ಮಾ.15ರಂದು ಉಡುಪಿ ಜಿಲ್ಲಾ ಮಟ್ಟದ ಆಶಾ ಪ್ರಶಸ್ತಿ ಪ್ರದಾನ
ಉಡುಪಿ : ಉಡುಪಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಆಶಾ ಪ್ರಶಸ್ತಿ ಪ್ರದಾನ ಸಮಾರಂಭ ಮಾ.15ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ನಗರದ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಉದ್ಘಾಟಿಸಲಿದ್ದು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಡಾ. ನವೀನ್ ಭಟ್ ವೈ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story