Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸ್ಥಳೀಯ ಸಂಸ್ಥೆ ಪ್ರತಿನಿಧಿಗಳ ಗೌರವಧನ...

ಸ್ಥಳೀಯ ಸಂಸ್ಥೆ ಪ್ರತಿನಿಧಿಗಳ ಗೌರವಧನ ಹೆಚ್ಚಳಕ್ಕೆ ಆಗ್ರಹ: ವಿಧಾನ ಪರಿಷತ್ ಸದಸ್ಯರಿಂದ ಸಿಎಂಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ10 March 2022 1:45 PM IST
share
ಸ್ಥಳೀಯ ಸಂಸ್ಥೆ ಪ್ರತಿನಿಧಿಗಳ ಗೌರವಧನ ಹೆಚ್ಚಳಕ್ಕೆ ಆಗ್ರಹ: ವಿಧಾನ ಪರಿಷತ್ ಸದಸ್ಯರಿಂದ ಸಿಎಂಗೆ ಮನವಿ

ಬೆಂಗಳೂರು, ಮಾ.10: ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಗೌರವಧನ ಹೆಚ್ಚಳ ಮತ್ತು ಇತರ ಸೌಲಭ್ಯ ಒದಗಿಸುವ ಕುರಿತು 25 ವಿಧಾನ ಪರಿಷತ್ ಶಾಸಕರ ನಿಯೋಗವು ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ದೇಶದ ಅಭಿವೃದ್ಧಿಯಲ್ಲಿ ಹಳ್ಳಿಗಳ ಪಾತ್ರ ಬಹಳ ಪ್ರಮುಖವಾಗಿದ್ದು ಹಳ್ಳಿಗಳ ಅಭಿವೃದ್ಧಿಗೆ ಗ್ರಾಮ ಪಂಚಾಯತ್ ಗಳ ಪಾತ್ರವೂ ಅಷ್ಟೇ ಮುಖ್ಯವಾಗಿರುತ್ತದೆ. ಇಲ್ಲಿ ಗ್ರಾಮವನ್ನು ಪ್ರತಿನಿಧಿಸುವ ಪಂಚಾಯತ್ ಸದಸ್ಯರಿಗೆ ಯಾವುದೇ ರೀತಿಯಾದಂತಹ ಸಮರ್ಪಕ ಸೌಲಭ್ಯ ಇರುವುದಿಲ್ಲ. ಅವರ ವೇತನವೂ ಸಹ ಬಹಳ ಕಡಿಮೆ ಇರುತ್ತದೆ. ಅಲ್ಲದೆ ಬೇರೆ ಯಾವುದೇ ಸೌಲಭ್ಯವು ಇವರಿಗೆ ದೊರಕುವುದಿಲ್ಲ. ಈ ಹಿನ್ನೆಲೆಯಲ್ಲಿ ಇವರ ನೆರವಿಗೆ ಸರ್ಕಾರ ಧಾವಿಸಬೇಕಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾಪ್ರಭುತ್ವದಲ್ಲಿ ಸ್ಥಳೀಯ ಆಡಳಿತವು ತನ್ನದೇ ಆದ ಒಂದು ಮಹತ್ವವನ್ನು ಪಡೆದಿರುತ್ತದೆ. ಇತ್ತೀಚಿನ ದಿನಗಳಲ್ಲಿ ಸ್ಥಳೀಯ ಆಡಳಿತದ ಚುನಾವಣೆಗೆ ಅದರಲ್ಲೂ ಮುಖ್ಯವಾಗಿ ಮಹಿಳೆಯರು ಮತ್ತು ಮೀಸಲಾತಿ ಕ್ಷೇತ್ರಗಳಿಂದ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ. ಮುಖ್ಯ ಕಾರಣವೆನೆಂದರೆ ಚುನಾಯಿತರಾದ ಪ್ರತಿನಿಧಿಗಳಿಗೆ ಯಾವುದೇ ರೀತಿಯ ಸವಲತ್ತುಗಳಾಗಲಿ ಅಥವಾ ನಿರೀಕ್ಷೆ ಮಟ್ಟದಲ್ಲಿರುವ ಗೌರವ ಧನ ಸಿಗುತ್ತಿಲ್ಲವೆಂದು. ಇದರಲ್ಲಿ ಅತೀ ಮುಖ್ಯವಾಗಿ ಗ್ರಾಮ ಪಂಚಾಯತಿಗಳಲ್ಲಿ ಮೀಸಲಾತಿ ಕ್ಷೇತ್ರಗಳಲ್ಲಿ ಸ್ಪರ್ಧಿಸುವವರು ಆರ್ಥಿಕವಾಗಿ ಬಹಳ ಹಿಂದುಳಿದಿರುತ್ತಾರೆ. ಅವರ ದೈನಂದಿನ ಚಟುವಟಿಕೆಗಳಿಗೆ ಕೂಲಿ ಕೆಲಸವನ್ನು ನಂಬಿರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ನಾವುಗಳು ಅವರಿಂದ ಗ್ರಾಮ ಪಂಚಾಯತ್ ಮಟ್ಟದಲ್ಲಿ ಉತ್ತಮ ಆಡಳಿತ ನಿರೀಕ್ಷಿಸಲಾಗುವುದಿಲ್ಲ. ಹಾಗಾಗಿ ಅವರನ್ನು ಸ್ವಾವಲಂಭಿಗಳಾಗಿ ಮಾಡುವುದು ನಮ್ಮ ನಿಮ್ಮೆಲ್ಲರ ಕರ್ತ್ಯವ್ಯವಾಗಿರುತ್ತದೆ.

