Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಬಾಲ್ಯ ವಿವಾಹ ನಿಷೇಧ...

ಮಂಗಳೂರು: ಬಾಲ್ಯ ವಿವಾಹ ನಿಷೇಧ ಅಭಿಯಾನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ6 March 2022 1:54 PM IST
share
ಮಂಗಳೂರು: ಬಾಲ್ಯ ವಿವಾಹ ನಿಷೇಧ ಅಭಿಯಾನಕ್ಕೆ ಚಾಲನೆ

ಮಂಗಳೂರು, ಮಾ.6: ಬಾಲ್ಯ ವಿವಾಹ ನಿಷೇಧ ಹಾಗೂ ಅದರ ಕಾಯ್ದೆಯ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಲು ಎಲ್‌ಇಡಿ ವಾಹನದ ಮೂಲಕ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದ್ದಾರೆ.

ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರವಿವಾರ ಹಮ್ಮಿಕೊಳ್ಳಲಾಗಿದ್ದ ಬಾಲ್ಯ ವಿವಾಹ ನಿಷೇಧ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಮಾತನಾಡಿ, ಸರಕಾರದ ಆದೇಶದಂತೆ ಜಿಲ್ಲೆಯಲ್ಲಿ ಜಾಗೃತಿ ಮೂಡಿಸಲು 9 ದಿನಗಳ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಬಾಲ್ಯ ವಿವಾಹದ ನಿಷೇಧ ಕಾಯ್ದೆ ಜಾರಿಗೊಂಡು ಹಲವು ವರ್ಷಗಳಾಗಿವೆ, ಅದರ ಪರಿಣಾಮಕಾರಿ ಅನುಷ್ಠಾನವಾಗಬೇಕು, ಕಾಯ್ದೆ ಹೊರತಾಗಿ ಜಾಗೃತಿಯೂ ಅತಿ ಅಗತ್ಯ,  ಅದಕ್ಕೂ  ಮಿಗಿಲಾಗಿ ಪ್ರಜ್ಞಾವಂತಿಕೆ ಮೂಡಬೇಕು, ಪ್ರತಿಯೊಬ್ಬ ವ್ಯಕ್ತಿಯೂ ಪ್ರಜ್ಞಾವಂತರಾದಾಗ ಮಾತ್ರ ಈ ಸಾಮಾಜಿಕ ಪಿಡುಗಡನ್ನು ಹೋಗಲಾಡಿಸಲು ಸಾಧ್ಯ ಎಂದರು.

 ಶಿಕ್ಷಣವೇ ಈ ಪಿಡುಗಿಗೆ ಮದ್ದಾಗಿದ್ದು, ಸೂಕ್ತ ಸಮಯದಲ್ಲಿ ವಿದ್ಯಾಭ್ಯಾಸ ನೀಡುವ ಮೂಲಕ ಬಾಲ್ಯ ವಿವಾಹದ ಪಿಡುಗು ಹೋಗಲಾಡಿಸಲು ಸಾಧ್ಯ, ಬಾಲ್ಯ ವಿವಾಹವಾದಲ್ಲೀ ಹೆಣ್ಣು ಮಕ್ಕಳ ವೈಯ್ಯಕ್ತಿಕ ಬದುಕನ್ನೇ ಕಿತ್ತುಕೊಂಡಂತೆ ಆಗುತ್ತದೆ, ಬಾಲ್ಯವಿವಾಹ ಮರುಕಳಿಸುವಲ್ಲೀ ಜಾಗೃತಿಯ ಕೊರತೆ ಎದ್ದುಕಾಣುತ್ತದೆ, ಕಳೆದ ವರ್ಷ ಜಿಲ್ಲೆಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು, ಅದರ ನಿರ್ಮೂಲನೆಗೆ ಶಿಕ್ಷಣವೇ ಏಕೈಕ ಮದ್ದು, ಜಿಲ್ಲಾದ್ಯಂತ ಈ ವಾಹನ ಚಲಿಸಲಿದ್ದು, ಜಾಗೃತಿ ಮೂಡಿಸಲಿದೆ ಎಂದು ಹೇಳಿದರು. 

 ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ, ಸಾಮಾಜಿಕ ಮಾಧ್ಯಮಗಳು ಉತ್ತುಂಗ ಸ್ಥಿತಿಯಲ್ಲಿರುವ ಇಂತಹ ಕಾಲಘಟ್ಟದಲ್ಲೂ ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವ ಬಾಲ್ಯ ವಿವಾಹದ ಕುರಿತು ಜಗೃತಿ ಮೂಡಿಸುವ ಅಗತ್ಯವಿದೆ ಎಂದರೆ ಅದು ಸಮಾಜದಲ್ಲಿ ಅತಿ ದೊಡ್ಡ ಪಿಡುಗು ಎಂದರು.

   ಇಂದು ಚಾಲನೆ ನೀಡಲಾದ ವಾಹನ ಜಿಲ್ಲೆಯ 52 ಕಡೆ ಸಂಚರಿಸಲಿದೆ, ಐಇಸಿ ಚಟುವಟಿಕೆಗಳ ಮೂಲಕ ಅರಿವು ಮೂಡಿಸಲಿದೆ ಎಂದರು.

ಬಾಲ್ಯ ವಿವಾಹ ಅಪರಾಧ, ಅದಕ್ಕೆ ಸಹಾಯ ಮಾಡುವುದು ಅಪರಾಧ, ಅದರ ಪ್ರಯತ್ನವೂ ಅಪರಾಧ, ಅದು ಕಾನೂನಿನ ಉಲ್ಲಂಘನೆ, ಅದಕ್ಕೆ ಕ್ರಿಮಿನಲ್ ಪ್ರಕರಣ ದಾಖಲು ಮಾಡಲಾಗುವುದು ಎಂಬ ಮಾಹಿತಿ ಪ್ರತಿಯೊಬ್ಬರಿಗೂ ತಲುಪಬೇಕು, ಜಿಲ್ಲೆಯ ಪ್ರತಿಯೊಂದು ಶಾಲೆಯ ಹಣ್ಣು ಮಕ್ಕಳಿಗೂ ಮಹಿಳಾ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು, ಪ್ರತಿಯೊಂದು ಶಾಲೆಯ ಮುಖ್ಯೋಪಧ್ಯಾಯರೂ ಕೂಡ ಮಕ್ಕಳ ರಕ್ಷಣಾಧಿಕಾರಿಯಾಗಿ ಕೆಲಸ ಮಾಡಬೇಕು, ಹೆಣ್ಣು ಮಕ್ಕಳು ಶಾಲೆಗೆ ಗೈರಾದರೆ ಅದಕ್ಕೆ ನೈಜಕಾರಣಗಳ ಪತ್ತೆ ಮಾಡಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್ ಮಾತನಾಡಿದರು.

ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪಾಪಬೋವಿ ವೇದಿಕೆಯಲ್ಲಿದ್ದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಿಡಿಪಿಒಗಳು, ವಿವಿಧ ಶಾಲೆಗಳ ಮಕ್ಕಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರತಿಜ್ಞಾ ವಿಧಿ ಬೋಧಿಸಿದರು. ಬಾಲ್ಯವಿವಾಹ ನಿಷೇಧ ಸಹಿ ಸಂಗ್ರಹ ಅಭಿಯಾನಕ್ಕೆ ನೆರೆದ ಗಣ್ಯರು ಸಹಿ ಮಾಡಿದರು.

ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಾಥಾದ ಮೂಲಕ ತೆರಳಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಿಡಿಯೋ ಆನ್‍ವಿಲ್ಸ್ ವಾಹನದ ಮುಖಾಂತರ ಬಾಲ್ಯವಿವಾಹ ನಿಷೇಧ ಅಭಿಯಾನ ಮೂಡಿಸಲಾಗುತ್ತಿದೆ. ಈ ಅಭಿಯಾನವು ಜಿಲ್ಲೆಯ 19 ಹೋಬಳಿಗಳಲ್ಲಿ 45 ಹಳ್ಳಿಗಳಲ್ಲಿ 9 ದಿನಗಳ ಕಾಲ ಸಂಚರಿಸಿ ಅರಿವು ಮೂಡಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X