Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಣಕೊಟ್ಟು ಆಕ್ಸಿಜನ್ ಖರೀದಿ ಮಾಡುವ...

ಹಣಕೊಟ್ಟು ಆಕ್ಸಿಜನ್ ಖರೀದಿ ಮಾಡುವ ಪರಿಸ್ಥಿತಿ ಬರುವುದು ಬೇಡ: ಶ್ರೀ ಭಟ್ಟಾಚಾರ್ಯ ವರ್ಯ

ಕೃಷಿ ಮೇಳ ಸಮಾರೋಪ ಸಮಾರಂಭ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ13 March 2022 9:54 PM IST
share
ಹಣಕೊಟ್ಟು ಆಕ್ಸಿಜನ್ ಖರೀದಿ ಮಾಡುವ ಪರಿಸ್ಥಿತಿ ಬರುವುದು ಬೇಡ: ಶ್ರೀ ಭಟ್ಟಾಚಾರ್ಯ ವರ್ಯ

ಮಂಗಳೂರು (ಕೊಲ್ನಾಡು) : ರಾಜ್ಯಮಟ್ಟದ ಕೃಷಿ ಮೇಳದ ಕೊನೆಯ ದಿನವಾದ ರವಿವಾರ ಸಂಜೆ ಶ್ರೀ ರಾಮಕೃಷ್ಣ ಪೂಂಜಾ ವೇದಿಕೆಯಲ್ಲಿ ಸಮಾರೋಪ ಸಭಾ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.

ಅತಿಥಿಗಳನ್ನು ಕೃಷಿ ಮೇಳದ ಉಸ್ತುವಾರಿ ಸಮಿತಿ ಸದಸ್ಯ ಮಹಿಮ್ ಹೆಗ್ಡೆ ಸ್ವಾಗತಿಸಿದರು.

ಕೃಷಿ ಮೇಳದ ಕೋಶಾಧಿಕಾರಿ ಜಗದೀಶ್ ಪೈ ಅವರು ಕೃಷಿ ಮೇಳ ಕೃಷಿ ಸಿರಿ-2022 ಆಯೋಜನೆಯ ಹಿನ್ನೆಲೆ, ವಿನಯ ಕೃಷಿ ಬೆಳೆಗಾರರ ಸಂಘ ಹುಟ್ಟಿಕೊಳ್ಳಲು ಪ್ರೇರಣೆಯ ಕುರಿತು ಪ್ರಾಸ್ತಾವಿಕ ಮಾತಾನ್ನಾಡಿದರು.

ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಿದ ಮೂಡಬಿದ್ರಿ ಜೈನಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ಮುನಿ ಮಾತನಾಡುತ್ತಾ,"15ನೇ ಶತಮಾನಕ್ಕೂ ಮೊದಲೇ ಜಗತ್ತಿನಾದ್ಯಂತ ಇಲ್ಲಿನ ಸಾಂಬಾರ ಪದಾರ್ಥ, ಉಪ್ಪು, ಗಂಧಸಾಲೆ ಅಕ್ಕಿ ರವಾನೆಯಾಗುತ್ತಿತ್ತು. ಇದು ದಕ್ಷಿಣ ಕನ್ನಡ ಜಿಲ್ಲೆಯ ಸಾಧನೆ. ಮುಲ್ಕಿ ಬಪ್ಪನಾಡಿನ ಡೋಲು, ಕಾಂತಾಬಾರೆ ಬೂದಾಬಾರೆ, ಆಗೋಳಿ ಮಂಜಣ್ಣ ಎಲ್ಲರೂ ಪ್ರಸಿದ್ಧರು. ಜಾನಪದ ಲೋಕಕ್ಕೆ ಮುಲ್ಕಿ ಅನೇಕ ಕೊಡುಗೆಗಳನ್ನು ನೀಡಿದೆ. ನಮಗೆ ಉಸಿರಾಡಲು ಆಕ್ಸಿಜನ್ ಬೇಕು. ಆದರೆ ಇಂದು ಹಣಕೊಟ್ಟು ಖರೀದಿ ಮಾಡಬೇಕಾದ ಪರಿಸ್ಥಿತಿ ಒದಗಿಬಂದಿದೆ. ಇನ್ನು ಮುಂದೆ ಇಂತಹ ಪರಿಸ್ಥಿತಿ ಖಂಡಿತಾ ಬರುವುದು ಬೇಡ. ಮುಲ್ಕಿಯಲ್ಲಿ ಜಲ ಸಮೃದ್ಧಿ ಇರುವ ಕಾರಣ ಸಸ್ಯ ಸಮೃದ್ಧಿಯಿದೆ. ನಮ್ಮ ಸಣ್ಣ ಮಕ್ಕಳಿಗೆ ಕೃಷಿಯ ಪ್ರೇರಣೆ ನೀಡುವ ಕೆಲಸ ನಡೆಯಬೇಕು. ಮಕ್ಕಳಿಗೆ ಕೃಷಿ ಬದುಕನ್ನು ಪರಿಚಯಿಸಬೇಕು. ಕೃಷಿಯಲ್ಲಿ ಲಾಭ ಕಡಿಮೆ. ಆದರೆ ಅರೋಗ್ಯ ಖಂಡಿತ ಇದೆ. ಹೊನ್ನ ಬೀಜ ಬಿತ್ತೋಣ. ಉಸಿರನ್ನು ಹಸಿರಾಗಿಸೋಣ, ಜಗದ ದಾಹ ತಣಿಸೋಣ" ಎಂದರು.

ಬಳಿಕ ಮಾತಾಡಿದ ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಅವರು, "ಸಿರಿ ಎಂದರೆ ತುಳುವಲ್ಲಿ ಪೊಲಿ ಎಂಬ ಅರ್ಥವಿದೆ. ಕೃಷಿ ಎಂಬ ಸಿರಿಯಿಂದ ಲೋಕದ ಅಭಿವೃದ್ಧಿಯಾಗುತ್ತದೆ. ಜನರು ಸಂಘಟಿತರಾದಾಗ ಮಾತ್ರ ಕೃಷಿ ಮೇಳದಂತಹ ಕಾರ್ಯಕ್ರಮ ನಡೆಯಲು ಸಾಧ್ಯ ಎಂದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಮೂಡಬಿದ್ರಿ ಕ್ಷೇತ್ರದ ಶಾಸಕ, ಕೃಷಿ ಮೇಳದ ಗೌರವಾಧ್ಯಕ್ಷ ಉಮಾನಾಥ್ ಕೋಟ್ಯಾನ್ ವಹಿಸಿದ್ದರು.

ಕೃಷಿ ಮೇಳದ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಅವರು ಕೃಷಿ ಮೇಳದ ಠರಾವು ಅನ್ನು ಶಾಸಕ ಉಮಾನಾಥ್ ಕೋಟ್ಯಾನ್ ಅವರ ಮೂಲಕ ಸರಕಾರಕ್ಕೆ ಮಂಡಿಸಿದರು.

