Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೆಡಿಎಸ್ ವಿರುದ್ಧ ಕಾಂಗ್ರೆಸ್, ಬಿಜೆಪಿ...

ಜೆಡಿಎಸ್ ವಿರುದ್ಧ ಕಾಂಗ್ರೆಸ್, ಬಿಜೆಪಿ ಪಕ್ಷಗಳು ಸುಳ್ಳು ಹರಡುತ್ತಿವೆ: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ7 March 2022 11:14 PM IST
share
ಜೆಡಿಎಸ್ ವಿರುದ್ಧ ಕಾಂಗ್ರೆಸ್, ಬಿಜೆಪಿ ಪಕ್ಷಗಳು ಸುಳ್ಳು ಹರಡುತ್ತಿವೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಮಾ.7: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಚುನಾವಣೆ ಮೈತ್ರಿ ಇಲ್ಲ ಎಂದು ಪುನರುಚ್ಚರಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾತ್ರಿ ಕಂಡ ಬಾವಿಗೆ ಹಗಲು ಬೀಳಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಸೋಮವಾರ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಏನು ಸಾಧನೆ ಮಾಡಿದೆ ಎಂದು ಅವರ ಜತೆ ಕೈಜೋಡಿಸಲಿ? ರಾಜ್ಯಕ್ಕೆ ಬಿಜೆಪಿ ಕೊಟ್ಟ ಕೊಡುಗೆ ಏನು? ಮುಂದಿನ ಚುನಾವಣೆಯನ್ನ ಸ್ವತಂತ್ರವಾಗಿ ಎದುರಿಸುತ್ತೇವೆ. ಕಾಂಗ್ರೆಸ್, ಬಿಜೆಪಿಗಿಂತ ಹೆಚ್ಚಿನ ಸ್ಥಾನ ಪಡೆಯುತ್ತೇವೆ. ಅವರಿಗಿಂತ ಜೆಡಿಎಸ್ ಪಕ್ಷ ಒಂದು ಕೈ ಮೇಲುಗೈ ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಚುನಾವಣೆ ವಾತಾವರಣ ನಿರ್ಮಾಣ ಆಗುತ್ತಿದೆ. ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಕಾಂಗ್ರೆಸ್ ಹಾಗೂ ಬಿಜೆಪಿ ಜೊತೆ ಹೊಂದಾಣಿಕೆ ಪ್ರಶ್ನೆ ಇಲ್ಲ. ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸಲು ಬಿಜೆಪಿ ಹಾಗೂ ಕಾಂಗ್ರೆಸ್ ಈ ರೀತಿಯ ಸುದ್ದಿ ಹರಡಿಸಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ನಮ್ಮ ಪಕ್ಷದ ಬಗ್ಗೆ ಜನಸಾಮಾನ್ಯರಲ್ಲಿ ಗೊಂದಲ ಸೃಷ್ಟಿ ಮಾಡಲು ಈ ಸುದ್ದಿ ಹರಡಿಸುತ್ತಿವೆ ಎಂದು ಅವರು ದೂರಿದರು.

ನಿನ್ನೆ ದಿನ ಕಲಬುರ್ಗಿಯಲ್ಲಿ ಈ ಬಗ್ಗೆ ಸ್ಪಷ್ಟವಾಗಿ ಹೇಳಿದ್ದೇನೆ. ನಾನು ರೈಟು, ಲೆಫ್ಟು ಇಲ್ಲ. ಸ್ಟ್ರೈಟ್ ಎನ್ನುವುದು ನಮ್ಮ ನಿಲುವು ಎಂದು. ಹೀಗಾಗಿ ಹೊಂದಾಣಿಕೆ ಪ್ರಶ್ನೆ ಇಲ್ಲ. ಹೊಂದಾಣಿಕೆ ಸಲುವಾಗಿ ನಾವು ಯಾರ ಮನೆ ಬಾಗಿಲಿಗೂ ಹೋಗಿಲ್ಲ ಎಂದು ಅವರು ನೇರ ಮಾತುಗಳಲ್ಲಿ ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ತರಾಟೆ: ಮೇಕೆದಾಟು ಪಾದಯಾತ್ರೆ ಮಾಡಿ 1,000 ಕೋಟಿ ರೂ.ಹಣದ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕರು, ಕೇಂದ್ರ ಜಲ ಸಂಪನ್ಮೂಲ ಸಚಿವರ ಹೇಳಿಕೆ ಬಗ್ಗೆ ಏನು ಹೇಳುತ್ತಾರೆ? ಆ ಪಾದಯಾತ್ರೆಯ ಹಣೆಬರಹ ಎಲ್ಲಿಗೆ ಬಂದಿದೆ ಈಗ ಅನ್ನುವುದು ಎಲ್ಲರಿಗೂ ಗೊತ್ತಾಗಿದೆ ಎಂದು ಅವರು ಹೇಳಿದರು.

