ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಉಡುಪಿ, ಮಾ.9: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು, ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಮತ್ತು 3ಬಿಗೆ ಸೇರಿರುವ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಕಾಡುಗೊಲ್ಲ/ಪಟ್ಟಿಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗ, ಒಕ್ಕಲಿಗ, ಲಿಂಗಾಯಿತ, ಮರಾಠ ಮತ್ತು ಇದರ ಉಪಜಾತಿಗಳು ಹೊರತು ಪಡಿಸಿ) ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 17ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ -www.dbcdc.kanataka.gov.in- ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820- 2574882 ಅಥವಾ ತಾಲೂಕು ವಿಸ್ತೀರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸಾ್ಥಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story