ಉಡುಪಿ : ಸಿರಪ್ ಎಂದು ಇಲಿ ಪಾಷಾಣ ಸೇವಿಸಿ ಮಹಿಳೆ ಮೃತ್ಯು

ಸಾಂದರ್ಭಿಕ ಚಿತ್ರ
ಬ್ರಹ್ಮಾವರ, ಮಾ.11: ಸಿರಪ್ ಬಾಟಲಿಯಲ್ಲಿದ್ದ ಇಲಿ ಪಾಷಾಣ ವನ್ನು ಕೆಮ್ಮುವಿನ ಸಿರಪ್ ಎಂದು ಭಾವಿಸಿ ಕುಡಿದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಪೆಜಮಂಗೂರು ಗ್ರಾಮದ ಗುಂಡಾಲು ಎಂಬಲ್ಲಿಂದ ವರದಿಯಾಗಿದೆ.
ಇಲ್ಲಿನ ಶೀನ ನಾಯ್ಕ ಎಂಬವರ ಪತ್ನಿ ದೇವಕಿ(47) ಕೆಮ್ಮು ಇದ್ದುದರಿಂದ ಮಾ.3ರ ಅಪರಾಹ್ನ ಒಂದು ಗಂಟೆ ಸುಮಾರಿಗೆ ಸಿರಪ್ ಎಂದು ಭಾವಿಸಿ ಅಕಸ್ಮಿಕವಾಗಿ ಇಲಿ ಪಾಷಾಣ ಕುಡಿದು ಅಸ್ವಸ್ಥಗೊಂಡಿದ್ದು, ಕೂಡಲೇ ಅವರಿಗೆ ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮಾ.10ರಂದು ಮೃತಪಟ್ಟಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





