ಕುಂದಾಪುರ: ಕಾರು -ಸೈಕಲ್ ಢಿಕ್ಕಿ; ಸವಾರ ಮೃತ್ಯು
ಕುಂದಾಪುರ, ಮಾ.6: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟ ಘಟನೆ ಮಾ.6ರಂದು ಬೆಳಗ್ಗೆ 9.20ರ ಸುಮಾರಿಗೆ ಆನೆಗಳ್ಳಿ ಗ್ರಾಮದ ಹೇರಿಕುದ್ರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಶ್ರೀಧರ್ ಮಯ್ಯ ಎಂದು ಗುರುತಿಸಲಾಗಿದೆ. ತಲ್ಲೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು, ಅದೇ ದಿಕ್ಕಿನಲ್ಲಿ ಸಾಗುತ್ತಿದ್ದ ಸೈಕಲ್‌ಗೆ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ತಲೆಗೆ ಗಂಭೀರ ಗಾಯಗೊಂಡ ಶ್ರೀಧರ್ ಮಯ್ಯ, ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story