'ಕಂದಾಯ ದಾಖಲೆ ಮನೆ ಬಾಗಿಲಿಗೆ' ಯೋಜನೆಗೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಗೆ ಇಂದು ಚಾಲನೆ ನೀಡಿದರು. ನಂತರ ಸಭಾ ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ತೋಟಗಾರಿಕೆ ಹಾಗೂ ಕೃಷಿ ಉತ್ಪನ್ನಗಳನ್ನು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ದವಸ ಧಾನ್ಯಗಳ ರಾಶಿ ಮಾಡಿದರು. ಸಚಿವರಾದ ಆರ್ ಅಶೋಕ, ಡಾ. ಕೆ. ಸುಧಾಕರ, ಎಂಟಿಬಿ ನಾಗರಾಜ, ಶಾಸಕ ನಾರಾಯಣ ಸ್ವಾಮಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ ಗಿರಿನಾಥ, ಭೂ ದಾಖಲೆ ಇಲಾಖೆಯ ಆಯುಕ್ತ ಮನಿಷ್ ಮೌದ್ಗಲ್, ನವೀನರಾಜ ಸಿಂಗ್ ಜಿಲ್ಲಾಧಿಕಾರಿ ಲತಾ ಮತ್ತು ಇತರರು ಉಪಸ್ಥಿತರಿದ್ದರು.
Next Story





