ತೆಂಕನಿಡಿಯೂರು ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆ

ಉಡುಪಿ, ಮಾ.9: ಮಹಿಳಾ ಸಬಲೀಕರಣದಲ್ಲಿ ಶಿಕ್ಷಣದ ಪಾತ್ರ ಮಹತ್ವ ದಾಗಿದೆ. ಅದು ಮಹಿಳೆಯ ಮನೋಬಲವನ್ನು ಸದೃಢಗೊಳಿಸುತ್ತದೆ. ಮಹಿಳೆಯ ಹಕ್ಕುಗಳ ಬಗ್ಗೆ ಅರಿವುಮೂಡಿಸುತ್ತದೆ. ಈ ಹಿನ್ನೆಲೆಯಲ್ಲಿ ಸಮಾಜ ಮಹಿಳಾ ಶಿಕ್ಷಣದ ಬಗ್ಗೆ ಹೆಚ್ಚಿನ ಗಮನಕೊಡುವ ಅಗತ್ಯವಿದೆ ಎಂದು ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಹೇಳಿದ್ದಾರೆ.
ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ವಹಿಸಿದ್ದರು. ಆಪ್ತ ಸಲಹಾ ಸಮಿತಿಯ ಸ್ನಾತಕೋತ್ತರ ವಿಭಾಗದ ಸಂಚಾಲಕಿ ಶರ್ಮಿಳಾ ಹಾರಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿ ಮಹಿಳಾ ದಿನಾರಣೆಯ ಮಹತ್ವವನ್ನು ವಿವರಿಸಿದರು. ಐಕ್ಯೂಎಸಿ ಸಂಚಾಲಕ ಡಾ. ಸುರೇಶ್ ರೈ ಕೆ. ಹಾಗೂ ಮಹಿಳಾ ಘಟಕದ ಸ್ನಾತಕೋತ್ತರ ವಿಭಾಗದ ಸಂಚಾಲಕಿ ಡಾ.ಸುನೀತಾ ಉಪಸ್ಥಿತರಿದ್ದರು.
ಆಪ್ತ ಸಲಹಾ ಸಮಿತಿಯ ಪದವಿ ವಿಭಾಗದ ಸಂಚಾಲಕಿ ರತ್ನಮಾಲಾ ಸ್ವಾಗತಿಸಿದರು. ಮಹಿಳಾ ಘಟಕದ ಸಂಚಾಲಕಿ ಡಾ.ಸುಜಾತ ವಿ. ಶೇಟ್ ವಂದಿಸಿ ದರು.ಇಂಗ್ಲೀಷ್ ವಿಭಾಗದ ದರ್ಶಿನಿ ಕಾರ್ಯಕ್ರಮ ನಿರೂಪಿಸಿದರು.