ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಮಂಗಳವಾರ ಬೃಹತ್ ಸಮಾವೇಶ
ಬೆಂಗಳೂರು, ಮಾ.14: ರಾಜ್ಯ ಸರಕಾರವು ಜಾರಿಗೊಳಿಸಿದ ಮೂರು ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ, ಮಾ.15ರಂದು ನಗರದ ಫ್ರೀಡಂ ಪಾರ್ಕ್‍ನಲ್ಲಿ ಸಿಟಿಜನ್ಸ್ ಫಾರ್ ಡೆಮೊಕ್ರಸಿ ಮತ್ತು ಸಂಯುಕ್ತ ಹೋರಾಟ-ಕರ್ನಾಟಕದ ಸಹಯೋಗದೊಂದಿಗೆ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜನಾಂದೋಲನಾ ಮಹಾಮೈತ್ರಿಯು ತಿಳಿಸಿದೆ.
ಸೋಮವಾರದಂದು ಪ್ರೆಸ್‍ಕ್ಲಬ್‍ನಲ್ಲಿ ಜನಾಂದೋಲನಾ ಮಹಾಮೈತ್ರಿಯ ಸಂಚಾಲಕ ಎಸ್.ಆರ್.ಹಿರೇಮಠ ಮಾತನಾಡಿ, ರಾಜ್ಯ ಸರಕಾರವು ಕಾರ್ನಾಟಕ ಭೂ ಸುಧಾರಣಾ (ತಿದ್ದುಪಡಿ) ಕಾಯಿದೆ 2020, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ನಿಯಂತ್ರಣ ಅಭಿವೃದ್ಧಿ) ಕಾಯಿದೆ 2020 ಹಾಗೂ ರ್ನಾಟಕ ಜಾನುವಾರು ಹತ್ಯಾ (ನಿಷೇಧ ಮತ್ತು ಸಂರಕ್ಷಣೆ) ಕಾಯ್ದೆ 2020 ಅನ್ನು ತರಾತುರಿಯಲ್ಲಿ ಜಾರಿಗೊಳಿಸಿರುವುದು ಸರಿಯಲ್ಲ. ಹಾಗಾಗಿ ಈ ಮೂರು ಕಾಯಿದೆಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಈ ಕರಾಳ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ, ಮಾ.1ರಿಂದ ಬಸವ ಕಲ್ಯಾಣದಿಂದ ಬೆಂಗಳೂರಿಗೆ ಜಾಥಾವನ್ನು ಪ್ರಾರಂಭಿಸಿದ್ದು, ಮಾ.15ರಂದು ಸಮಾವೇಶವನ್ನು ಏರ್ಪಡಿಸಲಾಗಿದೆ. ಸಮಾವೇಶದಲ್ಲಿ ಹೋರಾಟಗಾರರು, ಪ್ರಗತಿಪರ ಚಿಂತಕರು ಸೇರಿದಂತೆ ಅನೇಕ ಜನರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಗೋಷ್ಠಿಯಲ್ಲಿ ಹೋರಾಟಗಾರರಾದ ಅಸ್ಲಮ್ ಅಹ್ಮದ್, ರಾಮೇಗೌಡ ಉಪಸ್ಥಿತರಿದ್ದಾರೆ.





