ಪುತ್ತೂರು: ಬೆಂಕಿ ತಗುಲಿ ಗಂಭೀರಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು

ಸಾಂದರ್ಭಿಕ ಚಿತ್ರ
ಪುತ್ತೂರು: ಅಡುಗೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅಕಸ್ಮಾತ್ ಆಗಿ ತೊಟ್ಟಿದ್ದ ನೈಟಿಗೆ ಬೆಂಕಿ ಹತ್ತಿಕೊಂಡು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ರವಿವಾರ ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ಕಬಕ ಗ್ರಾಮದ ಪೆರಿಯತ್ತೋಡಿ ನಿವಾಸಿ ದಿ. ರಾಮಣ್ಣ ಎಂಬವರ ಪತ್ನಿ ಕಮಲ(59) ಮೃತಪಟ್ಟ ಮಹಿಳೆ. ಮಾ.4ರಂದು ಮದ್ಯಾಹ್ನ ತನ್ನ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಅವರು ತೊಟ್ಟಿದ್ದ ನೈಟಿಗೆ ಬೆಂಕಿ ತಗುಲಿ ಗಂಬೀರ ಗಾಯಗೊಂಡಿದ್ದರು. ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಸಾವನ್ನಪ್ಪಿದ್ದಾರೆ.
ಮೃತರು ನಾಲ್ವರು ಪುತ್ರರನ್ನು ಅಗಲಿದ್ದಾರೆ.
Next Story