ಗ್ರಾಮ ಪಂಚಾಯತಿ ಸದಸ್ಯರ ಗೌರವ ಧನವು ಕಳೆದ 5 ವರ್ಷಗಳಿಂದ ಹೆಚ್ಚಳವಾಗಿರುವುದಿಲ್ಲ. ಈಗ ಅವರಿಗೆ ಸಿಗುವ ಗೌರವ ಧನ ಕೇವಲ 1000 ರೂ. ನೀಡಲಾಗುತ್ತಿದೆ. ಎಲ್ಲಾ ಚುನಾಯಿತ ಪ್ರತಿನಿಧಿಗಳು ಶೇಕಡ 100ರಷ್ಟು ಗ್ರಾಮೀಣ ಪ್ರದೇಶದವರಾಗಿದ್ದು ಅವರಿಗೆ ಯಾವುದೇ ಇತರ ಮೂಲ ಆದಾಯ ಇರುವುದಿಲ್ಲ. ಒಂದು ಬಾರಿ ಚುನಾಯಿತರಾಗಿ ಆಯ್ಕೆಯಾದ ನಂತರ ಸದಸ್ಯರು ತಮ್ಮ ಇತರ ಉದ್ಯೋಗ ಅಥವಾ ಕೆಲಸ ಕಾರ್ಯಗಳಿಂದ ವಂಚಿತರಾಗಿ ಅವರ ಆರ್ಥಿಕ ಪರಿಸ್ಥಿತಿ ಅತ್ಯಂತ ದುಸ್ತರವಾಗುತ್ತದೆ.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಮೀಸಲಾತಿ ಪ್ರಕಾರ ಶೇಕಡ 50 ರಷ್ಟು ಮಹಿಳೆಯರು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಆರ್ಥಿಕವಾಗಿ ಹಿಂದುಳಿದವರು ಹೆಚ್ಚಿನ ಸಂಖ್ಯೆಯಲ್ಲಿ ಚುನಾಯಿತರಾಗಿ ಬರುವುದರಿಂದ ಸದ್ರಿಯವರ ಆರ್ಥಿಕ ಪರಿಸ್ಥಿತಿ ಸುಧಾರಿಸಿದಲ್ಲಿ ಅವರು ಸಂಪೂರ್ಣವಾಗಿ ತಮ್ಮನ್ನು ತಾವು ಗ್ರಾಮೀಣ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡು ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಮತ್ತು ಸಾರ್ವಜನಿಕರಿಗೆ ಉತ್ತರದಾಯಿತ್ವವನ್ನು ಹೊಂದಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಈ  ಬೇಡಿಕೆಗಳನ್ನು ಈಡೇರಿಸುವಂತೆ ವಿಧಾನ ಪರಿಷತ್ ಶಾಸಕರ ನಿಯೋಗವು ಮುಖ್ಯಮಂತ್ರಿಯವರಲ್ಲಿ ಕೋರಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X