ವಿದ್ಯಾರ್ಥಿನಿಯರಿಗೆ ಪರೀಕ್ಷೆಗೆ ನಿರಾಕರಣೆ: ಜಂಟಿ ನಿರ್ದೇಶಕರನ್ನು ಭೇಟಿಯಾದ ಹಳೆಯಂಗಡಿ ಮುಸ್ಲಿಮ್ ಒಕ್ಕೂಟದ ನಿಯೋಗ

ಮಂಗಳೂರು : ಹಿಜಾಬ್ ಕುರಿತಾದ ಹೈಕೋರ್ಟ್ ನ ಮಧ್ಯಂತರ ಆದೇಶವನ್ನು ತಪ್ಪಾಗಿ ಗ್ರಹಿಸಿಕೊಂಡು ಕೆಲವೊಂದು ಕಾಲೇಜುಗಳಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶವನ್ನು ನಿರಾಕರಿಸುತ್ತಾ ಬರಲಾಗಿದೆ. ಇದೀಗ ಹಳೆಯಂಗಡಿಯ ಇಂದಿರಾನಗರದ ಪದವಿ ಕಾಲೇಜಿನಲ್ಲೂ ಸ್ಕಾರ್ಫ್ ಧರಿಸಿದ ವಿದ್ಯಾರ್ಥಿಯರಿಗೆ ಪರೀಕ್ಷೆಗೆ ಅವಕಾಶ ನಿರಾಕರಿಸಿದಾಗ, ಹಳೆಯಂಗಡಿ ಮುಸ್ಲಿಮ್ ಒಕ್ಕೂಟದ ಕೆ. ಶಾಹುಲ್ ಹಮೀದ್ ನೇತೃತ್ವದ ನಿಯೋಗವು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರನ್ನು ಭೇಟಿಯಾಗಿ ವಿದ್ಯಾರ್ಥಿನಿಯರಿಗೆ ಆಗುತ್ತಿರುವ ಅನ್ಯಾಯವನ್ನು ಅವರ ಗಮನಕ್ಕೆ ತಂದಿತು. ಇದಕ್ಕೆ ಕೂಡಲೇ ಸ್ಪಂದಿಸಿದ ಜಂಟಿ ನಿರ್ದೇಶಕರು ಪರೀಕ್ಷೆಯನ್ನು ಮುಂದೂಡುವಂತೆ ಕಾಲೇಜು ಪ್ರಾಂಶುಪಾಲರಿಗೆ ಸೂಚಿಸಿದರು.
ನಿಯೋಗದಲ್ಲಿ ಹಳೆಯಂಗಡಿ ಮುಸ್ಲಿಮ್ ಒಕ್ಕೂಟ ಇದರ ಪ್ರಧಾನ ಕಾರ್ಯದರ್ಶಿ ಮೊಯಿದೀನ್ ಹಳೆಯಂಗಡಿ, ಕಾರ್ಯದರ್ಶಿ ಅಬ್ದುಲ್ ಅಝೀಝ್ , ಉಪಾಧ್ಯಕ್ಷ ಹಾರಿಸ್ ನವರಂಗ್ ಇದ್ದರು.
Next Story