೇ ಹೂಡಿಕೆಯು ಇತರ ವಲಯಗಳ ಅಭಿವೃದ್ಧಿ ದೃಷ್ಟಿಯಿಂದಲೂ ಬೇಕಾಗುತ್ತದೆ. ಶೇ.41ರಷ್ಟು ಜನರು ಕೃಷಿ ಮತ್ತು ಗ್ರಾಮೀಣ ಆರ್ಥಿಕತೆ ಅವಲಂಬಿಸಿದ್ದು ಶೇ.59ರಷ್ಟು ಜನಸಂಖ್ಯೆ ಇತರ ವಲಯಗಳನ್ನು ಅವಲಂಬಿಸಿದೆ. ಕರ್ನಾಟಕವು ತುರ್ತಾಗಿ ಲಭ್ಯವಿರುವ ಕಾರ್ಮಿಕರನ್ನು ಹೆಚ್ಚಿನ ಮೌಲ್ಯವನ್ನು ಒದಗಿಸುವ ಕೈಗಾರಿಕೆ ಮತ್ತು ಸೇವಾ ವಲಯಗಳಲ್ಲಿ ಉದ್ಯೋಗ ಪಡೆಯುವಂತೆ ಮಾಡಬೇಕಿದೆ ಎಂದು ಸಮೀಕ್ಷೆ ವರದಿಯಲ್ಲಿ ವಿವರಿಸಲಾಗಿದೆ.

 ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಹಾಲಿ ನೀಡುತ್ತಿರುವ ಹಣದ ಹಂಚಿಕೆಯನ್ನು ಕಾಪಾಡಿಕೊಳ್ಳುತ್ತಲೇ ಕೈಗಾರಿಕೆ ಮತ್ತು ಸೇವಾ ವಲಯಕ್ಕೆ ಹಣದ ಹಂಚಿಕೆಯನ್ನು ಹೆಚ್ಚಿಸುವ ಅವಶ್ಯಕತೆ ಇದೆ. ಏಕೆಂದರೆ ಈ ವಲಯಗಳಲ್ಲಿ ಉದ್ಯೋಗದ ಅವಕಾಶಗಳನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಸಮೀಕ್ಷೆ ವರದಿಯು ಅಭಿಪ್ರಾಯಪಟ್ಟಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X