Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಮಾ.28-29ಕ್ಕೆ ಕೇಂದ್ರದ...

ಚಿಕ್ಕಮಗಳೂರು: ಮಾ.28-29ಕ್ಕೆ ಕೇಂದ್ರದ ರೈತ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 March 2022 9:36 PM IST
share
ಚಿಕ್ಕಮಗಳೂರು: ಮಾ.28-29ಕ್ಕೆ ಕೇಂದ್ರದ ರೈತ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

ಚಿಕ್ಕಮಗಳೂರು, ಮಾ.12: ಕೇಂದ್ರ ಸರಕಾರದ ಕಾರ್ಮಿಕ ಮತ್ತು ರೈತ ವಿರೋಧಿ ನೀತಿ ಖಂಡಿಸಿ ಮಾ.28, 29ರಂದು ಎರಡು ದಿನಗಳ ಕಾಲ ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲು ನಗರದ ಎಐಟಿಯುಸಿ ಕಚೇರಿಯಲ್ಲಿ ಶನಿವಾರ ನಡೆದ ವಿವಿಧ ಕಾರ್ಮಿಕ ಮತ್ತು ರೈತ ಸಂಘಟನೆಗಳ ಸಭೆ ನಿರ್ಣಯಿಸಿದೆ.

ರೈತ ಸಂಘದ ರಾಜ್ಯ ಸಮಿತಿ ಸದಸ್ಯ ಕೆ.ಕೆ.ಕೃಷ್ಣೇಗೌಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೇಂದ್ರದ ಕಾರ್ಮಿಕ ಸಂಘಟನೆಗಳ ಕರೆಯ ಮೇರೆಗೆ “ಭಾರತ ಉಳಿಸಿ ಜನರನ್ನು ರಕ್ಷಿಸಿ” ಘೋಷಣೆಯಡಿ ಮಾ.28ರಂದು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಹಾಗೂ ಮಾ.29ರಂದು ಚಿಕ್ಕಮಗಳೂರು ನಗರದಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದ್ದು, ಮಾ.29ರಂದು ನಗರದ ಸಂತೆ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಆಜಾದ್ ಪಾರ್ಕ್ ವೃತ್ತದಲ್ಲಿ  ಬಹಿರಂಗ ಸಭೆ ನಡೆಸಲು ನಿರ್ಣಯಿಸಲಾಯಿತು.

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕಾರ್ಮಿಕ ಸಂಘಟನೆಗಳ ಜಂಟಿ ಸಂಚಾಲಕ ಬಿ.ಅಮ್ಜದ್, ಕೇಂದ್ರ ಸರಕಾರ ಕಾರ್ಮಿಕರು ಮತ್ತು ರೈತರ ಧಮನ ನೀತಿ ಅನುಸರಿಸುತ್ತಿದೆ, ಅದನ್ನು ವಿರೋಧಿಸಿ ಅಖಿಲ ಭಾರತ ಮಟ್ಟದಲ್ಲಿ ಮಾ.26 ಭಾರೀ ಪ್ರತಿಭಟನೆ ಮತ್ತು ಹಲವು ರೀತಿಯ ಹೋರಾಟಗಳು ಅನೇಕ ಬಾರಿ ನಡೆದಿದ್ದರೂ ಕೇಂದ್ರ ಸರಕಾರ ಮಾತ್ರ ದುಡಿಯುವ ವರ್ಗಕ್ಕೆ ಸ್ಪಂದಿಸದೇ ಅವರನ್ನು ಕಡೆಗಣಿಸಿದೆ. ಈ ಹಿನ್ನೆಲೆಯಲ್ಲಿ 10 ಕಾರ್ಮಿಕ ಸಂಘಟನೆಗಳು ಒಗ್ಗೂಡಿ ಕೇಂದ್ರದ ವಿರುದ್ಧ ದೇಶಾದ್ಯಂತ ಮಾ.28 ಮತ್ತು 29ರಂದು ಸಾರ್ವತ್ರಿಕ ಮುಷ್ಕರ ನಡೆಸಲು ನಿರ್ಣಯಿಸಿದೆ. ಜಿಲ್ಲೆಯಲ್ಲೂ ಅದಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಮಾತನಾಡಿದ ವಿವಿಧ ಕಾರ್ಮಿಕ ಮತ್ತು ರೈತ ಸಂಘಟನೆಗಳ ಮುಖಂಡರು, ಕೇಂದ್ರದ ಬಿಜೆಪಿ ಸರಕಾರ ಕಾರ್ಮಿಕ ಮತ್ತು ರೈತ ವಿರೋಧಿಯಾಗಿದ್ದು, ಬಂಡವಾಳ ಶಾಹಿಗಳ ಕಾರ್ಪೋರೇಟ್‍ಗಳ ಪರವಾಗಿದೆ, ದುಡಿಯುವ ವರ್ಗದ ಜನರ ಬದುಕಿಗೆ ಮಾರಕವಾದ ನೀತಿಗಳ ಜಾರಿಗೆ ಹವಣಿಸುತ್ತಿದೆ ಎಂದು ಆರೋಪಿಸಿದರು.

