Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ’...

12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ’ ಸಮಾವೇಶಕ್ಕೆ ಚಾಲನೆ

ಉಜ್ವಲ ಭವಿಷ್ಯಕ್ಕೆ ನ್ಯಾನೋ ತಂತ್ರಜ್ಞಾನ ನಿರ್ಣಾಯಕ: ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ7 March 2022 3:10 PM IST
share
12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ’ ಸಮಾವೇಶಕ್ಕೆ ಚಾಲನೆ

ಬೆಂಗಳೂರು, ಮಾ.7: ನ್ಯಾನೋ ತಂತ್ರಜ್ಞಾನದ ಮೂಲಕ ತಯಾರಿಸಿರುವ ನ್ಯಾನೋ ಯೂರಿಯಾ ರಸಗೊಬ್ಬರವು ಪರೀಕ್ಷಾ ಹಂತದಲ್ಲಿ ಯಶಸ್ವಿಯಾಗಿದ್ದು, ಇದು ಮುಂಬರುವ ದಿನಗಳಲ್ಲಿ ರೈತರ ಬದುಕನ್ನು ಹಸನಾಗಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವರ್ಚುಯಲ್ ಮಾದರಿಯಲ್ಲಿ ಏರ್ಪಡಿಸಿರುವ ಮೂರು ದಿನಗಳ 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ ಸಮಾವೇಶ'ವನ್ನು ಸೋಮವಾರ ಉದ್ಘಾಟಿಸಿ, ಅವರು ಮಾತನಾಡುತ್ತಿದ್ದರು.

`ನ್ಯಾನೋ ಯೂರಿಯಾವನ್ನು ರಾಜ್ಯದ ಎಲ್ಲ ಕೃಷಿ ವಿ.ವಿ.ಗಳಲ್ಲಿ ಈಗಾಗಲೇ ಪರೀಕ್ಷೆಗೆ ಒಳಪಡಿಸಲಾಗಿದ್ದು, ಒಳ್ಳೆಯ ಫಲಿತಾಂಶ ಬಂದಿದೆ. ಇದು ಮುಂಬರುವ ದಿನಗಳಲ್ಲಿ ಕೃಷಿಕರ ಅವಿಭಾಜ್ಯ ಅಂಗವಾಗಲಿದ್ದು, ನ್ಯಾನೋ ತಂತ್ರಜ್ಞಾನವು ಬದುಕಿನಲ್ಲಿ ಮಹತ್ತರ ಬದಲಾವಣೆಗಳನ್ನು ತರಲಿದೆ. ವಿಜ್ಞಾನ ಮತ್ತು ತಂತ್ರಜ್ಞಾನಗಳ ಮೂಲಕ ಜನಜೀವನವನ್ನು ಸುಧಾರಿಸಬೇಕು ಎನ್ನುವುದು ಪ್ರಧಾನಿ ಮೋದಿಯವರ ಕನಸೂ ಆಗಿದೆ' ಎಂದು ಅವರು ನುಡಿದರು.

ಹೀಗಾಗಿ, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಬೆಂಗಳೂರು ನಗರವು `ನ್ಯಾನೋ ತಂತ್ರಜ್ಞಾನದ ತೊಟ್ಟಿಲು' ಕೂಡ ಆಗಬೇಕು. ಇದಕ್ಕೆ ಸರಕಾರವು ಸಂಪೂರ್ಣ ಸಹಕಾರ ನೀಡಲಿದ್ದು, ಅಗತ್ಯ ನೀತಿಗಳನ್ನು ರೂಪಿಸಲಿದೆ ಎಂದು ಅವರು ಆಶ್ವಾಸನೆ ನೀಡಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, `ಸರಕಾರವು ಸದ್ಯದಲ್ಲೇ ಸಮಗ್ರ ನ್ಯಾನೋ ತಂತ್ರಜ್ಞಾನ ನೀತಿಯನ್ನು ಹೊರತರಲಿದೆ. ಈ ಮೂಲಕ ಸಂಶೋಧನಾ ಮತ್ತು ಔದ್ಯಮಿಕ ವಲಯಗಳೆರಡನ್ನೂ ಪರಸ್ಪರ ಹತ್ತಿರಕ್ಕೆ ತರಲಾಗುವುದು. ಇದರಿಂದಾಗಿ, ನ್ಯಾನೋ ತಂತ್ರಜ್ಞಾನದ ಲಾಭವು ಸಮಾಜಕ್ಕೆ ಸಿಗಲಿದೆ’ ಎಂದರು.

ಸರಕಾರದ ನ್ಯಾನೋ ತಂತ್ರಜ್ಞಾನ ವಿಷನ್ ಗ್ರೂಪ್ ಮುಖ್ಯಸ್ಥ ಪ್ರೊ.ನವಕಾಂತ ಭಟ್ ಮಾತನಾಡಿ, `ಇದು ಕೇವಲ ದೇಶದ ಸ್ವಾತಂತ್ರ್ಯದ 75ನೇ ವರ್ಷವಷ್ಟೆ ಅಲ್ಲ, ನಮ್ಮಲ್ಲಿ ಸೆಮಿಕಂಡಕ್ಟರ್ ಟ್ರಾನ್ಸಿಸ್ಟರ್ ಬಂದ 75ನೇ ವರ್ಷವೂ ಆಗಿದೆ. ಹೀಗಾಗಿ ಇಂದು ನಮ್ಮಲ್ಲಿ ಮನುಷ್ಯನ ಮಿದುಳಿನಿಂದ ಸ್ಫೂರ್ತಿ ಪಡೆದ ಕಂಪ್ಯೂಟರ್ ವಿಜ್ಞಾನ ಬರುತ್ತಿದೆ,’ ಎಂದರು.

ಕಾರ್ಯಕ್ರಮದಲ್ಲಿ ತಂಜಾವೂರಿನ `ಶಾಸ್ತ್ರ ವೈಜ್ಞಾನಿಕ ಅಧ್ಯಯನ ಕೇಂದ್ರ’ದ ಹಿರಿಯ ವಿಜ್ಞಾನಿ ಡಾ.ಎಸ್. ಸ್ವಾಮಿನಾಥನ್ ಅವರಿಗೆ ಪ್ರತಿಷ್ಠಿತ `ಸಿಎನ್ಆರ್ ರಾವ್ ವಿಜ್ಞಾನ ಪ್ರಶಸ್ತಿ’ಯನ್ನು ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ಸಮ್ಮೇಳನದ ಕಾರ್ಯಕಾರಿ ಸಮಿತಿ ಮುಖ್ಯಸ್ಥ ಪ್ರೊ.ಅಜಯಕುಮಾರ್ ಸೂದ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಕೆಸ್ಟೆಪ್ಸ್ ವ್ಯವಸ್ಥಾಪಕ ನಿರ್ದೇಶಕ ಎ.ಬಿ.ಬಸವರಾಜು ಇದ್ದರು.

ಕೇಂದ್ರ ಸಚಿವ ಡಾ.ಸಿಎನ್ಆರ್ ರಾವ್ ವರ್ಚುಯಲ್ ರೂಪದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X