Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗದಲ್ಲಿ ಮಂಜುನಾಥ ಭಂಡಾರಿಗೆ...

ಶಿವಮೊಗ್ಗದಲ್ಲಿ ಮಂಜುನಾಥ ಭಂಡಾರಿಗೆ ಅಭಿನಂದನಾ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ13 March 2022 4:21 PM IST
share
ಶಿವಮೊಗ್ಗದಲ್ಲಿ ಮಂಜುನಾಥ ಭಂಡಾರಿಗೆ ಅಭಿನಂದನಾ ಸಮಾರಂಭ

ಶಿವಮೊಗ್ಗ: ನೂತನವಾಗಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಮಂಜುನಾಥ ಭಂಡಾರಿ ಅವರಿಗೆ  ಅಭಿನಂದನಾ ಸಮಾರಂಭ ಇಂದು ಶಿವಮೊಗ್ಗದ  ಕುವೆಂಪು ರಂಗಮಂದಿರದಲ್ಲಿ ನಡೆಯಿತು.

ಸಮಾರಂಭ ಉದ್ಘಾಟಿಸಿ ಮಾತನಾಡಿದ ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಯುವ ನಾಯಕರ ಪಡೆ ಕಟ್ಟಿಕೊಂಡು ರಾಜಕೀಯಕ್ಕೆ ಪರಿಚಯಿಸಿದ ಅಪರೂಪದ ವ್ಯಕ್ತಿಯಾಗಿರುವ ಮಂಜುನಾಥ ಭಂಡಾರಿ ಅವರ ಆಶಯ ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದೆ ಎಂದರು.

ಪ್ರತಿಫಲಾಪೇಕ್ಷೆ ಇಲ್ಲದೇ, ಅಧಿಕಾರದ ಲಾಲಸೆ ಇಲ್ಲದೇ ಪಕ್ಷ ಸಂಘಟನೆಗೆ ತಮ್ಮ ಇಡೀ ಜೀವನ ಮುಡುಪಾಗಿಟ್ಟವರು ಮಂಜುನಾಥ ಭಂಡಾರಿ, ವಿದ್ಯಾರ್ಥಿ ದೆಸೆಯಿಂದಲೇ ರಾಜಕೀಯಕ್ಕೆ ಪಾದಾರ್ಪಣೆ ಮಾಡಿ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಯುವ ರಾಜಕಾರಣಿಯಾಗಿ ಪಕ್ಷದ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಪಕ್ಷದ ಹಿರಿಯ ಮುಖಂಡರಾದ ಆಸ್ಕರ್ ಫೆರ್ನಾಂಡೀಸ್, ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದೊಂದಿಗೆ ಅನೇಕ ಜವಾಬ್ದಾರಿ ಹೊತ್ತುಕೊಂಡು ಪಕ್ಷಕ್ಕೆ ಸೇವೆ ಸಲ್ಲಿಸಿರುವ ಇವರು 20 ವರ್ಷಗಳ ಹಿಂದೆಯೇ ವಿಧಾನ ಪರಿಷತ್ ಅಥವಾ ರಾಜ್ಯಸಭಾ ಸದಸ್ಯರಾಗಬಹುದಿತ್ತು. ತಡವಾಗಿಯಾದರೂ ಸ್ಪರ್ಧೆ ಮಾಡಿ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ ಎಂದರು.

ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಮಾತನಾಡಿ, ಭಂಡಾರಿಯವರು ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಸ್ನೇಹಜೀವಿಯಾಗಿದ್ದಾರೆ. ಯುವಕರ ಆಶಾಕಿರಣವಾಗಿದ್ದಾರೆ. ಶಿಕ್ಷಣ ಮತ್ತು ಉದ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದರು.

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ, ವಿದ್ಯಾರ್ಥಿ ಜೀವನದಿಂದಲೂ ಪಕ್ಷ ಸಂಘಟನೆ ಹಾಗೂ ಪಕ್ಷ ಬೆಳೆಸುವ ಕಾರ್ಯವೈಖರಿ ಮಂಜುನಾಥ ಭಂಡಾರಿ ಅವರಿಂದ ಕಲಿಯಬೇಕಾಗಿದೆ. ಹಾಗೂ ಅವರ ಮಾರ್ಗದರ್ಶನ ಇಂದಿನ ಯುವ ಪೀಳಿಗೆಗೆ ಅಗತ್ಯವಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮಾತನಾಡಿ, ಕಾಲೇಜು ದಿನಗಳಿಂದಲೂ ನಾನು ಮತ್ತು ಮಂಜುನಾಥ ಭಂಡಾರಿ ಅವರು ಆತ್ಮೀಯ ಸ್ನೇಹಿತರು. ಅವರು ಎನ್.ಎಸ್.ಯು.ಐ.ನಲ್ಲಿದ್ದರು. ನಾನು ಎಬಿವಿಪಿಯಲ್ಲಿದ್ದೆ. ಈಗ ಬೇರೆ ಬೇರೆ ಪಕ್ಷದಲ್ಲಿದ್ದೇವೆ. ಆದರೂ, ನಮ್ಮ ಸ್ನೇಹಕ್ಕೆ ಯಾವುದೇ ರೀತಿ ಅಡ್ಡಿಯಾಗಿಲ್ಲ. ಚುನಾವಣಾ ಸಮಯದಲ್ಲಿ ಮಾತ್ರ ನಮ್ಮ ನಮ್ಮ ಕಿತ್ತಾಟಗಳಿರುತ್ತವೆ. ಆಮೇಲೆ ನಮ್ಮ ಸ್ನೇಹಕ್ಕೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ರಾಜಕೀಯ ಸಿದ್ಧಾಂತಗಳೇ ಬೇರೆ, ಸ್ನೇಹದ ತತ್ವವೇ ಬೇರೆ ಎಂದರು.

