Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಒಂದು ವರ್ಷದಲ್ಲಿ 30 ಸಾವಿರ ಮಹಿಳಾ...

ಒಂದು ವರ್ಷದಲ್ಲಿ 30 ಸಾವಿರ ಮಹಿಳಾ ಉದ್ಯಮಿಗಳಿಗೆ ಮನ್ನಣೆ: ಸಚಿವ ಡಾ. ಅಶ್ವತ್ಥನಾರಾಯಣ

ಚೌಡಯ್ಯ ಭವನದಲ್ಲಿ ಮಹಿಳಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ8 March 2022 2:34 PM IST
share
ಒಂದು ವರ್ಷದಲ್ಲಿ 30 ಸಾವಿರ ಮಹಿಳಾ ಉದ್ಯಮಿಗಳಿಗೆ ಮನ್ನಣೆ: ಸಚಿವ ಡಾ. ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಮುಂದಿನ ಒಂದು ವರ್ಷದಲ್ಲಿ ತಲಾ 1 ಸಾವಿರ ಮಹಿಳಾ ಉದ್ಯಮಿಗಳನ್ನು ಬೆಳೆಸಲು ಜೀವನೋಪಾಯ ಸಂವರ್ಧನೆ ಇಲಾಖೆಯು ತೀರ್ಮಾನಿಸಿದೆ. ಈ ಮೂಲಕ 30 ಸಾವಿರ ಸಾಧಕಿಯರನ್ನು ಗುರುತಿಸಿ, ಮುನ್ನೆಲೆಗೆ ತರಲಾಗುವುದು ಎಂದು ಜೀವನೋಪಾಯ ಇಲಾಖೆ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಂಗಳೂರು ಉತ್ತರ ಜಿಲ್ಲಾ ಘಟಕವು ಮಲ್ಲೇಶ್ವರಂನ ಚೌಡಯ್ಯ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.

ಮಹಿಳೆಯರ ಸಬಲೀಕರಣಕ್ಕೆ ಉತ್ತೇಜನ ನೀಡಲು ಸ್ವಸಹಾಯ ಸಂಘಗಳಲ್ಲಿ ಸಕ್ರಿಯರಾಗಿರುವ ಸ್ತೀ ಉದ್ಯಮಿಗಳಿಗೆ ಯಾವುದೇ ಖಾತ್ರಿ ಇಲ್ಲದೆ 1 ಕೋಟಿ ರೂ.ವರೆಗೂ ಬ್ಯಾಂಕ್ ಸಾಲ ಕೊಡಲಾಗುತ್ತಿದೆ. ಜೊತೆಗೆ, ಮಹಿಳೆಯರೇ ತಯಾರಿಸುತ್ತಿರುವ ಉತ್ಪನ್ನಗಳಿಗೆ ಸರಕಾರವೇ ಇ-ಕಾಮರ್ಸ್ ವೇದಿಕೆಯನ್ನು ಒದಗಿಸಲಿದೆ. ಅಲ್ಲದೆ, ಅಮೆಝಾನ್ ಮತ್ತು ಫ್ಲಿಪ್ ಕಾರ್ಟ್ ತರಹದ ಬಹುರಾಷ್ಟ್ರೀಯ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಮಾರುಕಟ್ಟೆ ಸೃಷ್ಟಿಸಲಾಗುತ್ತಿದೆ ಎಂದು ಅವರು ಹೇಳಿದರು.

