ಕುಂದಾಪುರ : ಕೆಎಸ್ಆರ್ಟಿಸಿ ಬಸ್ನಲ್ಲಿ ವಿನೂತನ ಮಾದರಿ ಸ್ಮಾರ್ಟ್ ತರಗತಿ

ಕುಂದಾಪುರ : ಬಗ್ವಾಡಿ ನೂಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿ ವಿನೂತನ ಮಾದರಿ ಸ್ಮಾರ್ಟ್ ತರಗತಿ ಉದ್ಘಾಟನೆ ಶನಿವಾರ ನಡೆಯಿತು.
ತರಗತಿಯನ್ನು ಉದ್ಘಾಟಿಸಿದ ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಮಾತನಾಡಿ, ಗ್ರಾಮೀಣ ಶಾಲೆಗಳ ಮೂಲಸೌಕರ್ಯ ಒದಗಿಸುವ ಕೊಡುವ ಕಾರ್ಯ ಆಗುತ್ತಿದೆ. ಸಮಾಜದ ಕಟ್ಟಕಡೆಯ ಮಗು ವಿದ್ಯಾವಂತನಾದರೆ ಮಾತ್ರ ದೇಶ ಬದಲಾಗಲು ಸಾಧ್ಯ. ಕಷ್ಟದಿಂದ ಓದಿದ ವಿದ್ಯಾರ್ಥಿಗಳು ಭವಿಷ್ಯತ್ತಿನ ಉನ್ನತ ಸ್ಥಾನಕೆರುತ್ತಾರೆ. ಶಿಕ್ಷಣದಿಂದ ಯಾವ ಮಗುವೂ ಕೂಡಾ ವಂಚಿತವಾಗ ಬಾರದು ಎಂದರು.
ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಹಕ್ಲಾಡಿ ಗ್ರಾಪಂ ಅಧ್ಯಕ್ಷ ಚೇತನ್ ಕುಮಾರ್, ಕೆಎಸ್ಆರ್ಟಿಸಿ ಮಂಗಳೂರು ವಿಭಾಗ ಮುಖ್ಯಸ್ಥ ಕಮಲ್ ಕುಮಾರ್, ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಂ. ಮುಂದಿನಮನಿ, ಹಕ್ಲಾಡಿ ಗ್ರಾಪಂ ಸದಸ್ಯ ಅಶೋಕ ಪೂಜಾರಿ, ಶಾರದಾ ಮೊಗ ವೀರ, ಭಾರತ ಸರಕಾರದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ನಿವೃತ್ತ ನಿರ್ದೇಶಕ ಬಿ.ಎನ್.ಶೆಟ್ಟಿ, ಪುರೋಹಿತರಾದ ನಾಗಪ್ಪಯ್ಯ ಭಟ್ ಬೈಲೂರು, ಕೆಎಸ್ಆರ್ಟಿಸಿ ಡಿಪೋ ಮೆನೇಜರ್ ರಾಜೇಶ, ಎಸ್ಡಿಎಂಸಿ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಮ್, ಬಗ್ವಾಡಿ ಮಹಿಷಾಸುರ ಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಉದಯಕುಮಾರ್ ಹಟ್ಟಿಯಂಗಡಿ, ಉದ್ಯಮಿ ಕೆ.ಅಬ್ದುಲ್ ರೆಹಮಾನ್, ಅಜಿತ್ ಕುಮಾರ್ ಬಗ್ವಾಡಿ, ಬಗ್ವಾಡಿ ಮಹಿಷಾಸುರಮರ್ದಿನಿ ಯುವಕ ಮಂಡಲದ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ ಪುತ್ರನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಿ.ರಾಜೀವ ಶೆಟ್ಟಿ, ವಿದ್ಯಾರ್ಥಿ ನಾಯಕಿ ಪ್ರಜ್ಞಾ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಿನಿಯೇಚರ್ ಬಸ್ ನಿರ್ಮಾತೃ ಪ್ರಶಾಂತ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶೈಲಜಾ ವಿ.ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಸಂತರಾಜ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.