Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ; ಪೋಕ್ಸೋ ಪ್ರಕರಣದ ಆರೋಪಿಗೆ 10...

ಉಡುಪಿ; ಪೋಕ್ಸೋ ಪ್ರಕರಣದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ7 March 2022 9:54 PM IST
share
ಉಡುಪಿ; ಪೋಕ್ಸೋ ಪ್ರಕರಣದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಉಡುಪಿ, ಮಾ.7: ಏಳು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿ ಮಗುವಿನ ಜನ್ಮ ನೀಡುವಂತೆ ಮಾಡಿರುವ ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಇಂದು 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಬಾಗಲಕೋಟೆಯ ಮಲ್ಲಪ್ಪ ಸಿದ್ದಪ್ಪ ಚಲವಾದಿ (45) ಶಿಕ್ಷೆಗೆ ಗುರಿಯಾಗಿರುವ ಆರೋಪಿ.

2015ರಲ್ಲಿ ಉಡುಪಿಯ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಮಲ್ಲಪ್ಪ, ಅಪ್ರಾಪ್ತೆಯನ್ನು ಪುಸಲಾಯಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಇದರಿಂದ ಆಕೆ ಗರ್ಭಿಣಿ ಯಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದರು ಎಂದು ದೂರಲಾಗಿದೆ.

ಬಳಿಕ ಆರೋಪಿ ಆಕೆಯನ್ನು ಗೋವಾ ಮುಂತಾದ ಕಡೆಗಳಿಗೆ ಕರೆದುಕೊಂಡು ಹೋಗಿ ನಂತರ ಆಕೆ ಮತ್ತು ಮಗುವನ್ನು ಬಾಗಲಕೋಟೆಯಲ್ಲಿ ಬಿಟ್ಟು ತಲೆ ಮರೆಸಿಕೊಂಡಿದ್ದನು. ಈ ವಿಚಾರ ತಿಳಿದ ಬಾಗಲಕೋಟೆಯ ಮಹಿಳಾ ರಕ್ಷಣಾ ಘಟಕವು ಕೂಡಗಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿತು.

ಈ ಪ್ರಕರಣವು ಸ್ಥಳದ ಆಧಾರದ ಮೇಲೆ ಉಡುಪಿ ಮಹಿಳಾ ಠಾಣೆಗೆ ವರ್ಗಾವಣೆಗೊಂಡಿದ್ದು, ಪ್ರಕರಣದ ತನಿಖೆ ಮುಂದುವರೆಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಿನ ಪೊಲೀಸ್ ನಿರೀಕ್ಷಕ ನವೀನ್‌ ಚಂದ್ರ ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಒಟ್ಟು 43 ಸಾಕ್ಷಿದಾರರ ಪೈಕಿ 18 ಮಂದಿಯ ವಿಚಾರಣೆ ನಡೆಸಲಾಗಿತ್ತು. ಸಂತ್ರಸ್ತೆ ಯುವತಿ ಸಹಿತ ಪ್ರಮುಖ ಸಾಕ್ಷಿಗಳು ಅಭಿಯೋಜನೆಗೆ ಪರ ಸಾಕ್ಷಿ ನುಡಿದಿದ್ದವು.

ನೊಂದ ಬಾಲಕಿ ಮತ್ತು ಆರೋಪಿ ಹಾಗೂ ಆಕೆಗೆ ಜನಿಸಿದ ಮಗುವಿನ ಡಿಎನ್‌ಎ ವರದಿ ಕೂಡ ಅಭಿಯೋಜನೆಗೆ ಪೂರಕವಾಗಿದ್ದು, ಅದರಂತೆ ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟ ನ್ಯಾಯಾಧೀಶೆ ಎರ್ಮಾಳ್ ಕಲ್ಪನಾ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 5ಸಾವಿರ ರೂ. ದಂಡ ವಿಧಿಸಿದೆ.

ದಂಡ ಪಾವತಿಸಲು ತಪ್ಪಿದಲ್ಲಿ ಆರು ತಿಂಗಳ ಸಜೆ ವಿಧಿಸಲಾಗಿದೆ. ನೊಂದ ಬಾಲಕಿಗೆ ಪರಿಹಾರ 5 ಲಕ್ಷ ರೂ. ನೀಡುವಂತೆ ನ್ಯಾಯಾಲಯ ಆದೇಶ ನೀಡಿದೆ. ಉಡುಪಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಅಭಿಯೋಜನೆ ಪರವಾಗಿ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X