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷ ಬಲಿಷ್ಠಗೊಳ್ಳಲು ಭಂಡಾರಿಯವರು ಕಾರಣವಾಗಿದ್ದಾರೆ. ಅವರು ಒಂದು ರೀತಿಯಲ್ಲಿ ಸೈನಿಕನಿದ್ದಂತೆ. ಲೋಕಸಭೆ ಪ್ರವೇಶ ಯಾವಾಗಲೋ ಪಡೆಯಬೇಕಿತ್ತು. ಆದರೆ, ಆಗಿರಲಿಲ್ಲ. ಈಗ ಪರಿಷತ್ ಸದಸ್ಯರಾಗಿದ್ದಾರೆ. ಅವರಿಂದ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯಾಗಲಿ ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಮಂಜುನಾಥ ಭಂಡಾರಿ, ನಾನು ಸನ್ಮಾನ ಮತ್ತು ಅಭಿನಂದನೆಗಳಿಂದ ಯಾವತ್ತೂ ದೂರ. ಆದರೆ, ನನ್ನ ಸಹೋದ್ಯೋಗಿಗಳು ಮತ್ತು ಪಕ್ಷದ ಕಾರ್ಯರ್ತರು 35 ವರ್ಷಗಳಿಂದ ನೀವು ಹೇಳಿದ್ದನ್ನು ನಾವು ಕೇಳಿದ್ದೇವೆ. ಈ ಬಾರಿ ನೀವು ಅಭಿನಂದನೆ ಸ್ವೀಕರಿಸಲೇಬೇಕೆಂದು ಒತ್ತಡ ಹೇರಿದ್ದಕ್ಕೆ ಒಪ್ಪಿಕೊಂಡಿದ್ದೇನೆ. ಕಾಂಗ್ರೆಸ್ ಪಕ್ಷ ಕಟ್ಟಿ ಬೆಳೆಸುವ ಆಸೆ ಬಿಟ್ಟರೆ ನಾನು ಯಾವತ್ತೂ ಎಂಪಿ, ಎಂಎಲ್ಎ ಆಗಬೇಕೆಂಬ ಆಸೆ ಹೊಂದರಲಿಲ್ಲ. ಬಯಸಿದ್ದಲ್ಲಿ ಯಾವತ್ತೋ ನನಗೆ ಸಿಗುತ್ತಿತ್ತು. ರಾಜಕಾರಣ, ಚುನಾವಣೆ ಕೇವಲ ಎರಡು ತಿಂಗಳಿಗಷ್ಟೇ ಉಳಿದ 4 ವರ್ಷ 10 ತಿಂಗಳು ಎಲ್ಲಾ ಪಕ್ಷದವರು ಕೂಡ ನನಗೆ ಆತ್ಮೀಯತೆಯಿಂದ ಬೆಳೆಸಿದ್ದಾರೆ ಮತ್ತು ಉತ್ತಮ ಸಂಬಂಧ ಹೊಂದಿದ್ದಾರೆ. ಆದ್ದರಿಂದ ದಕ್ಷಿಣ ಕನ್ನಡದಲ್ಲಿ ನನ್ನ ಗೆಲುವು ಸಾಧ್ಯವಾಯಿತು. ನನ್ನ ಹುಟ್ಟಿ ಬೆಳೆದಿದ್ದು ಶಿವಮೊಗ್ಗ ಜಿಲ್ಲೆಯಲ್ಲಿ. ಶಿವಮೊಗ್ಗ ಜಿಲ್ಲೆಯನ್ನು ಮರೆತುಬಿಡುವ ಪ್ರಶ್ನೆಯೇ ಇಲ್ಲ ಎಂದರು.

ಈ ಸಂದರ್ಭದಲ್ಲಿ ಮಂಜುನಾಥ ಭಂಡಾರಿ ಹಾಗೂ ಶ್ರೀಮತಿ ಪ್ರಸನ್ನಾ ಭಂಡಾರಿ ಅವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದ ಸಾನಿಧ್ಯವನ್ನು ಮಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ ಮಹಾರಾಜ್ ವಹಿಸಿದ್ದರು. ವೇದಿಕೆಯಲ್ಲಿ ಮಾಜಿ ಶಾಸಕ ಮಧುಬಂಗಾರಪ್ಪ, ಅಭಿನಂದನಾ ಸಮಿತಿ ಅಧ್ಯಕ್ಷ ನಾಗರಾಜ್, ರಾಧಾಕೃಷ್ಣ, ನಿವೃತ್ತ ಪೊಲೀಸ್ ಅಧಿಕಾರಿ ಕೆಂಪಯ್ಯ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X