ಅನಿಲ್ ದೇಶಮುಖ್ ಭ್ರಷ್ಟಾಚಾರ ಪ್ರಕರಣ: ಸಿಬಿಐನಿಂದ ಮುಂಬೈ ಪೊಲೀಸ್ ಆಯುಕ್ತರ ವಿಚಾರಣೆ

ಮುಂಬೈ,ಮಾ.12: ಭ್ರಷ್ಟಾಚಾರ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹಸಚಿವ ಅನಿಲ ದೇಶಮುಖ ವಿರುದ್ಧದ ತನ್ನ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ಶನಿವಾರ ಮುಂಬೈ ಪೊಲೀಸ್ ಆಯುಕ್ತ ಸಂಜಯ ಪಾಂಡೆಯವರನ್ನು ವಿಚಾರಣೆಗೊಳಪಡಿಸಿದೆ.
ಬಾಂಬೆ ಉಚ್ಚ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ನಡೆಸುತ್ತಿರುವಾಗ ದೇಶಮುಖ ವಿರುದ್ಧದ ದೂರನ್ನು ಹಿಂದೆಗೆದುಕೊಳ್ಳುವಂತೆ ಮಾಜಿ ಪೊಲೀಸ್ ಆಯುಕ್ತ ಕರಮಬೀರ್ ಸಿಂಗ್ ಅವರ ಮೇಲೆ ಪ್ರಭಾವ ಬೀರಲು ಯತ್ನಿಸಿದ್ದರು ಎಂಬ ಆರೋಪಗಳ ಕುರಿತಂತೆ ಸಿಬಿಐ ಪಾಂಡೆಯವರನ್ನು ಸುಮಾರು ಆರು ಗಂಟೆಗಳ ಕಾಲ ಪ್ರಶ್ನಿಸಿತು ಎಂದು ಅಧಿಕಾರಿಗಳು ತಿಳಿಸಿದರು.
ಸಿಬಿಐ ಕ್ರಿಮಿನಲ್ ಒಳಸಂಚು ಮತ್ತು ಭ್ರಷ್ಟಾಚಾರ ಆರೋಪಗಳಲ್ಲಿ ದೇಶಮುಖ ಮತ್ತು ಇತರರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದೆ.
Next Story





