Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಮ್ಮ ಜನರ ಕುಡಿಯುವ ನೀರಿನ ಯೋಜನೆಗೆ...

ನಮ್ಮ ಜನರ ಕುಡಿಯುವ ನೀರಿನ ಯೋಜನೆಗೆ 'ಬಿಕ್ಕಟ್ಟಿನ ಲೇಪನ' ಹಚ್ಚಿದ ಕೇಂದ್ರ ಜಲಸಂಪನ್ಮೂಲ ಸಚಿವ: ಕುಮಾರಸ್ವಾಮಿ ಟೀಕೆ

ವಾರ್ತಾಭಾರತಿವಾರ್ತಾಭಾರತಿ6 March 2022 9:43 AM IST
share
ನಮ್ಮ ಜನರ ಕುಡಿಯುವ ನೀರಿನ ಯೋಜನೆಗೆ ಬಿಕ್ಕಟ್ಟಿನ ಲೇಪನ ಹಚ್ಚಿದ ಕೇಂದ್ರ ಜಲಸಂಪನ್ಮೂಲ ಸಚಿವ: ಕುಮಾರಸ್ವಾಮಿ ಟೀಕೆ

ಬೆಂಗಳೂರು, ಮಾ.6: ಮೇಕೆದಾಟು ಯೋಜನೆ ‘ವಿವಾದವನ್ನು ಕರ್ನಾಟಕ-ತಮಿಳುನಾಡು ಪರಸ್ಪರ ಚರ್ಚೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ ಹೇಳಿದ್ದಾರೆ. ಅವರೇ ʼವಿವಾದʼ ಎನ್ನುವ ಮೂಲಕ ನಮ್ಮ ಜನರ ಕುಡಿಯುವ ನೀರಿನ ಯೋಜನೆಗೆ ʼಬಿಕ್ಕಟ್ಟಿನ ಲೇಪನʼ ಹಚ್ಚಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಮೇಕೆದಾಟು ಯೋಜನೆ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಎರಡೂ ರಾಜ್ಯಗಳು ಕುಳಿತು ಚರ್ಚೆ ಮಾಡಿಕೊಂಡು ಒಮ್ಮತಕ್ಕೆ ಬರಬೇಕು ಎಂದು ಕೇಂದ್ರ ಸಚಿವರೇ ಹೇಳುವ ಮೂಲಕ, 'ಮೇಕೆದಾಟು ಯೋಜನೆಗೆ ಒಕ್ಕೂಟ‌ ವ್ಯವಸ್ಥೆಯ ಆಶಯಕ್ಕೆ ತಕ್ಕಂತೆ ಕಾನೂನಾತ್ಮಕ ಅನುಮತಿ ನೀಡುವ ಹೊಣೆಗಾರಿಕೆಯಿಂದ ಕೇಂದ್ರ ಸರಕಾರ ನುಣುಚಿಕೊಳ್ಳುತ್ತಿದೆ' ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ ಎಂದವರು ಹೇಳಿದ್ದಾರೆ.

ಮುಂಗಡ ಪತ್ರದಲ್ಲಿ ಯೋಜನೆಗೆ 1,000 ಕೋಟಿ ರೂ. ಕೊಟ್ಟೆವು ಎಂದು ಬಿಜೆಪಿ ಹಾಗೂ ನಮ್ಮ ಪಾದಯಾತ್ರೆಯಿಂದಲೇ ಹಣ ಘೋಷಿಸಲಾಯಿತು ಎಂದು ಕಾಂಗ್ರೆಸ್‌ ಕುಣಿಯುತ್ತಿವೆ. ಒಂದೇ ನಾಣ್ಯದ ಎರಡು ಮುಖಗಳಾದ ಎರಡೂ ರಾಷ್ಟ್ರೀಯ ಪಕ್ಷಗಳು, ಈಗ ಮೇಕೆದಾಟು ಇಟ್ಟುಕೊಟ್ಟುಕೊಂಡು ʼಚುನಾವಣಾ ಆಟʼ ಶುರು ಮಾಡಿವೆ ಎಂದವರು ಆರೋಪಿಸಿದರು.

