ಹಿಜಾಬ್ ಪ್ರಕರಣದ ತೀರ್ಪು ಹಿನ್ನೆಲೆ: ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

ಬೆಂಗಳೂರು: ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಹಿಜಾಬ್ ಪ್ರಕರಣ ಸಂಬಂಧ ನಾಳೆ ಹೈಕೋರ್ಟ್ ಮಹತ್ವದ ತೀರ್ಪು ನೀಡಲಿರುವ ಹಿನ್ನೆಲೆ ನಗರದ ಎಲ್ಲಾ ಡಿಸಿಪಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಂವಾದ ನಡೆಸಿದ ಸಭೆ ಬಳಿಕ ಆಯುಕ್ತರು ಎಲ್ಲ ಶಾಲಾ ಕಾಲೇಜುಗಳ ಬಳಿ ಭದ್ರತೆ ಹೆಚ್ಚಳಕ್ಕೆ ಸೂಚಿಸಿದ್ದಾರೆ.
ಶಾಲಾ ಕಾಲೇಜುಗಳು ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆಗೆ ಸೂಚಿಸಲಾಗಿದೆ. ನಗರದಲ್ಲಿ ಭದ್ರತೆಗೆ 10,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಯಾವುದೇ ಪ್ರತಿಭಟನೆಗಳಿಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದರು.
Next Story