ಡಿಜಿಟಲೀಕರಣದ ಈ ಯುಗದಲ್ಲಿ ಮಹಿಳೆಯರು ವೈದ್ಯಕೀಯ, ಶಿಕ್ಷಣ, ಬ್ಯಾಂಕಿಂಗ್ ಮುಂತಾದ ಕ್ಷೇತ್ರಗಳಲ್ಲಿ ಮನೆಯಿಂದಲೇ ಸೇವೆ ಸಲ್ಲಿಸಬಹುದು. ಕೋವಿಡ್ ಸಾಂಕ್ರಾಮಿಕವು ಅನೇಕ ತೊಂದರೆಗಳನ್ನು ಸೃಷ್ಟಿಸಿದರೂ ಕೆಲವು ಸುಧಾರಣೆಗಳಿಗೂ ದಾರಿ ಮಾಡಿಕೊಟ್ಟಿತು. ಮಹಿಳೆಯರ ಸಬಲೀಕರಣದಲ್ಲಿ ಆಧುನಿಕ ತಂತ್ರಜ್ಞಾನದ ಪಾತ್ರ ನಿರ್ಣಾಯಕ ಮತ್ತು ಕ್ರಾಂತಿಕಾರಕವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸಮಾಜದ ಆಧಾರಸ್ತಂಭವಾಗಿರುವ ಮಹಿಳೆಯರಿಗೆ ಅನುಕೂಲ ಕಲ್ಪಿಸಿಕೊಡಬೇಕಾಗಿದೆ. ಈ ನಿಟ್ಟಿನಲ್ಲಿ ಮನೆಮನೆಗೂ 24x7 ಕುಡಿಯುವ ನೀರನ್ನು ಜಲಜೀವನ್ ಮಿಷನ್ ಮತ್ತು `ಮನೆಮನೆಗೆ ಗಂಗೆ’ ಯೋಜನೆಗಳಡಿ ಒದಗಿಸಲಾಗುತ್ತಿದೆ. ಇದಕ್ಕಾಗಿ ಸಾವಿರಾರು ಕೋಟಿ ರೂ.ಗಳನ್ನು ವಿನಿಯೋಗಿಸಲಾಗುತ್ತಿದೆ ಎಂದು ಸಚಿವರು ನುಡಿದರು.

ಮಹಿಳೆಯರು ತಾಯಿ, ಪತ್ನಿ, ಮಗಳು, ಅಜ್ಜಿ ಇತ್ಯಾದಿ ಪಾತ್ರಗಳನ್ನು ಸಮರ್ಥವಾಗಿ ಕುಟುಂಬದಲ್ಲಿ ನಿರ್ವಹಿಸುತ್ತಿದ್ದಾರೆ. ಆಧುನಿಕ ಯುಗದಲ್ಲಿ ಸಮಾಜದ ಆರ್ಥಿಕ ಬೆಳವಣಿಗೆಯಲ್ಲೂ ಇವರ ಪಾತ್ರ ಶೇ. 50ರಷ್ಟಾಗಬೇಕು. ಇದಕ್ಕಾಗಿ ಸಾಕಷ್ಟು ಶಾಸನಗಳನ್ನು ರೂಪಿಸಲಾಗಿದ್ದು, ಮಹಿಳೆಯರಿಗೆ ಕಾನೂನಿನ ರಕ್ಷಣೆಯನ್ನೂ ಒದಗಿಸಲಾಗಿದೆ ಎಂದು ಅವರು ತಿಳಿಸಿದರು.

ಸಮಾಜದಲ್ಲಿ ನಿಜವಾದ ಮೀಸಲಾತಿ ಸೌಲಭ್ಯವನ್ನು ಮಹಿಳೆಯರಿಗೆ ಕೊಡಬೇಕಾಗಿದೆ. ಪುರುಷ ಪ್ರಧಾನ ವ್ಯವಸ್ಥೆಯಿಂದ ನಾವು ಹಂತಹಂತವಾಗಿ ಮಹಿಳಾ ಪ್ರಧಾನ ಸಮಾಜವಾಗಿ ಬದಲಾಗುತ್ತಿದ್ದೇವೆ. ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಎರಡೂ ಇಂದಿನ ಮಹಿಳೆಯರಿಗೆ ಸಿಕ್ಕಿರುವ ಎರಡು ದೊಡ್ಡ ವರದಾನಗಳಾಗಿವೆ ಎಂದು ಅಶ್ವತ್ಥನಾರಾಯಣ ವ್ಯಾಖ್ಯಾನಿಸಿದರು.

ಕಾರ್ಯಕ್ರಮದಲ್ಲಿ ಹೆಸರಾಂತ ವೈದ್ಯೆ ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿ, ಮುಖಂಡರಾದ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಸ್. ಗಿರೀಶ್ ಮತ್ತು ಚನ್ನೇಗೌಡ ಮುಂತಾದವರಿದ್ದರು. ಇದೇ ಸಂದರ್ಭದಲ್ಲಿ ಅತ್ಯುತ್ತಮ ಶಿಕ್ಷಕಿಯರಿಗೆ ಸಚಿವರು ಪುರಸ್ಕಾರ ಪ್ರದಾನ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X