ವೇದಿಕೆಯಲ್ಲಿ ಮಾಜಿ ಸಚಿವ ಬಿ. ನಾಗರಾಜ್ ಶೆಟ್ಟಿ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಧಾರ್ಮಿಕ ಪರಿಷತ್ ಸದಸ್ಯ ಕೆ. ಭುವನಾಭಿರಾಮ ಉಡುಪ, ಬಿಜೆಪಿ ಮುಖಂಡ ಜಗದೀಶ್ ಶೇಣವ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಉದ್ಯಮಿ ಸುರೇಶ ರೈ, ಮೇಯರ್ ಪ್ರೇಮಾನಂದ್ ಶೆಟ್ಟಿ, ಸ್ಥಳದಾನಿ ಫ್ರಾನ್ಸಿಸ್ ಪೀಟರ್, ಮುಲ್ಕಿ ಸೀಮೆ ಅರಮನೆಯ ದುಗ್ಗಣ್ಣ ಸಾವಂತರು, ಕೃಷಿ ಮೇಳದ ಅಧ್ಯಕ್ಷ ವಿಜಯ ಶೆಟ್ಟಿ ಕೊಲ್ನಾಡ್, ಲಯನ್ಸ್ ಮಾಜಿ ಗವರ್ನರ್ ದೇವದಾಸ ಭಂಡಾರಿ, ತುಳು ಅಕಾಡಮಿ ಸದಸ್ಯೆ ಕಾಂತಿ ಶೆಟ್ಟಿ, ಕೃಷಿ ಮೇಳದ ಗೌರವಾಧ್ಯಕ್ಷ ಜಿ. ಆರ್. ಪ್ರಸಾದ್, ಜೊತೆ ಕೋಶಾಧಿಕಾರಿ ಸಂತೋಷ್ ಹೆಗ್ಡೆ, ಜೊತೆ ಕಾರ್ಯದರ್ಶಿಗಳಾದ ಸೋಮಪ್ಪ ನಾಯ್ಕ್, ಚಂದ್ರಹಾಸ್ ಕುಂದರ್, ಸಂಚಾಲಕರಾದ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು, ಎ. ಕೃಷ್ಣ ಶೆಟ್ಟಿ ತಾರೆಮಾರ್, ಪ್ರಶಾಂತ್ ಜಿ ಪೈ, ರತ್ನಾಕರ್ ಕುಳಾಯಿ, ವಿನೋದ್ ಸಾಲಿಯಾನ್ ಬೆಳ್ಳಾಯರು,  ಸಲಹೆಗಾರರಾದ ಮುಲ್ಕಿ ಜೀವನ್ ಕೆ ಶೆಟ್ಟಿ, ತುಕಾರಾಂ ಪೂಜಾರಿ, ಮಾಧ್ಯಮ ಮತ್ತು ಪ್ರಚಾರ ಸಮಿತಿಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು. ಆರ್.ಜೆ. ಅಭಿಷೇಕ್ ಕಾರ್ಯಕ್ರಮ ನಿರೂಪಿಸಿದರು.

ವೇದಿಕೆಯಲ್ಲಿ ಸಾಧಕರಿಗೆ ಸನ್ಮಾನ

ಕೃಷಿ ಮೇಳದ ವೇದಿಕೆಯಲ್ಲಿ ಕೃಷಿಯಲ್ಲಿ ಆವಿಷ್ಕಾರ ಮಾಡಿರುವ ಜನಾರ್ಧನ ಗೌಡ ಮೂಡಬಿದ್ರಿ, ಬಿ. ಕೆ. ದೇವರಾಯ ರಾವ್ ಬೆಳ್ತಂಗಡಿ, ಜೇನು ಕೃಷಿಯಲ್ಲಿ ಸಾಧನೆ ಮಾಡಿರುವ ಬಸವನ ಬಾಗೇವಾಡಿಯ ಮಹಾಂತೇಶ್ ಎನ್. ಚೌಧರಿ, ಕೃಷಿ ಕ್ಷೇತ್ರದ ಸಾಧನೆಗಾಗಿ ಚಿಕ್ಕಬಳ್ಳಾಪುರದ ಎಸ್. ಆರ್. ಎಸ್. ದೇವರಾಜ್, ಬೆಳ್ತಂಗಡಿಯ ವಿಠಲ ಶೆಟ್ಟಿ ತಾರೆಮಾರ್ ಅವರನ್ನು ವೇದಿಕೆಯಲ್ಲಿ ಅತಿಥಿಗಳ ಸಮ್ಮುಖದಲ್ಲಿ ಪೇಟಾ ತೊಡಿಸಿ ಶಾಲು ಹೊದೆಸಿ ಸ್ಮರಣಿಕೆ ಕೊಟ್ಟು ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X