ಹತ್ತು ದಿನಗಳ ಕಾಲ ಭರ್ಜರಿ ಮೃಷ್ಟಾನ್ನ ಭೋಜನ, ಭೂರಿ ಭೋಜನಾ ತಿಂದು ಪಾದಯಾತ್ರೆ ಮಾಡಿದ್ದೇ ಇವರ ಸಾಧನೆ. ಬಜೆಟ್‍ನಲ್ಲಿ ಒಂದು ಸಾವಿರ ಕೋಟಿ ತಗೊಂಡು ಏನು ಮಾಡುತಾರೆ? ಈ ಸಾವಿರ ಕೋಟಿಯಲ್ಲಿ ಕೆಲಸ ಮಾಡಲು ಸಾಧ್ಯವೇ? ನಾಳೆ ಬೆಳಗ್ಗೆಯೇ ಮೇಕೆದಾಟು ಯೋಜನೆ ಕೆಲಸ ಆರಂಭವಾಗುತ್ತದಾ? ಎರಡು ರಾಷ್ಟ್ರೀಯ ಪಕ್ಷಗಳು ಜನರಿಗೆ ಮಕ್ಮಲ್ ಟೋಪಿ ಹಾಕುತ್ತಿವೆ ಎಂದು ಕುಮಾರಸ್ವಾಮಿ ಹೇಳಿದರು.

ಜನರಿಗೆ ಮಕ್ಮಲ್ ಟೋಪಿ ಹಾಕುವುದು ಮತ್ತು ನೀರಾವರಿ ವಿಷಯದಲ್ಲಿ ಮೂರು ನಾಮ ಹಾಕಿರುವ ಕೆಲಸವನ್ನμÉ್ಟೀ ಇವರು ಮಾಡಿದ್ದಾರೆ. ವಿಧಾನಸಭಾ ಕಲಾಪದಲ್ಲಿ ಚರ್ಚೆ ಮಾಡುತ್ತೇನೆ. ಇನ್ನೂ 15 ದಿನಗಳ ಕಾಲ ಸಮಯವಿದೆ, ನನಗೆ ತಾಳ್ಮೆ ಇದೆ ಎಂದು ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದರು.

ಮಕ್ಕಳಿಗಾಗಿ ಇಂದು ಬಂದಿದ್ದೇನೆ: ನನ್ನ ಕ್ಷೇತ್ರ ನನಗೆ ಮುಖ್ಯ. ಹಾಗಾಗಿ ವಿಧಾನಸಭಾ ಕಲಾಪ ಇದ್ದರೂ ಮಕ್ಕಳಿಗಾಗಿ ಬಂದಿದ್ದೇನೆ. ಶಾಲೆ ಕಟ್ಟಡವನ್ನು ಸಾಂಕೇತಿಕವಾಗಿ ಉದ್ಘಾಟನೆ ಮಾಡಿದ್ದೇನೆ. ಅಭಿವೃದ್ಧಿ ವಿಚಾರದಲ್ಲಿ ಯಾರೂ ನಾಟಕ ಮಾಡುವುದು ಬೇಡ. ಕೆಲವರು ಚನ್ನಪಟ್ಟಣದಲ್ಲಿ ಚೆನ್ನಾಗಿ ನಾಟಕ ಆಡುತ್ತಿದ್ದಾರೆ. ಅವರು ಯಾರು ಎನ್ನುವುದು ಜನರಿಗೆ ಗೊತ್ತಿದೆ. ಯಾರಿಂದಲೂ ಚನ್ನಪಟ್ಟಣ ಜನತೆ ದಾರಿ ತಪ್ಪಿಸಲು ಆಗಲ್ಲ ಎಂದು ಕುಮಾರಸ್ವಾಮಿ ತಿಳಿಸಿದರು.

