ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ

photo- (twitetr @siddaramaiah)
ಹಾವೇರಿ: ಉಕ್ರೇನ್ ನಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಮನೆಗೆ ವಿಧಾಸನಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿರುವ ನವೀನ್ ಅವರ ನಿವಾಸಕ್ಕೆ ಬುಧವಾರ ಭೇಟಿ ನೀಡಿರುವ ಸಿದ್ದರಾಮಯ್ಯ , ನವೀನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ವಿಧಾನಸಭೆ ಮಾಜಿ ಸ್ಪೀಕರ್ ಕೋಳಿವಾಡ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಜಯಮಾಲಾ, ಬ್ಯಾಡಗಿ ಶಿವಣ್ಣ, ಮುಖಂಡರಾದ ಬನ್ನಿಕೋಡ್, ಪ್ರಕಾಶ ಕೋಳಿವಾಡ, ಸೋಮಣ್ಣ ಬೇವಿನಮರದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಹಿರೇಮಠ ಇತರರಿದ್ದರು.
ಉಕ್ರೇನ್ ನಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಅವರ ನಿವಾಸಕ್ಕೆ ಇಂದು ಭೇಟಿ ನೀಡಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದೆ. ಇದೇ ವೇಳೆ ನವೀನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದೆ.
— Siddaramaiah (@siddaramaiah) March 9, 2022
1/2#Ukraine️ pic.twitter.com/XlRO7m6WEp
Next Story







