ಬೆಂಗಳೂರು: ಗಾಳಿಯಲ್ಲಿ ಗುಂಡು ಹಾರಿಸಿದ ಮಾಜಿ ಯೋಧನ ಬಂಧನ

ಬೆಂಗಳೂರು: ಗಾಳಿಯಲ್ಲಿ ಗುಂಡು ಹಾರಿಸಿದ್ದ ಮಾಜಿ ಯೋಧ ರಾಜೇಶ್ ಕುಮಾರ್ ಪಾಂಡೆ ಅವರನ್ನು ಎಚ್‍ಎಎಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಎಚ್‍ಎಎಲ್‍ನ ಆನಂದ ರಾಮ್ ರೆಡ್ಡಿ ಲೇಔಟ್‍ನ ಖಾಸಗಿ ಕಂಪನಿಯಲ್ಲಿ ರಾಜೇಶ್ ಕುಮಾರ್ ಪಾಂಡೆ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಖಾಸಗಿ ಕಂಪನಿಯು ತನ್ನ ಸಿಬ್ಬಂದಿಗೆ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ಮ್ಯೂಸಿಕ್ ಸೌಂಡ್ ಅತಿಯಾಗಿದ್ದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಮನೆಯವರಿಗೆ ಕಿರಿಕಿರಿ ಉಂಟಾಗಿತ್ತು. ಸೌಂಡ್ ಕಡಿಮೆ ಮಾಡುವಂತೆ ಸಮೀಪದ ಅಪಾರ್ಟ್‍ಮೆಂಟ್ ನಿವಾಸಿ ಸತೀಶ್ ರೆಡ್ಡಿ ಮನವಿ ಮಾಡಲು ಹೋಗಿದ್ದರು. ಈ ವೇಳೆ ಗಲಾಟೆ ಮಾಡಲು ಬಂದಿದ್ದಾರೆ ಎಂದು ಭಾವಿಸಿದ ನಿವೃತ ಯೋಧ ಗಾಳಿಯಲ್ಲಿ ಗುಂಡು ಹಾರಿಸಿ, ಹೆದರಿಸಿ ಕಳುಹಿಸಿದ್ದಾರೆನ್ನಲಾದ ಘಟನೆ ನಡೆದಿದೆ.
ಸತೀಶ್ ರೆಡ್ಡಿ ಎಚ್‍ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.
Next Story





