ಕೊಳ್ಳೇಗಾಲ: ಪ್ರೀತಿ ನಿರಾಕರಿಸಿದ್ದಕ್ಕೆ ಆ್ಯಸಿಡ್ ಹಾಕುವ ಬೆದರಿಕೆ; ಇಬ್ಬರು ಯುವಕರ ವಿರುದ್ಧ ಪ್ರಕರಣ ದಾಖಲು

ಕೊಳ್ಳೇಗಾಲ. ಮಾ.6. ಪ್ರೀತಿಸದಿದ್ದರೆ ಆ್ಯಸಿಡ್ ಹಾಕುವುದಾಗಿ ಯುವತಿಯೋರ್ವಳಿಗೆ ಬೆದರಿಕೆ ಹಾಕಿದ್ದ ಇಬ್ಬರು ಯುವಕರ ಮೇಲೆ ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ತಾಲೂಕಿನ ಜಾಗೇರಿ ಗ್ರಾಮದ ಸಮೀಪದ ಚೆನ್ನಿಪುರ ದೊಡ್ಡಿಯ ಕಿರಣ್ ಮತ್ತು ಗಂಗಾಧರ್ ಆರೋಪಿಗಳು ಎಂದು ತಿಳಿದುಬಂದಿದೆ.
ಕೆಲ ದಿನಗಳ ಹಿಂದೆ ಕಿರಣ್, ತನ್ನ ಸ್ನೇಹಿತ ಗಂಗಾಧರ್ ಜೊತೆಗೂಡಿ ಪ್ರಥಮ ಬಿಕಾಂ ಓದುತ್ತಿದ್ದ ಯುವತಿಗೆ ಪ್ರೀತಿಸುವಂತೆ ಒತ್ತಾಯಿಸಿದ್ದು, ಒಪ್ಪಿಕೊಳ್ಳದಿದ್ದರೆ ಆ್ಯಸಿಡ್ ಹಾಕುವುದಾಗಿ ಬೆದರಿಸಿದ್ದರು. ಇದರಿಂದ ಹೆದರಿದ ಯುವತಿ ಆತ್ಮ ಹತ್ಯೆಗೆ ಪ್ರಯತ್ನಿಸಿದ್ದಳು ಎನ್ನಲಾಗಿದೆ.
ಈ ಬಗ್ಗೆ ಸಂತ್ರಸ್ತೆ ಯುವತಿಯ ತಾಯಿ ಕೊಳ್ಳೇಗಾಲ ಗ್ರಾಮಾಂತರ ಠಾಣಾ ಪೊಲೀಸರಿಗೆ ದೂರು ನೀಡದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪಿಎಸ್ಐ ಮಂಜುನಾಥ್ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
Next Story





