ಚುನಾವಣೆ ಗೆಲುವು: ಉಡುಪಿಯಲ್ಲಿ ಬಿಜೆಪಿ ಸಂಭ್ರಮಾಚರಣೆ

ಉಡುಪಿ, ಮಾ.10: ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಸಂಭ್ರಮವನ್ನು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಗುರುವಾರ ಕಡಿಯಾಳಿ ಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಆಚರಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ದೇಶವಾಸಿಗಳ ನಿರೀಕ್ಷೆಯಂತೆಯೇ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯ ದಾಖಲಿಸಿದೆ. ಈ ಚುನಾವಣಾ ಫಲಿತಾಂಶವು ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎನಿಸಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ನಗರ ಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಮುಖಂಡರಾದ ಮಹೇಶ್ ಠಾಕೂರ್, ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಸಲೀಂ ಅಂಬಾಗಿಲು, ಸದಾನಂದ ಉಪ್ಪಿನಕುದ್ರು, ಮನೋಹರ್ ಕಲ್ಮಾಡಿ, ಸತ್ಯಾನಂದ ನಾಯಕ್, ಗುರುಪ್ರಸಾದ್ ಶೆಟ್ಟಿ, ಶಿವಕುಮಾರ್ ಅಂಬಲಪಾಡಿ, ಗಿರೀಶ್ ಅಂಚನ್, ಪ್ರತಾಪ್ ಶೆಟ್ಟಿ, ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ವೀಣಾ ಶೆಟ್ಟಿ, ರಶ್ಮಿತಾ ಬಿ.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.