ಪುತ್ತೂರು: ಪೊಲೀಸ್ ಸಿಬ್ಬಂದಿ ಗಣೇಶ್ ನಿಧನ

ಪುತ್ತೂರು: ವಿಟ್ಲ ಸಮೀಪದ ಅಡ್ಕಸ್ಥಳ ನಿವಾಸಿ ಹಾಗೂ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಣೇಶ್(42 ) ಹೃದಯಾಘಾತದಿಂದ ಬುಧವಾರ ಸ್ವಗೃಹದಲ್ಲಿ ನಿಧನಹೊಂದಿದರು.
ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಗಣೇಶ್ ಅವರು ಸಂಪ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರನ್ನು ಸ್ವರ್ಗ ಚೆಕ್ ಪೋಸ್ಟ್ ಬಳಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.
ಬುಧವಾರ ಮನೆಯಲ್ಲಿದ್ದ ವೇಳೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಸಂಜೆ 3 ಗಂಟೆಗೆ ಅಂತಿಮ ದರ್ಶನಕ್ಕೆ ಪ್ರಾರ್ಥಿವ ಶರೀರವನ್ನು ಪುತ್ತೂರು ಗ್ರಾಮಾಂತರ ಠಾಣೆಗೆ ತರಲಾಗಿತ್ತು
Next Story





