Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2024ರಲ್ಲಿ ಬಿಜೆಪಿಯನ್ನು ಸೋಲಿಸಲು...

2024ರಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ಅನ್ನು ಅವಲಂಬಿಸುವುದರಲ್ಲಿ ಅರ್ಥವಿಲ್ಲ: ಮಮತಾ ಬ್ಯಾನರ್ಜಿ

ಬಿಜೆಪಿ ಗೆಲುವಿನ ಹಿನ್ನೆಲೆಯಲ್ಲಿ ಮತಯಂತ್ರಗಳ ಮೇಲೆ ಅನುಮಾನ ವ್ಯಕ್ತಪಡಿಸಿದ ಪಶ್ಚಿಮ ಬಂಗಾಳ ಸಿಎಂ

ವಾರ್ತಾಭಾರತಿವಾರ್ತಾಭಾರತಿ11 March 2022 7:19 PM IST
share
2024ರಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ಅನ್ನು ಅವಲಂಬಿಸುವುದರಲ್ಲಿ ಅರ್ಥವಿಲ್ಲ: ಮಮತಾ ಬ್ಯಾನರ್ಜಿ

ಕಲ್ಕತ್ತಾ: ಉತ್ತರ ಪ್ರದೇಶ ಹಾಗೂ ಇತರೆ ರಾಜ್ಯಗಳಲ್ಲಿ ಬಿಜೆಪಿ ಸಾಧಿಸಿರುವ ದಾಖಲೆಯ ಗೆಲುವಿನ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅನುಮಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ, ʼಇದು ಜನಾದೇಶದ ಗೆಲುವಲ್ಲ, ಇವಿಎಂ ಮತಯಂತ್ರ ಹಾಗೂ ಕೇಂದ್ರ ಏಜೆನ್ಸಿಗಳನ್ನು ಬಳಸಿಕೊಂಡು ಪಡೆದ ಗೆಲುವು ಎಂದು ಮಮತಾ ಹೇಳಿದ್ದಾರೆ.

ಅದೇ ವೇಳೆ ಕಾಂಗ್ರೆಸ್‌ ಬಗ್ಗೆಯೂ ಮಾತನಾಡಿದ ಸಿಎಂ ಬ್ಯಾನರ್ಜಿ, ʼ2024 ರಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ ಪಕ್ಷವನ್ನು ನೆಚ್ಚಿಕೊಂಡು ಕೂರುವುದರಲ್ಲಿ ಅರ್ಥವಿಲ್ಲವೆಂದಿದ್ದಾರೆ. ಆ ಮೂಲಕ, ಪ್ರಬಲ ಪ್ರಾದೇಶಿಕ ಪಕ್ಷಗಳ ಒಕ್ಕೂಟವನ್ನು ರಚಿಸುವ ನಿರ್ಧಾರದ ಬಗ್ಗೆ ಸೂಚನೆ ನೀಡಿದ್ದಾರೆ.

ಮತಯಂತ್ರಗಳನ್ನು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು, ಏಜೆನ್ಸಿಗಳನ್ನು ಬಳಸಿ ಅವರು (ಬಿಜೆಪಿ) ಗೆದ್ದಿದ್ದಾರೆ. ಅವರು  ನಗಾರಿ ಬಾರಿಸುತ್ತಿದ್ದಾರೆ. ಆದರೆ, ಸಂಗೀತ ಸೃಷ್ಟಿಸುತ್ತಿಲ್ಲ, ಸಂಗೀತಕ್ಕಾಗಿ ನಿಮಗೆ ಹಾರ್ಮೋನಿಯಂ ಬೇಕು ಎಂದು ಬ್ಯಾನರ್ಜಿ ಹೇಳಿರುವುದಾಗಿ Ndtv.com ವರದಿ ಮಾಡಿದೆ.

