Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಲ್ಯವಿವಾಹ ಮಾಡಿದಲ್ಲಿ ತಾವೇ...

ಬಾಲ್ಯವಿವಾಹ ಮಾಡಿದಲ್ಲಿ ತಾವೇ ಪ್ರತಿಭಟನೆಗೆ ಮುಂದಾಗಿ: ಸಚಿವ ಬಿ.ಸಿ.ಪಾಟೀಲ್ ಸಲಹೆ

ಬಾಲ್ಯವಿವಾಹ ನಿಷೇಧ ಕುರಿತು ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ6 March 2022 11:24 PM IST
share
ಬಾಲ್ಯವಿವಾಹ ಮಾಡಿದಲ್ಲಿ ತಾವೇ ಪ್ರತಿಭಟನೆಗೆ ಮುಂದಾಗಿ: ಸಚಿವ ಬಿ.ಸಿ.ಪಾಟೀಲ್ ಸಲಹೆ

ಚಿತ್ರದುರ್ಗ, ಮಾ.6: ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ಒತ್ತಾಯಪೂರ್ವಕವಾಗಿ ಬಾಲ್ಯವಿವಾಹಕ್ಕೆ ಮುಂದಾದರೆ ತಾವೇ ಪ್ರತಿಭಟನೆಗೆ ಮುಂದಾಗಬೇಕು ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಸಲಹೆ ನೀಡಿದ್ದಾರೆ.

ನಗರದ ಚಿತ್ರಾ ಡಾನ್ ಬೋಸ್ಕೋ ಸಂಸ್ಥೆಯಲ್ಲಿ ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಚಿತ್ರಾ ಡಾನ್ ಬೋಸ್ಕೋ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಾಲ್ಯವಿವಾಹ ನಿಷೇಧ ಕುರಿತು ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

18 ವರ್ಷದೊಳಗೆ ವಿವಾಹ ಮಾಡುವುದು ಅಪರಾಧ. ಕೇಂದ್ರ ಸರ್ಕಾರ ಇದನ್ನು 21 ವರ್ಷಕ್ಕೆ ಹೆಚ್ಚಿಸಬೇಕೆಂದು ಕಾಯ್ದೆಯನ್ನು ಅನುಮೋದಿಸಿದ್ದು, ನಿಯಮಗಳು ಜಾರಿಯಾಗಬೇಕು. 21 ವರ್ಷದ ವೇಳೆಗೆ ಅವರ ಶೈಕ್ಷಣಿಕಯಾಗಿ ಪದವಿ ಪೂರ್ಣಗೊಳಿಸಲು ಸಾಧ್ಯವಾಗಲಿದೆ. ಜೊತೆಗೆ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗುತ್ತಾರೆ ಎಂದರು.

ಬಾಲ್ಯವಿವಾಹ ನಿಷೇಧ ಕುರಿತು ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ವಿನೂತನ ಕಾರ್ಯಕ್ರಮವಾಗಿದ್ದು, ನಮ್ಮಲ್ಲಿ ಎಚ್ಚರಿಕೆ ಹಾಗೂ ಪ್ರಜ್ಞೆ ಮೂಡಿಸುವ ಕಾರ್ಯಕ್ರಮವಾಗಿದೆ. ಕಾಯ್ದೆ, ಕಾನೂನು ಇದ್ದರೂ ಸಹ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಕ್ರಮ ಆಯೋಜನೆ ಮಾಡಿದೆ ಎಂದರು.

ಬಾಲ್ಯವಿವಾಹ ಅಪರಾಧ ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಆದಾಗ್ಯೂ ತಂದೆ-ತಾಯಿಗಳು ಬಾಲ್ಯವಿವಾಹವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಆದರೆ ಸಮಾಜ ಹಾಗೂ ಮಕ್ಕಳ ಆರೋಗ್ಯದ ಹಿತದೃಷ್ಠಿಯಿಂದ, ಸಂಸಾರ ಬಗ್ಗೆ ಅರಿವಿಲ್ಲದೇ, ಮಕ್ಕಳ ಪಾಲನೆ ಪೋಷಣೆ ಅರಿವಿಲ್ಲದೇ, ಸಮಾಜ, ಸಂಸಾರವನ್ನು ತಿಳಿದುಕೊಳ್ಳದೇ ಇರುವ ವಯಸ್ಸಿನಲ್ಲಿ ಸಂಸಾರ ಮಾಡುವುದು ಘೋರ ಅಪರಾಧವಾಗಿದೆ. ಈ ಹಿನ್ನಲೆಯಲ್ಲಿ ಬಾಲ್ಯವಿವಾಹ ನಿಷೇಧದ ಕುರಿತು ಜನಜಾಗೃತಿ ಮೂಡಿಸುವುದು ಬಹಳ ಉಪಯುಕ್ತವಾದುದು. ಬಾಲ್ಯವಿವಾಹ ನಿಷೇಧ ಕುರಿತು ಹೆಚ್ಚಿನ ಜನ ಜಾಗೃತಿ ಮೂಡಿಸುವುದರಿಂದ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಬಹುದು ಎಂದು ಹೇಳಿದರು.

 ಬಾಲ್ಯವಿವಾಹ ನಿಷೇಧ ಅಭಿಯಾನ ರಥಕ್ಕೆ ಚಾಲನೆ:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಾಲ್ಯವಿವಾಹ ನಿಷೇಧ ಅಭಿಯಾನದ ರಥಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಬಾಲ್ಯ ವಿವಾಹ ನಿಷೇಧ ಅಭಿಯಾನದ ಎಲ್‍ಇಡಿ ರಥವು ಮಾರ್ಚ್ 06 ರಿಂದ ಮಾರ್ಚ್ 23 ರವರೆಗೆ ಜಿಲ್ಲೆಯ ಆಯ್ದ 90 ಗ್ರಾಮಗಳಲ್ಲಿ ಸಂಚರಿಸಲಿದೆ.  ಮಾರ್ಚ್ 06 ರಿಂದ 8 ರವರೆಗೆ ಚಿತ್ರದುರ್ಗ ತಾಲ್ಲೂಕು ಪ್ರತಿ ನಿತ್ಯ ಐದು ಗ್ರಾಮಗಳಲ್ಲಿ ಸಂಚರಿಸಲಿದೆ. ಮಾರ್ಚ್ 09 ರಿಂದ 11 ರವರೆಗೆ ಚಳ್ಳಕೆರೆ ತಾಲ್ಲೂಕು, ಮಾರ್ಚ್ 12 ರಿಂದ 14ರವರೆಗೆ ಹಿರಿಯೂರು ತಾಲ್ಲೂಕು, ಮಾರ್ಚ್ 15 ರಿಂದ 17 ರವರೆಗೆ ಹೊಳಲ್ಕೆರೆ ತಾಲ್ಲೂಕು, ಮಾರ್ಚ್ 18 ರಿಂದ 20 ರವರೆಗೆ ಹೊಸದುರ್ಗ ತಾಲೂಕು ಹಾಗೂ ಮಾರ್ಚ್ 21 ರಿಂದ 23 ರವರೆಗೆ ಮೊಳಕಾಲ್ಮುರು ತಾಲೂಕುಗಳಲ್ಲಿ ಸಂಚರಿಸಿ, ಜಾಗೃತಿ ಮೂಡಿಸಲಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಸ್.ರಾಜಾನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪಿ.ಲೋಕೇಶ್ವರಪ್ಪ, ಚಿತ್ರಾ ಡಾನ್ ಬೋಸ್ಕೋ ನಿದೇಶಕ ಫಾದರ್ ಜೋಸೆಫ್ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X