Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯುವ ಸಮುದಾಯದಿಂದ ದೇಶದ ಅಭಿವೃದ್ಧಿ...

ಯುವ ಸಮುದಾಯದಿಂದ ದೇಶದ ಅಭಿವೃದ್ಧಿ ಸಾಧ್ಯ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ7 March 2022 8:28 PM IST
share
ಯುವ ಸಮುದಾಯದಿಂದ ದೇಶದ ಅಭಿವೃದ್ಧಿ ಸಾಧ್ಯ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಮಾ.7: ರಾಷ್ಟ್ರದ ಅಭಿವೃದ್ಧಿಯಲ್ಲಿ ಯುವ ಸಮುದಾಯ ಹಾಗೂ ಯುವಕ ಹಾಗೂ ಯುವತಿ ಮಂಡಲಗಳ ಪಾತ್ರ ಬಹು ಮುಖ್ಯವಾಗಿದ್ದು, ವಿವೇಕಾನಂದರ ನುಡಿಯಂತೆ ಯುವ ಜನತೆಯಿಂದ ಸದೃಢ ಭಾರತ ನಿರ್ಮಾಣ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದ್ದಾರೆ.

ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಆಡಿಟೋರಿಯಂನಲ್ಲಿ, ನೆಹರು ಯುವ ಕೇಂದ್ರ ಉಡುಪಿ ಜಿಲ್ಲೆ ನೇತೃತ್ವದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೂರ್ಣಪ್ರಜ್ಞ ಕಾಲೇಜು ಉಡುಪಿ, ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಹಾಗೂ ಉಡುಪಿ ಜಿಲ್ಲೆಯ ಯುವಕ, ಯುವತಿ ಮತ್ತು ಮಹಿಳಾ ಮಂಡಲಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಯುವ ಸಮುದಾಯದಿಂದ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯವಿದೆ. ಜಿಲ್ಲೆಯ ಅಭಿವೃದ್ಧಿಗಾಗಿ ಜಿಲ್ಲಾಡಳಿತ ಕೈಗೊಳ್ಳುವ ಕಾರ್ಯಗಳಿಗೆ ಯುವಜನತೆ ಸದಾಕಾಲ ಉತ್ತಮ ಬೆಂಬಲ ಮತ್ತು ಸಹಕಾರ ನೀಡುತ್ತಿದ್ದು, ಜಿಲ್ಲೆಯ ಯುವಕ ಯುವತಿ ಮಂಡಲಗಳು ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿ ಕೊಂಡು ಎಲ್ಲರಿಗೂ ಮಾದರಿಯಾಗಿವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಿಪಿಸಿ ಕಾಲೇಜಿನ ಪ್ರಾಂಶುಪಾಲ ಡಾ. ರಾಘವೇಂದ್ರ ಭಟ್ ಮಾತನಾಡಿ, ನೆಹರು ಯುವ ಕೇಂದ್ರದ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿವೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿ ಪಡೆದ ಹೆಬ್ರಿಯ ಶಾಂತಿನಿಕೇತನ ಯುವ ವೃಂದ ಕುಡಿಬೈಲು, ಕುಚ್ಚೂರು ಸಂಸ್ಥೆಗೆ 75,000 ರೂ.ಗಳ ನಗದು ಸಹಿತ ಸ್ಮರಣಿಕೆ ನೀಡಿ ಗೌರವಿಸಲಾಯಿತು. 

ಕ್ಲೀನ್ ಇಂಡಿಯಾ ಅಭಿಯಾನದಲ್ಲಿ ಅತ್ಯುತ್ತಮ ನಿರ್ವಹಣೆ ತೋರಿದ ಜಿಲ್ಲೆಯ 3 ಯುವಕ ಸಂಘಗಳಿಗೆ ಪ್ರಶಸ್ತಿ ಪತ್ರ ಮತ್ತು ಆಯ್ದ ಯುವಕ-ಯುವತಿ ಸಂಘಗಳಿಗೆ ಕ್ರೀಡಾ ಸಾಮಗ್ರಿಯನ್ನು ವಿತರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ವಿನಯ್, ಸಂಪನ್ಮೂಲ ವ್ಯಕ್ತಿಗಳಾದ ಡಾ.ಪಿ.ವಿ.ಭಂಡಾರಿ, ರಾಯನ್ ಮಥಾಯಸ್, ಪ್ರಶಾಂತ್ ನೀಲಾವರ, ನಿತ್ಯಾನಂದ ಭಟ್ ಉಪಸ್ಥಿತರಿದ್ದರು.

ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ವಿಲ್ಫ್ರೆಡ್ ಡಿಸೋಜ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ನೆಹರು ಯುವ ಕೇಂದ್ರದ ಲೆಕ್ಕಾಧಿಕಾರಿ ವಿಷ್ಣುಮೂರ್ತಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X