Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಶಾ ಕಾರ್ಯಕರ್ತೆಯರು, ನರ್ಸ್ ಗಳ ಕಾರ್ಯ...

ಆಶಾ ಕಾರ್ಯಕರ್ತೆಯರು, ನರ್ಸ್ ಗಳ ಕಾರ್ಯ ಶ್ಲಾಘನೀಯ: ಸಚಿವ ಡಾ. ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ15 March 2022 2:44 PM IST
share
ಆಶಾ ಕಾರ್ಯಕರ್ತೆಯರು, ನರ್ಸ್ ಗಳ ಕಾರ್ಯ ಶ್ಲಾಘನೀಯ: ಸಚಿವ ಡಾ. ಸುಧಾಕರ್

ಬೆಂಗಳೂರು: ಯಾವುದೇ ಸಮಾಜ ಅಭಿವೃದ್ಧಿ ಕಾಣಲು ಮಹಿಳೆಯರಿಗೆ ಸಮಾನ ಹಕ್ಕು, ಅವಕಾಶಗಳನ್ನು ನೀಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಎಫ್ ಕೆಸಿಸಿಐ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಸಚಿವರು, ಮಹಿಳೆ ಬಾಲ್ಯದಿಂದಲೇ ಹೋರಾಟವನ್ನು ಆರಂಭಿಸಬೇಕಾಗುತ್ತದೆ. ಕೆಲ ಸಂದರ್ಭದಲ್ಲಿ ಕುಟುಂಬದಲ್ಲೂ ಹಕ್ಕುಗಳಿಗಾಗಿ ಹೋರಾಟ, ಸಮಾಜದಲ್ಲಿ ಲಿಂಗ ಸಮಾನತೆಗಾಗಿ ಹೋರಾಟ, ಹೀಗೆ ಮಹಿಳೆಯ ಹೋರಾಟ ನಿರಂತರವಾಗಿರುತ್ತದೆ. ಆದರೆ ಯಾವುದೇ ಸಮಾಜ ಸಂಪೂರ್ಣ ಅಭಿವೃದ್ಧಿ ಕಾಣಬೇಕೆಂದರೆ ಮಹಿಳೆಯರಿಗೆ ಸಂಪೂರ್ಣ ಅವಕಾಶ, ಹಕ್ಕುಗಳನ್ನು ನೀಡಬೇಕಾಗುತ್ತದೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ಬಚಾವೋ, ಭೇಟಿ ಪಡಾವೋ ಕಾರ್ಯಕ್ರಮ ಆರಂಭಿಸಿದರು. ಇದರ ಜೊತೆಗೆ ಭೇಟಾ ಸಮ್ಜಾವೋ ಎಂಬುದನ್ನೂ ಸೇರಿಸಲಾಯಿತು. ಇದು ಲಿಂಗ ಅಸಮಾನತೆ ನಿವಾರಿಸಲು ನೆರವಾಗಿದೆ. 2015-16 ರಲ್ಲಿ ಮಹಿಳೆಯರ ಸಂಖ್ಯೆ (1,000 ಪುರುಷರಿಗೆ) 840 ಇತ್ತು. 2020 ರಲ್ಲಿ ಈ ಸಂಖ್ಯೆ 1,040-1,050 ಆಗಿದೆ. ಅಂದರೆ ಈ ಐದು ವರ್ಷಗಳಲ್ಲಿ ಹೆಣ್ಣುಮಕ್ಕಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ಇದು ದೇಶ ಸರಿಯಾದ ದಿಕ್ಕಿನಲ್ಲಿ ಚಲಿಸುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಈಗ ರಾಜ್ಯದಲ್ಲಿ ಮಹಿಳಾ ಉದ್ಯಮಿಗಳ ಸಂಖ್ಯೆ ಹೆಚ್ಚಿದೆ. ಮಹಿಳಾ ನವೋದ್ಯಮಗಳು ಕಂಡುಬರುತ್ತಿದ್ದರೂ, ಅತಿ ಕಡಿಮೆ ಪ್ರಮಾಣದಲ್ಲಿವೆ. ಇದರಲ್ಲಿ ಇನ್ನಷ್ಟು ಪ್ರಗತಿ ಸಾಧಿಸಬೇಕಿದೆ ಎಂದರು.

ಮಹಿಳೆಯರನ್ನು ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ತರಲು ಉತ್ತಮ ಕಾರ್ಯಕ್ರಮ ರೂಪಿಸಬೇಕಿದೆ. ಆರೋಗ್ಯ ಇಲಾಖೆಯಲ್ಲೂ ಮಹಿಳಾ ಸಬಲೀಕರಣ ಮಾಡಲಾಗಿದೆ. ರಾಜ್ಯದಲ್ಲಿ 45 ಸಾವಿರ ಆಶಾ ಕಾರ್ಯಕರ್ತೆಯರಿದ್ದು, ಕೋವಿಡ್ ಸಂದರ್ಭದಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಶುಶ್ರೂಷಕಿಯರು ಕೂಡ ರೋಗಿಗಳನ್ನು ತಮ್ಮ ಕುಟುಂಬದಂತೆ ಪರಿಗಣಿಸಿ ಸೇವೆ ಸಲ್ಲಿಸಿದ್ದಾರೆ ಎಂದು ಶ್ಲಾಘಿಸಿದರು.

ಮಹಿಳೆಯರು ಕೈಗಾರಿಕಾ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಇಚ್ಛಾಶಕ್ತಿ, ಜ್ಞಾನಶಕ್ತಿ ಹಾಗೂ ಕರ್ಮಶಕ್ತಿ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಿಳೆಯರು ಉದ್ಯಮಕ್ಕೆ ಬರಲು ಪ್ರೋತ್ಸಾಹ ನೀಡುವುದು, ನಂತರ ಸೂಕ್ತ ಮಾಹಿತಿ ನೀಡುವುದು ಹಾಗೂ ಎಲ್ಲರೂ ಸೇರಿ ಅವರಿಗೆ ನೆರವು ನೀಡುವುದನ್ನು ಇದು ಒಳಗೊಂಡಿದೆ. ಉದ್ಯಮಗಳಲ್ಲಿ ಮಹಿಳೆಯರು ಮುಂಚೂಣಿಗೆ ಬರಲು ಇದೇ ಮೂರು ಪ್ರಮುಖ ಆಧಾರಗಳಾಗಿವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X