ಸಾಲಿಹಾತ್‌ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಉಡುಪಿ, ಮಾ.8: ತೋನ್ಸೆ ಹೂಡೆಯ ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸಾಲಿಹಾತ್ ಬಾಲಕಿಯರ ಪದವಿ ಪೂರ್ವ ಕಾಲೇಜು ಮತ್ತು ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಮಂಗಳವಾರ ಕಾಲೇಜಿನಲ್ಲಿ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಸಮಾಜ ಸೇವಕಿ ವೆರೋನಿಕಾ ಕರ್ನೇಲಿಯೋ ಮಾತನಾಡಿ, ಮಹಿಳೆಯು ತಾನು ಪಡೆದ ಶಿಕ್ಷಣದ ಮೂಲಕ ಸಮಾಜದ ಏಳಿಗೆಗಾಗಿ ದುಡಿಯಬೇಕು. ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ಸೇವೆ ಸಲ್ಲಿಸುತ್ತಿ ರುವ ಸನ್ನಿವೇಶಗಳಲ್ಲಿ ಮಹಿಳೆಯರ ಪರಜಾತಿ ಧರ್ಮ ಮತ ಭೇದವಿಲ್ಲದೆ ಎಲ್ಲರ ಶ್ರೇಯೋಭಿವೃದ್ಧಿಗೆ ದುಡಿಯಬೇಕು ಎಂದರು.
ಈ ಸಂದರ್ಭದಲ್ಲಿ ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಸಬೀನಾ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ ವಹಿಸಿದ್ದರು. ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದ ಸದಸ್ಯೆ ಕಿದೆವರ್ ಫಾತಿಮಾ ಬಿ. ಉಪಸ್ಥಿರಿದ್ದರು.
ವಿದ್ಯಾರ್ಥಿನಿ ಮುನಾ ಸ್ವಾಗತಿಸಿದರು. ವಿದ್ಯಾರ್ಥಿನಿ ಸಿಮಾಝ್ ವಂದಿಸಿ ದರು. ಉಪನ್ಯಾಸಕಿ ಮದೀಹ ಕಾರ್ಯಕ್ರಮ ನಿರೂಪಿಸಿದರು.