Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಂಚರಾಜ್ಯಗಳ ಚುನಾವಣಾ ಫಲಿತಾಂಶ...

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಕರ್ನಾಟಕದಲ್ಲೂ ಪುನರಾವರ್ತನೆ: ಸಿ.ಟಿ.ರವಿ ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ11 March 2022 8:52 PM IST
share
ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಕರ್ನಾಟಕದಲ್ಲೂ ಪುನರಾವರ್ತನೆ: ಸಿ.ಟಿ.ರವಿ ವಿಶ್ವಾಸ

ಬೆಂಗಳೂರು, ಮಾ.11: ಪಂಚರಾಜ್ಯ ಚುನಾವಣೆಯ ಮಾದರಿಯಲ್ಲಿ ಫಲಿತಾಂಶವು ಕರ್ನಾಟಕದಲ್ಲೂ ಬರಲಿದೆ 2023ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಏರುವುದು ಖಚಿತ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿಶ್ವಾಸ ವ್ಯಕ್ತಪಡಿಸಿದರು.

ಶುಕ್ರವಾರ ವಿಧಾನಸೌಧದಲ್ಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋವಾ ಮತ್ತಿತರ ರಾಜ್ಯಗಳಲ್ಲಿ ಬಂದ ಫಲಿತಾಂಶ ರಾಜ್ಯದಲ್ಲೂ ಪುನರಾವರ್ತನೆ ಆಗಲಿದೆ ಎಂಬುದನ್ನು ಕಾಂಗ್ರೆಸ್‍ನವರಿಗೆ ಹೇಳಲು ಬಯಸುತ್ತೇನೆ. ನಿಮ್ಮ ಒಡೆದಾಳುವ, ಮತೀಯವಾದದ, ಅಭಿವೃದ್ಧಿಹೀನ ರಾಜಕೀಯ ನಡೆಯುವುದಿಲ್ಲ.

ಕರ್ನಾಟಕದಲ್ಲೂ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕರ್ನಾಟಕದ ಜನ ಯಾವಾಗಲೂ ರಾಷ್ಟ್ರ ಹಿತದ ಪರವಾಗಿ ಮತ ಹಾಕಿದ್ದಾರೆ ಎಂದು ತಿಳಿಸಿದರು. 

4 ರಾಜ್ಯಗಳಲ್ಲಿ ಸಿಕ್ಕಿದ ಗೆಲುವು ಆಡಳಿತಪರ ಅಲೆಗೆ ಸಿಕ್ಕಿದ ಜನಮತ. ಅಭಿವೃದ್ಧಿ ಆಧರಿತ, ಜನಸ್ನೇಹಿ, ರಾಷ್ಟ್ರಹಿತದ ರಾಜಕಾರಣಕ್ಕೆ ಮತ ಲಭಿಸಿದೆ. ಜಾತಿ ಆಧರಿತ ರಾಜಕೀಯ, ಅಲ್ಪಸಂಖ್ಯಾತರ ಓಲೈಕೆ ರಾಜಕಾರಣಕ್ಕೆ ಗೆಲುವು ಖಚಿತ ಎಂಬ ಕಾಲ ಈಗ ಇಲ್ಲ. ಗೋವಾ ಚುನಾವಣೆ ಫಲಿತಾಂಶ ಬರುವ ಮೊದಲೇ ಕೆಲವರು ಕರ್ನಾಟಕದಿಂದ ವಿಶೇಷ ವಿಮಾನದಲ್ಲಿ ತೆರಳಿದರು. ಫಲಿತಾಂಶಕ್ಕೂ ಮೊದಲು ಕಾಂಗ್ರೆಸ್‍ನವರು ಸರಕಾರ ರಚನೆ ಸಂಬಂಧ ರಾಜ್ಯಪಾಲರ ಸಮಯ ನಿಗದಿಪಡಿಸಿದ್ದರು. ಬಂದ ದಾರಿಗೆ ಸುಂಕ ಇಲ್ಲದೇ ಹಿಂತಿರುಗಬೇಕಾಯಿತು ಎಂದು ಅವರು ವ್ಯಂಗ್ಯವಾಡಿದರು.

ಕಾಂಗ್ರೆಸ್ ಅಭಿವೃದ್ಧಿಯೂ ಇಲ್ಲದ ನೀತಿರಹಿತ ರಾಜಕಾರಣ ಮಾಡುತ್ತಿದೆ. ಕುಟುಂಬದ ನೆಲೆಯಿಂದ ಹೊರಗೆ ನಾಯಕತ್ವಕ್ಕೆ ನೆಲೆ ಒದಗಿಸಲಾಗದ ಸ್ಥಿತಿಯನ್ನು ಅದು ತಲುಪಿದೆ. ಕಾಂಗ್ರೆಸ್ ಉತ್ತರ ಪ್ರದೇಶದಲ್ಲಿ ಹೀನಾಯ ಸೋಲು ಕಂಡಿದೆ. ಪಂಜಾಬ್‍ನಲ್ಲಿ ಕಾಂಗ್ರೆಸ್ ಆಡಳಿತ ಇತ್ತು. ಅಲ್ಲಿ ಆಡಳಿತ ವಿರೋಧಿ ಫಲಿತಾಂಶ ಬಂದರೆ, 4 ರಾಜ್ಯಗಳಲ್ಲಿ ಆಡಳಿತ ಪರ ಫಲಿತಾಂಶ ಬಂದಿದೆ. ಇದು ಗಮನಿಸಬೇಕಾದ ಅಂಶ ಎಂದು ಅವರು ವಿಶ್ಲೇಷಿಸಿದರು.

ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಜನಮನ ಗೆದ್ದಿರುವುದಕ್ಕೆ ಮಣಿಪುರದ ಗೆಲುವು ನಿದರ್ಶನವಾಗಿದೆ. ಗೋವಾದಲ್ಲಿ ಮೂರನೇ ಬಾರಿಗೆ ಗೆದ್ದಿರುವುದು ಒಂದು ಐತಿಹಾಸಿಕ ದಾಖಲೆಯಾಗಿದೆ. ಇದು ರಾಷ್ಟ್ರವಾದ, ಸ್ಥಿರ ಸರಕಾರಕ್ಕೆ ಜನರ ಬಳುವಳಿ. ಒಂದು ದೇಶ ಒಂದು ಚುನಾವಣೆಯು ದೇಶದ ಅಭಿವೃದ್ಧಿ ದೃಷ್ಟಿಯಿಂದ ಅನುಷ್ಠಾನಕ್ಕೆ ಬರಬೇಕು. 5 ವರ್ಷಗಳ ಕಾಲ ಅಲ್ಲಲ್ಲಿ ಚುನಾವಣೆ ಅಭಿವೃದ್ಧಿ ದೃಷ್ಟಿಯಿಂದ ಸೂಕ್ತವಲ್ಲ ಎಂದು ಅವರು ನುಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಚಿವರಾದ ಭೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ, ಆನಂದ್ ಸಿಂಗ್, ಶಾಸಕರಾದ ಅರವಿಂದ ಬೆಲ್ಲದ್ ಮತ್ತು ರಾಜು ಗೌಡ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X