Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಬಿಜೆಪಿ...

ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಬಿಜೆಪಿ ಸರ್ಕಾರದ ತಾರತಮ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಆರೋಪ

ವಾರ್ತಾಭಾರತಿವಾರ್ತಾಭಾರತಿ12 March 2022 2:58 PM IST
share
ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಬಿಜೆಪಿ ಸರ್ಕಾರದ ತಾರತಮ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಆರೋಪ

ಬೆಂಗಳೂರು: ‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ನಿರಂತರವಾಗಿ ತಾರತಮ್ಯ ಮಾಡುತ್ತಿದೆ. ಮುಖ್ಯಮಂತ್ರಿಗಳು ಈ ತಾರತಮ್ಯವನ್ನು ಸರಿಪಡಿಸಬೇಕು ಅಥವಾ ಸಮಗ್ರ ಬೆಂಗಳೂರು ಅಭಿವೃದ್ಧಿ ಎಂದು ಹೇಳಿಕೊಳ್ಳುವ ಬದಲು, ಬಿಜೆಪಿ ಶಾಸಕರ ಕ್ಷೇತ್ರದ ಅಭಿವೃದ್ಧಿ ಎಂದು ಹೇಳಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಆಗ್ರಹಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಶಾಸಕರ 15 ಕ್ಷೇತ್ರಗಳಿಗೆ ಒಟ್ಟು 9888 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಿದ್ದು, ಕಾಂಗ್ರೆಸ್ ಶಾಸಕರ 12 ಕ್ಷೇತ್ರಗಳಿಗೆ 2,186.48 ಕೋಟಿ ರೂಪಾಯಿ ನೀಡಿದೆ. ಇನ್ನು ಜೆಡಿಎಸ್ ಶಾಸಕರಿರುವ ದಾಸರಹಳ್ಳಿಗೆ 288.5 ಕೋಟಿ ಕೊಟ್ಟಿದ್ದಾರೆ. ಆ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಕ್ಷೇತ್ರಗಳಿಗಿಂತ 5 ಪಟ್ಟು ಹೆಚ್ಚಿನ ಅನಪದಾನವನ್ನು ಬಿಜೆಪಿಯವರಿಗೆ ನೀಡಲಾಗಿದೆ’ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಬೆಂಗಳೂರಿಗೆ 7,200 ಕೋಟಿ, ಸಮ್ಮಿಶ್ರ ಸರ್ಕಾರದಲ್ಲಿ 1 ಸಾವಿರ ಕೋಟಿ ಹಣವನ್ನು ವಿವಿಧ ಕ್ಷೇತ್ರಗಳಿಗೆ ಅನುದಾನವಾಗಿ ನೀಡಿತ್ತು. ಈ ಹಣವನ್ನು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೊಡಲಾಗಿದ್ದ ಅನುದಾವನ್ನು ಹಿಂಪಡೆದು ಮುಖ್ಯಮಂತ್ರಿಗಳ ನಗರೊತ್ಥಾನ ಮರುಹಂಚಿಕೆ ಮಾಡಲಾಗಿದೆ. ಇತ್ತೀಚೆಗೆ ಅಮೃತ್ ನಗರ ಯೋಜನೆ ಅಡಿಯಲ್ಲಿ 3600 ಕೋಟಿ ಕೊಟ್ಟಿದ್ದಾರೆ. 1500 ಕೋಟಿಯನ್ನು ಮಳೆ ನೀರುಗಾಲುವೆಗಾಗಿ ನೀಡಾಗಿದೆ.

‘ಮುಖ್ಯಮಂತ್ರಿಗಳ ನಗರೋತ್ಥಾನ, ಅಮೃತ್ ನಗರ ಯೋಜನೆ ಹಾಗೂ ಬೃಹತ್ ಮಳೆನೀರುಗಾಲುವೆಗೆ ನೀಡಲಾಗಿರುವ ಅನುದಾನ ಎಲ್ಲದರಲ್ಲೂ ಬಿಜೆಪಿ ಶಾಸಕರಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ. ಮಳೆನೀರುಗಾಲುವೆಗೆ ನೀಡಲಾಗಿರುವ ಅನುದಾನದಲ್ಲಿ ಬಿಟಿಎಂ ಹಾಗೂ ಜಯನಗರ ಕ್ಷೇತ್ರಗಳಿಗೆ ಶೂನ್ಯ ಅನುದಾನ ಕೊಟ್ಟಿದ್ದಾರೆ’ ಎಂದು ಕಿಡಿಕಾರಿದರು.

