Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಕಳ ಉತ್ಸವಕ್ಕಾಗಿ ವಿಶೇಷ ಮೊಬೈಲ್...

ಕಾರ್ಕಳ ಉತ್ಸವಕ್ಕಾಗಿ ವಿಶೇಷ ಮೊಬೈಲ್ ಟವರ್

ವಾರ್ತಾಭಾರತಿವಾರ್ತಾಭಾರತಿ8 March 2022 5:45 PM IST
share

ಕಾರ್ಕಳ : ಮಾರ್ಚ್ 10ರಿಂದ 20ರವರೆಗೆ ನಡೆಯಲಿರುವ ಕಾರ್ಕಳ ಉತ್ಸವದಲ್ಲಿ ಜನ ಒಗ್ಗೂಡುವ ಸಂದರ್ಭದಲ್ಲಿ ಉಂಟಾಗುವ ಮೊಬೈಲ್ ಒತ್ತಡವನ್ನು ನಿಯಂತ್ರಿಸುವ ಸಲುವಾಗಿ 2 ಮೊಬೈಲ್ ಟವರ್ ಗಳನ್ನು ಹೆಚ್ಚುವರಿಯಾಗಿ ಅಳವಡಿಸಲಾಗುವುದು ಎಂದು ತಿಳಿದು ಬಂದಿದೆ.

ಜಿಯೋ ಹಾಗೂ ಏರ್‌ಟೆಲ್ ಟವರ್‌ಗಳನ್ನು ಹೊಸದಾಗಿ ಅಳವಡಿಸಲಾಗುತ್ತಿದ್ದು, ಜೊತೆಗೆ ಇತರ ಟವರ್‌ಗಳ ಸಾಮರ್ಥ್ಯವನ್ನು ಕೂಡಾ ಹೆಚ್ಚಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ. 

ಮಾರ್ಚ್ 9ರಂದು ವಿಶೇಷ ಅಂಚೆ ಕವರ್ ಬಿಡುಗಡೆ

ಕಾರ್ಕಳ ಉತ್ಸವದ ಅಂಗವಾಗಿ ಮಾರ್ಚ್ 9ರಂದು ಸಂಜೆ ನಾಲ್ಕು ಗಂಟೆಗೆ ಗಾಂಧಿ ಮೈದಾನದಲ್ಲಿ ಜಸ್ಟಿಸ್ ಕೆ. ಎಸ್ ಹೆಗ್ಡೆ, ಶಿಲ್ಪಿ ರೆಂಜಾಳ ಗೋಪಾಲಕೃಷ್ಣ ಶೆಣೈ, ಶಿಲ್ಪಿ ಶ್ಯಾಮರಾಯ ಆಚಾರ್ಯ ಸ್ಮರಣಾರ್ಥ ಅಂಚೆ ಲಕೋಟೆಯನ್ನು ಬಿಡುಗಡೆಗೊಳಿಸಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. 

ಕಾರ್ಕಳ ಉತ್ಸವಕ್ಕೆ ಹೆಚ್ಚುವರಿ ವೈದ್ಯಕೀಯ ಸೌಲಭ್ಯ

ಕಾರ್ಕಳ ಉತ್ಸವದ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ಹೆಚ್ಚುವರಿ ವೈದ್ಯಕೀಯ ಸೌಲಭ್ಯದ ಜೊತೆಗೆ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗುವುದು ಎಂದು ತಾಲೂಕು ವೈಧ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ. ಹೆಲಿಕಾಪ್ಟರ್ ನಿಲ್ಲುವ ಹೆಲಿಪ್ಯಾಡ್‌ನಲ್ಲಿ ಮಾರ್ಚ್ 10 ರಿಂದ 14ರವರೆಗೆ ಬೆಳಿಗ್ಗೆ 9ಗಂಟೆಯಿಂದ ಸಂಜೆ 6ರ ವರೆಗೆ, ಕಾರ್ಕಳ ಗಾಂಧಿಮೈದಾನದಲ್ಲಿ ನಡೆಯುವ ಸಾಂಸ್ಕೃತಿಕ ಸಂದರ್ಭದಲ್ಲಿ ಮಾರ್ಚ್ 10ರಿಂದ 17ರವರೆಗೆ ಸಂಜೆ 6ರಿಂದ 10ರವರೆಗೆ, ವಸ್ತು ಪ್ರದರ್ಶನ ಮಳಿಗೆಯಲ್ಲಿ ಬೆಳಗ್ಗೆ 11 ಗಂಟೆಯಿಂದ ರಾತ್ರಿ 11ರವರೆಗೆ ವೈದ್ಯರು ಹಾಗೂ ನರ್ಸ್‌ಗಳನ್ನು ಒಳಗೊಂಡ ಆಂಬುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗುವುದು. ಇದರಲ್ಲಿ ಸರಕಾರಿ ವೈದ್ಯರ ಜೊತೆಗೆ ಆಯುಷ್ ವೈದ್ಯರು ಕೂಡಾ ಸೇವೆಯ್ಲಲಿರುತ್ತಾರೆ. ಅಗತ್ಯವಿದ್ದಲ್ಲಿ ಖಾಸಗಿ ಆಸ್ಪತ್ರೆಯ ಆಂಬುಲೆನ್ಸ್ ಗಳನ್ನು ಉಪಯೋಗಿಸಿ ಕೊಳ್ಳಲಾಗುವುದು. ಮಾರ್ಚ್ 14ರಿಂದ ವಸ್ತು ಪ್ರದರ್ಶನ ಮಳಿಗೆಯ ಬಳಿ ಹಾಗೂ ಸ್ವರಾಜ್ ಮೈದಾನದಲ್ಲಿ ಪ್ರತ್ಯೇಕ ೨ ಕ್ಲಿನಿಕ್‌ಗಳನ್ನು ತೆರೆಯಲಾಗುವುದು. ಮಾರ್ಚ್ 10ರಿಂದ ಗಾಂಧಿ ಮೈದಾನದಲ್ಲಿ ಆರೋಗ್ಯ ಕ್ಲಿನಿಕ್ ಲಭ್ಯವಿದೆ.

ಉತ್ಸವದ ಕೊನೆಯ 3 ದಿನ ಸರಕಾರಿ ಆಸ್ಪತ್ರೆಯಲ್ಲಿ 24 ಗಂಟೆ ವೈದ್ಯರು ಲಭ್ಯರಿರುತ್ತಾರೆ. ಈ ಎಲ್ಲಾ ಕಾರ್ಯದಲ್ಲಿ 50 ವೈದ್ಯರು ಸೇರಿದಂತೆ ಸುಮಾರು 150 ವೈದ್ಯಕೀಯ ಸಿಬ್ಬಂದಿ  ಕಾರ್ಯನಿರ್ವಹಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X