ಇವಿಎಂ ಸಾಗಾಟದ ಕುರಿತು ಸಮಾಜವಾದಿ ಆರೋಪದ ಬಗ್ಗೆ ಮಾತನಾಡಿದ ಮಮತಾ ಬ್ಯಾನರ್ಜಿ, “ಇವಿಎಂ ಸಾಗಾಟಕ್ಕಾಗಿ ಡಿಎಂ (ವಾರಣಾಸಿಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್) ಅಮಾನತುಗೊಂಡಿದ್ದರೆ ಅದು ದೊಡ್ಡ ವಿಷಯ. ಅಖಿಲೇಶ್‌ ಸೋಲುವಂತೆ ಮಾಡಲಾಯಿತು ಎಂದು ನನಗೆ ಅನ್ನಿಸುತ್ತದೆ. ಇದು ಕೊಳ್ಳೆಯಾಗಿದೆ. ಅಖಿಲೇಶ್‌ ಭ್ರಮನಿರಸನರಾಗಬಾರದು, ಹತಾಶರಾಗಬಾರದು. ಅವರು ಜನರೆಡೆಗೆ ಹೋಗಬೇಕು, ಇದನ್ನು ಪ್ರಶ್ನಿಸಬೇಕು” ಎಂದು ಹೇಳಿದ್ದಾರೆ.

"ಎಲ್ಲಾ ಇವಿಎಂಗಳು ಫೋರೆನ್ಸಿಕ್ ಪರೀಕ್ಷೆಗೆ ಒಳಗಾಗಬೇಕು, ಜನರು ಮತ ಚಲಾಯಿಸಲು ಬಳಸಿದ ಮತ್ತು ನಂತರ ಎಣಿಕೆಗೆ ತಂದ ಯಂತ್ರಗಳು ಒಂದೇ ಎಂಬುದನ್ನು ನೋಡಬೇಕು, ಬಿಜೆಪಿ ಗೆದ್ದಿದ್ದರೆ, ಅದು ಜನಮತದಿಂದ ಗೆದ್ದಿಲ್ಲ, ಇದು ಜನಾದೇಶವಲ್ಲ, ಯಂತ್ರೋಪಕರಣಗಳ ಆದೇಶ," ಎಂದು ಅವರು ಹೇಳಿದ್ದಾರೆ.

2024ರ ಲೋಕಸಭಾ ಚುನಾವಣೆಯ ಕುರಿತು ಮಾತನಾಡಿದ ಅವರು, “ಬಿಜೆಪಿ ವಿರುದ್ಧ ಹೋರಾಡಲು ಬಯಸುವ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ನಾನು ಹೇಳುತ್ತೇನೆ, ಕಾಂಗ್ರೆಸ್ ಅನ್ನು ಅವಲಂಬಿಸುವುದರಲ್ಲಿ ಯಾವುದೇ ಅರ್ಥವಿಲ್ಲ, ಕಾಂಗ್ರೆಸ್ ಮೊದಲು ತಮ್ಮ ಸಂಘಟನೆಯ ಮೂಲಕ ಇಡೀ ದೇಶವನ್ನು ವಶಪಡಿಸಿಕೊಳ್ಳುತ್ತಿತ್ತು, ಆದರೆ ಅವರಿಗೆ ಇನ್ನು ಆಸಕ್ತಿ ಇಲ್ಲ, ಮತ್ತು ಅವರು ತಮ್ಮ ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಹಲವಾರು ಪ್ರಾದೇಶಿಕ ರಾಜಕೀಯ ಪಕ್ಷಗಳಿವೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಮತ್ತು ಈ ಬಗ್ಗೆ ನಿರ್ಧಾರವನ್ನು ಖಂಡಿತವಾಗಿಯೂ ತೆಗೆದುಕೊಳ್ಳಬಹುದು." ಎಂದು ಅವರು ಹೇಳಿದ್ದಾರೆ.

 ನಾಲ್ಕು ರಾಜ್ಯಗಳಲ್ಲಿ ಬಿಜೆಪಿಯ ಗೆಲುವು 2024 ರ ಲೋಕಸಭಾ ಚುನಾವಣೆಯ ಜನರ ಚಿತ್ತವನ್ನು ಪ್ರತಿಬಿಂಬಿಸುತ್ತದೆ ಎಂಬ ಬಿಜೆಪಿ ನಾಯಕರ ಹೇಳಿಕೆಗಳನ್ನು ಅಲ್ಲಗೆಳೆದ ಬ್ಯಾನರ್ಜಿ, ಬಿಜೆಪಿಯವರು ಹಗಲುಗನಸು ಕಾಣುವುದನ್ನು ಬಿಡಬೇಕು ಎಂದಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X