Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅರಣ್ಯ ಪ್ರದೇಶದಲ್ಲಿ ಕೈಗಾರಿಕೆ...

ಅರಣ್ಯ ಪ್ರದೇಶದಲ್ಲಿ ಕೈಗಾರಿಕೆ ನಿರ್ಮಿಸುವುದಕ್ಕೆ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 March 2022 8:16 PM IST
share
ಅರಣ್ಯ ಪ್ರದೇಶದಲ್ಲಿ ಕೈಗಾರಿಕೆ ನಿರ್ಮಿಸುವುದಕ್ಕೆ ವಿರೋಧಿಸಿ ಪ್ರತಿಭಟನೆ

ಬೈಂದೂರು, ಮಾ.10: ರೈತಾಪಿ ವರ್ಗ, ಕೂಲಿಯಾಳುಗಳು ಸಹಿತ ಜನ ಜೀವನ ಹಾಗೂ ವನ್ಯಜೀವಿಗಳ ಬದುಕು ಕಸಿದು ಕಾಡು ಪ್ರದೇಶವನ್ನು ಕೈಗಾರಿಕಾ ಕ್ಷೇತ್ರಕ್ಕೆ ನೀಡುವುದು ಸೂಕ್ತವಲ್ಲ. ಕೈಗಾರಿಕಾ ಚಟುವಟಿಕೆಗಾಗಿ ಕಾಡು ಪ್ರದೇಶ ವನ್ನು ನಾಶ ಮಾಡುವುದರಿಂದ ಪರಿಸರದ ಮೇಲೆ ವ್ಯತ್ತಿರಿಕ್ತ ಪರಿಣಾಮ ಬೀರಲಿದೆ ಎಂದು ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿ ಅಧ್ಯಕ್ಷ ಎಲ್.ವಿ. ಅಮೀನ್ ಆರೋಪಿಸಿದ್ದಾರೆ.

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿ, ವನದುರ್ಗ ರೈತಶಕ್ತಿ ಗುಂಪು ಮತ್ತು ಹಳಗೇರಿ ಪರಿಸರ ಹಿತರಕ್ಷಣಾ ವೇದಿಕೆ ಸಹಯೋಗದಲ್ಲಿ ಗುರುವಾರ ಮಹಾಲಸ ಕಲ್ಚರಲ್ ಹಾಲ್ನಲ್ಲಿ ನಡೆದ ಪರಿಸರ ರಕ್ಷಿಸಿ-ಜೀವನ ಉಳಿಸಿ ಅಭಿಯಾನ ಮತ್ತು ಪ್ರತಿಭಟನೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಮಾತನಾಡಿ, ಅರಣ್ಯ ಹಾಗೂ ಕೈಗಾರಿಕೆ ಎರಡೂ ಬೇಕು. ಆದರೆ ಜನರ ಜೀವನಕ್ಕೆ ಸಮಸ್ಯೆಯನ್ನು ಉಂಟುಮಾಡುವ ಪ್ರದೇಶದಲ್ಲಿ ಕೈಗಾರಿಕೆ ಮಾಡು ವುದು ಸರಿಯಲ್ಲ ಎಂದು ಹೇಳಿದರು.

ಖಂಬದಕೋಣೆ ಗ್ರಾಪಂ ಅಧ್ಯಕ್ಷ ಸುಕೇಶ ಶೆಟ್ಟಿ ಮಾತನಾಡಿ, ಗ್ರಾಪಂ ಗಮನಕ್ಕೆ ತರದೆ ಅಧಿಕಾರಿಗಳು ಈ ಪ್ರದೇಶವನ್ನು ಕೈಗಾರಿಕೆಗೆ ಕೊಟ್ಟಿದ್ದಾರೆ. ಇದಕ್ಕೆ ಎಲ್ಲ ಸದಸ್ಯರು ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ನಡೆಸುವ ಎಲ್ಲ ರೀತಿಯ ಹೋರಾಟಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದರು.

ಸಮಿತಿ ಉಪಾಧ್ಯಕ್ಷರಾದ ನಿತ್ಯಾನಂದ ಡಿ.ಕೋಟ್ಯಾನ್, ರಾಮಚಂದ್ರ ಬೈಕಂಪಾಡಿ, ಅಖಿಲ ಭಾರತ ತುಳು ಒಕ್ಕೂಟ ಅಧ್ಯಕ್ಷ ಧರ್ಮಪಾಲ್ ಯು. ದೇವಾಡಿಗ, ಉಡುಪಿ ಕ.ರಾ.ವೈ.ಸಂ. ಜಿಲ್ಲಾಧ್ಯಕ್ಷ ಡಾ.ಸುಬ್ರಹ್ಮಣ್ಯ ಭಟ್, ಮುಂಬಯಿ ದೇವಾಡಿಗ ಸಂಘದ ಅಧ್ಯಕ್ಷ ರವಿ ದೇವಾಡಿಗ, ಮುಂಬೈ ದೇವಾಡಿಗ ಸಂಘದ ಮಾಜಿ ಅಧ್ಯಕ್ಷ ಮೋಹನದಾಸ್, ಕಿರಿಮಂಜೇಶ್ವರ ಗ್ರಾಪಂ ಮಾಜಿ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ, ಸದಸ್ಯ ಈಶ್ವರ ದೇವಾಡಿಗ, ಕೊಲ್ಲೂರು ಮೂಕಾಂಬಿಕ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯ ನರಸಿಂಹ ಹಳಗೇರಿ, ನಿವೃತ್ತ ಬ್ಯಾಂಕ್ ಮಾನ್ಯೇಜರ್ ಉದಯ ಕುಮಾರ್ ಶೆಟ್ಟಿ, ಅರಣ್ಯ ಪ್ರದೇಶದಲ್ಲಿ ಕೈಗಾರಿಕಾ ವಲಯ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದರು.

ಹಳಗೇರಿ ಪರಿಸರ ಹಿತರಕ್ಷಣಾ ವೇದಿಕೆ ಪ್ರಮುಖ ಹೋರಾಟಗಾರ ನಳೀನ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವನದುರ್ಗ ರೈತಶಕ್ತಿ ಗುಂಪು ಸಂಯೋಜಕ ಪ್ರಭಾಕರ ಶೆಟ್ಟಿ ಸ್ವಾಗತಿಸಿದರು. ಸಮಿತಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಸಾಲಿಯಾನ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X