ಮಾ.8: ಉತ್ಪನ್ನಗಳ ಪ್ರದರ್ಶನ-ಮಾರಾಟ
ಮಂಗಳೂರು, ಮಾ.7: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ 'ಮೈ ಲಡ್ಕಿ ಹೂಂ, ಲಡ್ ಸಖ್ತಿ ಹೂಂ' ಎನ್ನುವ ಘೋಷಣೆಯೊಂದಿಗೆ ಸ್ವ-ಉದ್ಯೋಗವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಾ.8ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕದ್ರಿ ಮಲ್ಲಿಕಟ್ಟೆಯ ಲಯನ್ಸ್ ಕ್ಲಬ್ ಹಾಲ್ನಲ್ಲಿ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ ತಿಳಿಸಿದ್ದಾರೆ.
Next Story