ಅಸಮರ್ಪಕ ಮಾಹಿತಿಯುಳ್ಳ ನಾಮಪತ್ರ ಸಲ್ಲಿಕೆ ಆರೋಪ: ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣಗೆ ಹೈಕೋರ್ಟ್ ನಿಂದ ಸಮನ್ಸ್

ಬೆಂಗಳೂರು, ಮಾ.11: ಹಾಸನ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರ ಸದಸ್ಯತ್ವ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಸೂರಜ್ ರೇವಣ್ಣಗೆ ಸಮನ್ಸ್ ಜಾರಿ ಮಾಡಿದೆ.
ಈ ಕುರಿತು ಎಲ್.ಹನುಮೇಗೌಡ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ಹೈಕೋರ್ಟ್‍ನಲ್ಲಿ ನಡೆಯಿತು. ಅರ್ಜಿದಾರರು ಅಸಮರ್ಪಕ ಮಾಹಿತಿಯುಳ್ಳ ನಾಮಪತ್ರ ಸಲ್ಲಿಕೆ ಆರೋಪ ಮಾಡಿದ್ದು, ವಿಚಾರಣೆ ನಂತರ ಡಾ.ಸೂರಜ್ ರೇವಣ್ಣಗೆ ಹೈಕೋರ್ಟ್‍ನಿಂದ ಸಮನ್ಸ್ ಜಾರಿ ಮಾಡಿದೆ.
ವಿವಾಹದ ಮಾಹಿತಿ ಮುಚ್ಚಿಟ್ಟ ಆರೋಪ, ಪತ್ನಿಯ ಆಸ್ತಿ, ಆಭರಣದ ಮಾಹಿತಿ ನೀಡದ ಆರೋಪ ಹಿನ್ನಲೆಯಲ್ಲಿ ವಿಧಾನ ಪರಿಷತ್ ಸದಸ್ಯರಾಗಿ (ಮೇಲ್ಮನೆ) ಆಯ್ಕೆಯಾಗಿದ್ದನ್ನು ಅಸಿಂಧು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಸದ್ಯ ಈ ಕುರಿತು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಸಮನ್ಸ್ ಜಾರಿ ಮಾಡಿದೆ. ವಿಧಾನ ಪರಿಷತ್ ಸದಸ್ಯರಾಗಿ ಜನವರಿ 28 ಸೂರಜ್ ರೇವಣ್ಣ ಪ್ರಮಾಣವಚನ ಸ್ವೀಕರಿಸಿದ್ದರು.
Next Story