‘ಈ ಮೂರು ಯೋಜನೆಗಳು ಸೇರಿದಂತೆ ಬಿಜೆಪಿ ಶಾಸಕರ ಕ್ಷೇತ್ರಗಳಾದ ಬೆಂಗಳೂರು ದಕ್ಷಿಣ 821.75 ಕೋಟಿ, ಬಸವನಗುಡಿ 377.5, ಬೊಮ್ಮನಹಳ್ಳಿ 915.83, ಸಿವಿ ರಾಮನ್ ನಗರ 485.93, ಚಿಕ್ಕಪೇಟೆ 380.4, ಗೋವಿಂದರಾಜನಗರ 630.5, ಮಹದೇವಪುರ 752.85, ಮಲ್ಲೇಶ್ವರಂ 403.6, ಪದ್ಮನಾಭನಗರ 415.24, ರಾಜಾಜಿನಗರ 335.2, ಯಲಹಂಕ, 665.56, ಕೆ.ಆರ್ ಪುರಂ 926.7, ಮಹಾಲಕ್ಷ್ಮಿ ಬಡಾವಣೆ 527.25, ರಾಜರಾಜೇಶ್ವರಿ ನಗರ 1253.35, ಯಶವಂತಪುರ 1046.48 ಕೋಟಿ ಅನುದಾನ ನೀಡಲಾಗಿದೆ. ಉಳಿದಂತೆ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಾದ ಬಿಟಿಎಂ ಬಡಾವಣೆ 232.84, ಬ್ಯಾಟರಾಯನಪುರ 253.39, ಚಾಮರಾಜಪೇಟೆ 136, ಗಾಂಧಿನಗರ 202.41, ಹೆಬ್ಬಾಶ 196.84, ಜಯನಗರ 182, ಪುಲಕೇಶಿನಗರ 140.95, ಸರ್ವಜ್ಞನಗರ 225.52, ಶಾಂತಿನಗರ 159.75, ವಿಜಯನಗರ 198.26, ಆನೇಕಲ್ 10, ಶಿವಾಜಿ ನಗರಕ್ಕೆ 248.52 ಕೋಟಿ ನೀಡಲಾಗಿದೆ. ಇನ್ನು ಜೆಡಿಎಶ್ ಶಾಸಕರಿರುವ ದಾಸರಹಳ್ಳಿ ಕ್ಷೇತ್ರಕ್ಕೆ 288.5 ಕೋಟಿ ಅನುದಾನ ನೀಡಲಾಗಿದೆ. ಹೀಗೆ ಬಿಜೆಪಿಯ ಇಂದಿನ ಹಾಗೂ ಈ ಹಿಂದೆ ಇದ್ದ ಮುಖ್ಯಮಂತ್ರಿಗಳು ಈ ರೀತಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ನಮ್ಮ ಕ್ಷೇತ್ರದ ಜನರು ಕೂಡ ತೆರಿಗೆ ಪಾವತಿಸುತ್ತಿದ್ದು, ಬಿಜೆಪಿ ಸರ್ಕಾರದಲ್ಲಿ ಇಂತಹ ತಾರತಮ್ಯ ನಿರಂತರವಾಗಿ ನಡೆಯುತ್ತಿದೆ’ ಎಂದು ಆರೋಪಿಸಿದರು.

‘ಬಿಜೆಪಿ ಸರ್ಕಾರ ಸಮಗ್ರ ಬೆಂಗಳೂರು ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿ ಈ ರೀತಿ ಅನುದಾನದಲ್ಲಿ ತಾರತಮ್ಯ ಮಾಡಿದರೆ ಬೆಂಗಳೂರು ಸಮಗ್ರ ಅಭಿವೃದ್ಧಿ ಹೇಗೆ ಸಾಧ್ಯವಾಗುತ್ತದೆ? ನಾನು ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿದ್ದ ಸಂದರ್ಭದಲ್ಲಿ ಯಾರೂ ಕೂಡ ಅನುದಾನ ಕಡಿಮೆಯಾಗಿದೆ ಎಂದು ಹೇಳಿರಲಿಲ್ಲ. ಕಾಂಗ್ರೆಸ್ ಶಾಸಕರಿಗೆ ಹೆಚ್ಚಿನ ಅನುದಾನ ಕೊಟ್ಟಿದ್ದರೂ ಇಷ್ಟು ದೊಡ್ಡ ಪ್ರಮಾಣದಲ್ಲಿ ತಾರತಮ್ಯ ಮಾಡಿರಲಿಲ್ಲ’ ಎಂದರು.

‘ಈ ವಿಚಾರವಾಗಿ ನಾನು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಹಾಗೂ ಈ ವಿಚಾರವನ್ನು ವಿಧಾನಸಭೆ ಕಲಾಪದಲ್ಲಿ ಚರ್ಚಿಸುತ್ತೇನೆ’ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X