ವಾಸ್ತವ ಏನು ಎಂಬುದನ್ನು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೇಂದ್ರದ ಕಾನೂನು ಸುಳಿಯಲ್ಲಿ ಸಿಕ್ಕಿರುವ ಹಾಗೂ ಕೇಂದ್ರದ ಜಲ ಆಯೋಗ (CWC)ದಲ್ಲಿ ಕೊಳೆಯುತ್ತಿರುವ ಮೇಕೆದಾಟು ಯೋಜನೆಯು ಪಾದಯಾತ್ರೆಯಿಂದ ಬರುವುದಿಲ್ಲ. ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿಯೇ ತಂದುಕೊಳ್ಳಬೇಕು ಎಂದಿದ್ದೆ. ಈಗ ಕೇಂದ್ರ ಸಚಿವರಾದ ಶೇಖಾವತ್‌, “ಮೇಕೆದಾಟು ಕುಡಿಯುವ ನೀರಿನ ಯೋಜನೆ ಬಗ್ಗೆ ಕರ್ನಾಟಕ ಉಂಟು, ತಮಿಳುನಾಡು ಉಂಟು. ನೀವು ನೀವೇ ಮಾತನಾಡಿಕೊಳ್ಳಿ”ಎಂದು ಕೈ ಎತ್ತಿಬಿಟ್ಟಿದ್ದಾರೆ. ಹಾಗಾದರೆ, ಯೋಜನೆಗೆ ಒಪ್ಪಿಗೆ ನೀಡುವಲ್ಲಿ ಕೇಂದ್ರ ಸರಕಾರದ ಪಾತ್ರವೇ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ಪಾಲಿನ ನೀರನ್ನು ದಕ್ಕಿಸಿಕೊಳ್ಳುವುದು ಮತ್ತು ನಮ್ಮ ಜನರಿಗೆ ಕುಡಿಯುವ ನೀರು ಕೊಡುವ ಮೇಕೆದಾಟು ಯೋಜನೆ ಅನುಷ್ಠಾನ ಮಾಡುವುದು ಕರ್ನಾಟಕದ ಹಕ್ಕು. ಆದರೆ, ಕೇಂದ್ರ ಸಚಿವರು ʼನೀವೇ ಬಗೆಹರಿಸಿಕೊಳ್ಳಿʼ ಎಂದು ಹೇಳಿದ ಒಳಮರ್ಮವೇನು? ಕಾವೇರಿ ಬಗ್ಗೆ ಬಿಜೆಪಿ ʼಹೊಸ ವರಸೆʼ ಶುರು ಮಾಡಿತೇ ಎನ್ನುವ ಸಂಶಯ ನನ್ನದು. ಈ ಬಗ್ಗೆ 1,000 ಕೋಟಿ ಹಣ ಘೋಷಣೆ ಮಾಡಿದೊಡನೆ ಪಾದಯಾತ್ರೆಯಿಂದಲೇ ಆಯಿತು ಎಂದು ʼಹಿಗ್ಗಿ ಹೀರೆಕಾಯಿʼ ಆಗಿದ್ದ ಕಾಂಗ್ರೆಸ್‌ ನಿಲುವೇನು? ಅವರೀಗ ತಮ್ಮ ಮಿತ್ರಪಕ್ಷ ಡಿಎಂಕೆ ಅಧಿಕಾರದಲ್ಲಿರುವ ತಮಿಳುನಾಡು ಸರಕಾರದ ಜತೆ ಮಾತುಕತೆ ನಡೆಸಿ ಎಂದು ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕುತ್ತಾರಾ? ಎಂದು ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಗೆ ಸವಾಲೆಸೆದಿದ್ದಾರೆ.

ಮೇಕೆದಾಟು ಯೋಜನೆ ‘ವಿವಾದ’ವನ್ನು ಕರ್ನಾಟಕ-ತಮಿಳುನಾಡು ಪರಸ್ಪರ ಚರ್ಚೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್‌ ಹೇಳಿದ್ದಾರೆ. ಅವರೇ ʼವಿವಾದʼ ಎನ್ನುವ ಮೂಲಕ ನಮ್ಮ ಜನರ ಕುಡಿಯುವ ನೀರಿನ ಯೋಜನೆಗೆ ʼಬಿಕ್ಕಟ್ಟಿನ ಲೇಪನʼ ಹಚ್ಚಿದ್ದಾರೆ. 1/7

— H D Kumaraswamy (@hd_kumaraswamy) March 6, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X