Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನೋರಂಜನೆಯ ಜೊತೆ ಸಾಮಾಜಿಕ ಜಾಗೃತಿ...

ಮನೋರಂಜನೆಯ ಜೊತೆ ಸಾಮಾಜಿಕ ಜಾಗೃತಿ ಮೂಡಿಸುವ ಕಾರ್ಯವಾಗಲಿ : ಸುನಿಲ್‌ ಕುಮಾರ್

ಕಾರ್ಕಳ ಉತ್ಸವ, ಚಲನಚಿತ್ರೋತ್ಸವ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ11 March 2022 10:57 PM IST
share
ಮನೋರಂಜನೆಯ ಜೊತೆ ಸಾಮಾಜಿಕ ಜಾಗೃತಿ ಮೂಡಿಸುವ ಕಾರ್ಯವಾಗಲಿ : ಸುನಿಲ್‌ ಕುಮಾರ್

ಕಾರ್ಕಳ : ‌ಹಲವಾರು ವಿಚಾರಗಳನ್ನು ಜೋಡಿಸಿಕೊಂಡು ಕಾರ್ಕಳ ಉತ್ಸವ ನಡೆಯುತ್ತಿದೆ. ಚಲನಚಿತ್ರಗಳು ಮನೋರಂಜನೆಯ ಜೊತೆ ಸಾಮಾಜಿಕ ಜಾಗೃತಿಯನ್ನು ನಿರ್ಮಾಣ ಮಾಡಬೇಕು. ಈ ನಿಟ್ಟಿನಲ್ಲಿ ಉತ್ತಮ ಚಿತ್ರಗಳನ್ನು ಆಯ್ದುಕೊಂಡು ಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಗುತ್ತದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌ ನುಡಿದರು.

ಮಾ.11ರಂದು ಪ್ಲಾನೆಟ್‌ ಚಿತ್ರಮಂದಿರದಲ್ಲಿ ನಡೆದ ಕಾರ್ಕಳ ಉತ್ಸವದ ಪ್ರಯುಕ್ತ ಆಯೋಜಿಸಿರುವ ಚಲನಚಿತ್ರೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಮ್ಮ ನಡುವೆ ಇದ್ದಂತಹ ಕಲಾವಿದರು ಸೇರಿ ಮಾಡಿದಂತಹ ಚಿತ್ರಗಳು ಇಂದು ವಿದೇಶದಲ್ಲಿ ಕೂಡಾ ಪ್ರದರ್ಶಿಸಲ್ಪಡುತ್ತಿದೆ. ಎಲ್ಲಾ ಮನಸ್ಸಿನಲ್ಲಿರುವ ಭಾರವನ್ನು ತಿಳಿಗೊಳಿಸುವ ಕಾರ್ಯವನ್ನು ತುಳು ಚಲನಚಿತ್ರಗಳು ಮಾಡುತ್ತವೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತುಳುಚಿತ್ರರಂಗದ ನಟ, ನಿರ್ದೇಶಕ, ನಿರ್ಮಾಪಕ ದೇವದಾಸ್ ಕಾಪಿಕಾಡ್‌‌, ಸಿನಿಮಾಗಳು ನಿರ್ಮಾಣವಾಗುವುದಕ್ಕೆ ಚಿತ್ರಮಂದಿರಗಳ ಕೊರತೆಯಿರುವುದರಿಂದ ವರ್ಷಕ್ಕೆ ಬೆರಳೆಣಿಕೆಯಷ್ಟೇ ಚಿತ್ರಗಳು ಮೂಡಿ ಬರುತ್ತಿದೆ. ಒಳ್ಳೆಯ ಚಿತ್ರಗಳಿಗೆ ಸಬ್ಸಿಡಿ ಸಿಗುವಂತಾದರೆ ಭವಿಷ್ಯದಲ್ಲಿ ನಿರ್ಮಾಪಕರಿಗೆ ಇನ್ನೂ ಉತ್ತಮ ರೀತಿಯಲ್ಲಿ ಚಿತ್ರನಿರ್ಮಾಣಕ್ಕೆ ಹುರುಪು ಬರುತ್ತದೆ. ಸಿನಿಮಾ ಯಶಸ್ವಿಯಾಗುವುದರಲ್ಲಿ ಪತ್ರಕರ್ತರ ಪಾತ್ರವೂ ಮಹತ್ವವಾದುದು. ಕಾರ್ಕಳ ಉತ್ಸವ ಸಾಂಸ್ಕೃತಿಕವಾಗಿ ಹೊಸ ಲೋಕವನ್ನು ಸೃಷ್ಟಿಸಿದೆ ಎಂದರು.

ಮಾ. 11ರಿಂದ 13ರವರೆಗೆ ಕಾರ್ಕಳದ ಪ್ಲಾನೆಟ್ ಮತ್ತು ರಾಧಿಕಾ ಚಿತ್ರ ಮಂದಿರದಲ್ಲಿ ಉಚಿತ ಚಲನಚಿತ್ರ ಪ್ರದರ್ಶನದ ವ್ಯವಸ್ಥೆ ಕಲ್ಪಿಸಲಾಗಿದ್ದು, ಪ್ರತಿ ದಿನ ಬೆಳಿಗ್ಗೆ 10, ಮಧ್ಯಾಹ್ನ 1 ಹಾಗೂ ಸಂಜೆ 3-30ಕ್ಕೆ ಚಲನಚಿತ್ರ ಪ್ರದರ್ಶನಗೊಳ್ಳಲಿದೆ ಚಲನ ಚಿತ್ರಗಳ ವಿವರ ಈ ಕೆಳಗಿನಂತಿದೆ.

ಉರಿ ದಿ ಸರ್ಜಿಕಲ್‌ ಸ್ಟ್ರೈಕ್‌, ಮಿಶನ್ ಮಂಗಲ್‌ (ಹಿಂದಿ), ಮೋಹನದಾಸ, ಯುವರತ್ನಾ, ರಾಜಕುಮಾರ, ರಾಬರ್ಟ್‌, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು, ಒಂದು ಮೊಟ್ಟೆಯ ಕತೆ (ಕನ್ನಡ), ಮದಿಪು, ಪಡ್ಡಾಯಿ, ಗಿರಿಗಿಟ್‌, ಗಮ್ಜಾಲ್‌ (ತುಳು) ಚಲನಚಿತ್ರಗಳು ಮೂಡಿಬರಲಿವೆ.

ಕಾರ್ಯಕ್ರಮವನ್ನು ಶಿಕ್ಷಕ ನಾರಾಯಣ ಶೆಣೈ ನಿರೂಪಿಸಿ, ಪ್ಲಾನೆಟ್‌ ಚಿತ್ರಮಂದಿರದ ಮಾಲಕ ಜೆರಾಲ್ಡ್‌ ಸ್ವಾಗತಿಸಿ, ಶಿಕ್ಷಕ ದಿನೇಶ್‌ ಶೆಟ್ಟಿಗಾರ್‌ ವಂದಿಸಿದರು.

ರಾಧಿಕಾ ಚಿತ್ರಮಂದಿರದ ಮಾಲಕ ಮನೋಹರ್‌, ದಾವಣಗೆರೆ ವೃತ್ತಿರಂಗಭೂಮಿ ರಂಗಾಯಣ ಭೂಮಿ ಯ ನಿರ್ದೇಶಕ ಯಶವಂತ ಸರ್ದೇಶ್‌ ಪಾಂಡೆ, ಕಾರ್ಕಳ ಪುರಸಭೆಯ ಅಧ್ಯಕ್ಷೆ ಸುಮಾ ಕೇಶವ್‌ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X