ಅಗ್ನಿ ಸುರಕ್ಷತಾ ಪ್ರಮಾಣಪತ್ರ ಪಡೆಯುವುದು ಕಡ್ಡಾಯ ವಿಚಾರ: ಶಿಕ್ಷಣ ಇಲಾಖೆಗೆ ಹೈಕೋರ್ಟ್ ನೋಟಿಸ್

ಬೆಂಗಳೂರು, ಮಾ.11: ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಅಗ್ನಿ ಸುರಕ್ಷತಾ ಪ್ರಮಾಣಪತ್ರ ಪಡೆಯುವುದು ಕಡ್ಡಾಯಗೊಳಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶ ಪ್ರಶ್ನಿಸಿ ಕ್ಯಾಮ್ಸ್ ಸಂಘಟನೆ ಸಲ್ಲಿಸಿರುವ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಪಿ.ಕೃಷ್ಣಭಟ್ ಅವರಿದ್ದ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ವಾದ ಆಲಿಸಿದ ಪೀಠ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿತು.
ಜತೆಗೆ, ಈ ವಿಚಾರದ ಬಗ್ಗೆ ಮಾಹಿತಿ ಪಡೆದು ತಿಳಿಸುವಂತೆ ಸರಕಾರದ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು 2 ವಾರ ಮುಂದೂಡಿತು.
Next Story





