Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹತ್ಯೆಯಾದ ಹರ್ಷ ಮನೆಗೆ ಯಡಿಯೂರಪ್ಪ ಭೇಟಿ:...

ಹತ್ಯೆಯಾದ ಹರ್ಷ ಮನೆಗೆ ಯಡಿಯೂರಪ್ಪ ಭೇಟಿ: 25 ಲಕ್ಷ ರೂ. ಪರಿಹಾರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ6 March 2022 12:55 PM IST
share
ಹತ್ಯೆಯಾದ ಹರ್ಷ ಮನೆಗೆ ಯಡಿಯೂರಪ್ಪ ಭೇಟಿ: 25 ಲಕ್ಷ ರೂ. ಪರಿಹಾರ ವಿತರಣೆ

ಶಿವಮೊಗ್ಗ, ಮಾ.6: ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಮನೆಗೆ ರವಿವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರಾಜ್ಯ ಸರಕಾರದ ಪರವಾಗಿ ಹರ್ಷ ಕುಟುಂಬಕ್ಕೆ 25 ಲಕ್ಷ ರೂ.ನ ಪರಿಹಾರದ ಚೆಕ್ ನೀಡಿದರು.

ಸೀಗೆಹಟ್ಟಿಯಲ್ಲಿ ಹರ್ಷ ಕುಟುಂಬಸ್ಥರ ಭೇಟಿ ಬಳಿಕ ಮಾತನಾಡಿದ ಯಡಿಯೂರಪ್ಪ, 26 ವರ್ಷದ ಯುವಕ ಹರ್ಷ ಎಲ್ಲರ ಜೊತೆ ಆತ್ಮೀಯ ಸಂಬಂಧ ಹೊಂದಿದ್ದ. ಈ ಭಾಗದಲ್ಲಿ ಗೊಂದಲ, ಹೋರಾಟಕ್ಕೆ ಅವಕಾಶ ನೀಡುತ್ತಾ ಇರಲಿಲ್ಲ. ಹಿಂದೂ ಯುವ ಮುಖಂಡನಾಗಿ ಹರ್ಷ ಬೆಳೆಯುತ್ತಿದ್ದ. ಇದನ್ನೂ ಸಹಿಸಕ್ಕಾಗದೇ ಕೆಲವು ಕಿಡಿಗೇಡಿಗಳು ಕೊಲೆ ಮಾಡಿದ್ದಾರೆ. ಇದು ಅತ್ಯಂತ ಅಮಾನುಷ ಕೃತ್ಯ. ಹರ್ಷನ ಕುಟುಂಬಕ್ಕೆ ದೇವರು ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಸರಕಾರದ ಕಡೆಯಿಂದ 25 ಲಕ್ಷ ರೂ. ಚೆಕ್ ಅನ್ನು ಅವರಿಗೆ ಕೊಟ್ಟಿದ್ದೇನೆ. ಹಣ ಮುಖ್ಯ ಅಲ್ಲ. ಹರ್ಷನನ್ನು ಕಳೆದುಕೊಂಡ ಕುಟುಂಬದ ನೋವು ದೊಡ್ಡದು. ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂಬ ಪ್ರಾರ್ಥನೆ ಬಿಟ್ಟರೇ ನಮ್ಮ ಕೈಯಲ್ಲಿ ಏನೂ ಇಲ್ಲ ಎಂದರು.

  ಹಿಂದೂ, ಮುಸ್ಲಿಮ್‍, ಕ್ರಿಶ್ಚಿಯನ್ ಎಲ್ಲರೂ ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು. ಸಣ್ಣಪುಟ್ಟ ಕಾರಣಕ್ಕೆ ಕೊಲೆ, ಗೊಂದಲ ಉಂಟು ಮಾಡಬಾರದು. ಅದರಿಂದ ಶಾಂತಿ – ಸುವ್ಯವಸ್ಥೆ ಭಂಗವಾಗುತ್ತೆ. ಅದಕ್ಕೆ ಯಾರು ಅವಕಾಶ ಕೊಡಬಾರದು.ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಬದುಕಬೇಕು ಎಂಬುದು ಪ್ರಧಾನಿ ಹಾಗೂ ನಮ್ಮ ಅಪೇಕ್ಷೆ. ಈ ರೀತಿಯ ಘಟನೆಗಳು ಮತ್ತೇ ನಡೆಯದಂತೆ ಎಚ್ಚರ ವಹಿಸಬೇಕು. ಸುತ್ತಮುತ್ತಲಿನ ಜನರು ದುರ್ಘಟನೆ ನಡೆಯದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

ಯಡಿಯೂರಪ್ಪರೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X