ಬ್ರಮ್ಮಣಿಪುರದಲ್ಲಿ ಯಾರೋ ಒಬ್ಬರು ಎಂಜಿನಿಯರ್‍ರನ್ನು ಕರೆದುಕೊಂಡು ಹೋಗಿದ್ದರು. ನಾನು ಈಗಾಗಲೇ ಕಾವೇರಿ ನೀರಾವರಿ ನಿಗಮದಿಂದ ಹೊಸದಾಗಿ 53 ಕೋಟಿ ಅನುದಾನ ಸೇರಿದಂತೆ 100 ಕೋಟಿ ವೆಚ್ಚದಲ್ಲಿ ನಿಗಮದ ಕೆಲ ಕಾರ್ಯಕ್ರಮ ಅನುμÁ್ಠನಕ್ಕೆ ಒತ್ತು ಕೊಟ್ಟಿದ್ದೇನೆ. ಸರಕಾರದ ಮಟ್ಟದಲ್ಲಿ ಗಮನ ಸೆಳೆದು ಜವಾಬ್ದಾರಿ ನಿರ್ವಹಣೆ ಮಾಡಿದ್ದೇನೆ. ಆದರೆ ಇಲ್ಲಿ ಎಂಎಲ್ಸಿ ಬರೀ ಕೆರೆ ವೀಕ್ಷಣೆಗೆ ನಿಂತಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಕೆಲಸ ನಾನು ಮಾತ್ರ ಮಾಡುತ್ತಿದ್ದೇನೆ. ಅವರು ಪಾಪ ಸ್ಕೋಪ್ ತೆಗೆದುಕೊಳ್ಳಲು ಹೊರಟಿದ್ದಾರೆ ಎಂದು ಅವರು ಕಿಡಿಕಾರಿದರು.

ಎಂಪಿ ಏನು ಕೊಟ್ಟರು?: ಈ ಹಿಂದೆ ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಹಲವು ಹಳ್ಳಿಗಳಲ್ಲಿ ಅನಾಹುತ ಆಯಿತು. ರೈತರು ಬೆಳೆದ ಬೆಳೆಗಳು ಹಾನಿಗೆ ಒಳಗಾಗಿತ್ತು. ನಾನು ಬರುವ ಸುದ್ದಿ ತಿಳಿದು ಲೋಕಸಭಾ ಸದಸ್ಯರು ಕೂಡ ಬಂದಿದ್ದರು. ಅವರು ಬಂದು ಜನರಿಗೆ ಏನು ಕೊಟ್ಟರು? ಎನ್ನುವುದು ಗೊತ್ತಿಲ್ಲ. ನಾನು ವೈಯಕ್ತಿಕವಾಗಿ ಪರಿಹಾರ ಹಣ ನೀಡಿದ್ದೇ ಅಷ್ಟೇ. ರೈತರ ಸಂಕಷ್ಟಕ್ಕೆ 6 ಲಕ್ಷ ಪರಿಹಾರ ಹಣ ನೆರವು ನೀಡಿದ್ದೆ. ಅವತ್ತು ವಿಧಾನಪರಿಷತ್ ಸದಸ್ಯರು ಎಲ್ಲಿ ಹೋಗಿದ್ದರು? ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ನಿನ್ನೆಯ ದಿನ ಕಲಬುರಗಿ ಹೋಗಿದ್ದೆ. ಅಪ್ಜಲಪುರದಲ್ಲಿ ಎಷ್ಟು ಜನರು ಸೇರಿದ್ದರು ಎಂಬುದನ್ನು ಜನ ನೋಡಿದ್ದಾರೆ. ಕಾಂಗ್ರೆಸ್ ಪಾದಯಾತ್ರೆಗೆ ಬೇರೆ ಬೇರೆ ಜಿಲ್ಲೆಗಳಿಂದ ಕರೆಸಿ ಜನರನ್ನು ಸೇರಿಸಿದ್ದರು. 300, 400 ಬಸ್‍ಗಳಲ್ಲಿ ಜಿಲ್ಲೆ ಜಿಲ್ಲೆಯಿಂದ ಜನರನ್ನು ಕರೆತಂದಿದ್ದರು. ಆದರೆ ಕಲಬುರಗಿಗೆ ನಾನು ಹೋದಾಗ ಜನರು ಸ್ವಪ್ರೇರಣೆಯಿಂದ ಬಂದಿದ್ದರು ಎಂದು ವಿರೋಧಿಗಳಿಗೆ ಕುಮಾರಸ್ವಾಮಿ ಟಾಂಗ್ ಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X