ಹಾಸನ: ಕಾಡಾನೆ ದಾಳಿಗೆ ಇಬ್ಬರು ಕಾಫಿ ತೋಟದ ಕಾರ್ಮಿಕರು ಬಲಿ
ಘಟನೆ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ

ಹಾಸನ: ಕಾಡಾನೆ ದಾಳಿಗೆ ಇಬ್ಬರು ಕಾಫಿ ತೋಟದ ಕಾರ್ಮಿಕರು ಬಲಿಯಾಗಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಕಡೆಗರ್ಜೆ ಗ್ರಾಮದ ಕಾಫಿ ತೋಟದಲ್ಲಿ ನಡೆದಿದೆ.
ಚಿಕ್ಕಯ್ಯ (65), ಈರಯ್ಯ (68) ಎಂಬವರು ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕರು ಎಂದು ಗುರುತಿಸಲಾಗಿದೆ.
ಬೆಳಗ್ಗೆ ತೋಟದಲ್ಲಿ ಕೆಲಸ ಮಾಡುವ ವೇಳೆ ಒಂಟಿ ಸಲಗ ದಾಳಿ ಮಾಡಿ ಇಬ್ಬರನ್ನು ಬಲಿ ಪಡೆದಿದೆ. ಘಟನೆ ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದೆ.
ಅರೆಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ಮಾಡುತ್ತಿದ್ದಾರೆ.







.jpeg)
.jpeg)



