ಮಾ.15ರಿಂದ ವಿಶೇಷ ತಪಾಸಣಾ ಶಿಬಿರ
ಮಂಗಳೂರು : ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಪ್ರತಿ ತಿಂಗಳ ಮೂರನೇ ಮಂಗಳವಾರ, ಬುಧವಾರ ಮತ್ತು ಶನಿವಾರ ವಿಶೇಷ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಮಾ.15ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಲಾ ಮತ್ತು ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಮಾ.16ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಮಾ.19ರಂದು ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಶಿಬಿರ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story