ಪ್ಲಾಂಟೇಷನ್ ಕಾರ್ಮಿಕರಿಗೆ ಮಾಸಿಕವಾಗಿ ಕನಿಷ್ಠ ಇಪ್ಪತೊಂದು ಸಾವಿರ ರೂ. ವೇತನ ನಿಗಧಿಗೊಳಿಸಬೇಕು, ಕಾರ್ಮಿಕ ವಿರೋಧಿ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು, ಎಲ್ಲಾ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಖಾತ್ರಿಪಡಿಸಿ ವಿದ್ಯುಚ್ಚಕ್ತಿ ಮಸೂದೆ ಹಿಂಪಡೆಯಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಹೆಚ್ಚಿನ ಅನುದಾನ ಒದಗಿಸಬೇಕು, ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು, ಎಲ್ಲಾ ವಲಯಗಳ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು. ಅಂಗನವಾಡಿ ಬಿಸಿಯೂಟ, ಆಶಾ ಕಾರ್ಯಕರ್ತೆಯರು ಸೇರಿದಂತೆ ಸ್ಕೀಂ ವರ್ಕರ್‍ಗಳಿಗೆ ಶಾಸನ ಬದ್ದ ಕನಿಷ್ಠ ವೇತನ ನಿಗಧಿಪಡಿಸಬೇಕು. ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಯ ವ್ಯವಸ್ಥೆಯನ್ನೇ ಮುಂದುವರೆಸಬೇಕು, ಸರಕಾರಿ ಸ್ವಾಮ್ಯದ ಉದ್ದಿಮೆಗಳ ಖಾಸಗೀಕರಣ ಕೈಬಿಡಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಹೆಚ್.ಎಂ.ರೇಣುಕಾರಾಧ್ಯ, ಪ್ಲಾಂಟೇಷನ್ ಕಾರ್ಮಿಕ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದ ಸ್ವಾಮಿ, ಐಎನ್‍ಟಿಯುಸಿ ಮುಖಂಡರಾದ ರಾಮಚಂದ್ರ ಒಡೆಯರ್, ಗೋವಿಂದನ್, ಟಿಯುಸಿಐನ ಎಸ್.ಶೇಖರ್, ಬ್ಯಾಂಕ್ ಸಂಘಟನೆಯ ಬಸವರಾಜ್, ಅಂಚೆ ನೌಕರರ ಸಂಘಟನೆಯ ಲೋಹಿತ್, ಪ್ರಗತಿಪರ ಕಾರ್ಮಿಕ ಸಂಘಟನೆಯ ಸುರೇಶ್, ಕಟ್ಟಡ ಕಾರ್ಮಿಕರ ಸಂಘಟನೆಯ ಅಧ್ಯಕ್ಷ ವಸಂತಕುಮಾರ್, ಉಪಾಧ್ಯಕ್ಷ ಮಂಜೇಗೌಡ, ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಎಸ್.ವಿಜಯಕುಮಾರ್, ಅಂಗನವಾಡಿ ಸಂಘಟನೆಯ ಪಾರ್ವತಿ, ಲತಾ, ಶೈಲಾ, ಉಷಾ, ಬಿಸಿಯೂಟ ಸಂಘಟನೆಯ ಇಂದುಮತಿ, ಪ್ಲಾಂಟೇಷನ್ ಸಂಘಟನೆಯ ಎ.ಜಯಕುಮಾರ್ ಸಭೆಯಲ್ಲಿ ಪಾಲೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X