ದ.ಕ.ಜಿಲ್ಲೆ: ಮೂವರಿಗೆ ಕೋವಿಡ್ ಸೋಂಕು
ಮಂಗಳೂರು, ಮಾ.9: ದ.ಕ.ಜಿಲ್ಲೆಯಲ್ಲಿ ಬುಧವಾರ ಮೂವರಿಗೆ ಕೋವಿಡ್ ಸೋಂಕು ತಗುಲಿದ್ದು, ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 1,35,437 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,33,564 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ 26 ಸಕ್ರಿಯ ಪ್ರಕರಣವಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.0.16 ದಾಖಲಾಗಿದೆ. ಅಲ್ಲದೆ ಈವರೆಗೆ 1847 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 96,044 ಪ್ರಕರಣ ದಾಖಲಿಸಿ 1,15,89,080 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story