ಸಹಾಯಧನಕ್ಕೆ ಅರ್ಜಿ ಆಹ್ವಾನ
ಮಂಗಳೂರು, ಮಾ.8: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿದ್ದು ಸ್ವಂತ ಜಾಗ ಹೊಂದಿರುವ ವಸತಿ ರಹಿತ ಹಿಂದುಳಿದ, ಸಾಮಾನ್ಯ ಹಾಗೂ ಅಲ್ಪಸಂಖ್ಯಾತ ವರ್ಗದ ಕುಟುಂಬಗಳಿಗೆ 2021-22ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆಯಡಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಸತಿ ರಹಿತ ಬಡ ಕುಟುಂಬಗಳಿಗೆ 2021-22ನೇ ಸಾಲಿನ ಡಾ.ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಯಡಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳು ಸೂಕ್ತ ದಾಖಲೆಗಳೊಂದಿಗೆ 2022ರ ಜುಲೈ 22ರೊಳಗೆ ನಗರ ಬಡತನ ನಿರ್ಮೂಲನಾ ಕೋಶಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಮನಪಾ ಆಯುಕ್ತರ ಪ್ರಕಟನೆ ತಿಳಿಸಿದೆ.
Next Story





