Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಂವಿಧಾನ ನೀಡಿದ ವೈಯಕ್ತಿಕ, ಮೂಲಭೂತ...

ಸಂವಿಧಾನ ನೀಡಿದ ವೈಯಕ್ತಿಕ, ಮೂಲಭೂತ ಹಕ್ಕನ್ನು ಕಡೆಗಣಿಸಿದ ಹೈಕೋರ್ಟ್ ತೀರ್ಪು : ಎಸ್ಡಿಪಿಐ

ವಾರ್ತಾಭಾರತಿವಾರ್ತಾಭಾರತಿ15 March 2022 4:16 PM IST
share

ಮಂಗಳೂರು : ದೇಶದ ಪ್ರಜೆಗಳಿಗಿರುವ ಆಯ್ಕೆಯ ಹಕ್ಕು ಮತ್ತು ಸಾಂವಿಧಾನಿಕವಾಗಿರುವ ವೈಯಕ್ತಿಕ ಹಕ್ಕು ಮತ್ತು ಮೂಲಭೂತ ಹಕ್ಕನ್ನು ಕಡೆಗಣಿಸಿ ವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವಲ್ಲಿ ನ್ಯಾಯಾಲಯವು ವಿಫಲವಾಗಿರುವುದು ಕರ್ನಾಟಕ ಹೈಕೋರ್ಟ್ ಹಿಜಾಬ್ ಕುರಿತು ನೀಡಿದ ತೀರ್ಪಿನಲ್ಲಿ ರುಜುವಾತಾಗಿದೆ ಎಂದು ಎಸ್ಡಿಪಿಐ ಆರೋಪಿಸಿದೆ.

ಬಿಜೆಪಿ ಸರಕಾರ ಮುಸ್ಲಿಂ ಅಸ್ತಿತ್ವವನ್ನು ಅಪರಾಧಿ ಯಂತೆ ಬಿಂಬಿಸಿ, ಸಮಾಜದೊಳಗೆ ಸಮಸ್ಯೆಯನ್ನು ಹುಟ್ಟು ಹಾಕಿ, ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಕೊನೆಗೆ ಸಂತ್ರಸ್ತರು ನ್ಯಾಯದ ನಿರೀಕ್ಷೆಯಲ್ಲಿ ನ್ಯಾಯಾಲಯದ ಮೊರೆ ಹೋದಾಗ, ನ್ಯಾಯಾಲಯವೂ ರಾಜಕೀಯ ಪ್ರೇರಿತವಾದ ಅಸಂವಿಧಾನಿಕ ತೀರ್ಪನ್ನು ನೀಡಿದೆ. ಇದು ನ್ಯಾಯವ್ಯವಸ್ಥೆಯ  ಮೇಲಿರುವ ಅಲ್ಪಸಂಖ್ಯಾತರ ನಂಬಿಕೆಯನ್ನು ನಿರಾಶೆಗೊಳಿಸಿದೆ. ಶಿರವಸ್ತ್ರ ಒಂದು ಸಾಂವಿಧಾನಿಕವಾಗಿರುವ ವೈಯಕ್ತಿಕ ಮತ್ತು ಮೂಲಭೂತ ಹಕ್ಕುಗಳಿಂದ ಕೂಡಿದ ಆಯ್ಕೆಯ ಹಕ್ಕು. ಈ ಹಕ್ಕನ್ನು ನ್ಯಾಯಾಲಯವೇ ಕಸಿಯುತ್ತಿರುವುದು ವಿಷಾದನೀಯ. ಅಗತ್ಯ ಧಾರ್ಮಿಕ ಆಚರಣೆಯ ವಿಚಾರಗಳಲ್ಲಿ  ಅಂದರೆ ಶಬರಿ ಮಲೆ ಮಹಿಳಾ ಪ್ರವೇಶ ವಿಚಾರ, ಮುಸ್ಲಿಂ ಹೆಣ್ಣು ಮಕ್ಕಳ ಮಸೀದಿ ಪ್ರವೇಶ ವಿಚಾರ  ಮತ್ತು ಪಾರ್ಸಿ ಹೆಣ್ಮಕ್ಕಳ ಅಂತರ್ಜಾತಿ ವಿಚಾರಗಳಲ್ಲಿ ಸರ್ವೋಚ್ಚ ನ್ಯಾಯಾಲಯ ಎಷ್ಟರವರೆಗೆ ಮಧ್ಯ ಪ್ರವೇಶ ಮಾಡಬೇಕು ಅಥವಾ ಇದನ್ನು ಆಯಾ ಧರ್ಮದ ಧಾರ್ಮಿಕ ನಂಬಿಕೆಗಳನ್ನು ಎತ್ತಿ ಹಿಡಿಯಬೇಕಾ ಎಂಬ ವಿಚಾರದಲ್ಲಿ ಒಂದು ಅಂತಿಮ ತೀರ್ಮಾನ ಕೈಗೊಳ್ಳಲು ಬಾಕಿ ಇರುವಾಗಲೇ,  ಕರ್ನಾಟಕ ಹೈ ಕೋರ್ಟ್ ಶಿರವಸ್ತ್ರ ಅಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲಾ ಎಂದಿರುವುದು ಸಂವಿಧಾನಿಕ ಹಕ್ಕುಗಳ ಮೇಲಿನ ದಾಳಿಯಾಗಿದೆ.

2021 /2022 ರ ಸರಕಾರ ದಾಖಲಾತಿ ನಿಯಮಗಳ ಪ್ರಕಾರ  ಪದವಿಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲಾ  ಮತ್ತು ಯಾರಾದರೂ ಅದನ್ನು ಉಲ್ಲಂಘಿಸಿದರೆ ಸರಕಾರ ಕ್ರಮ ಕೈಗೊಲ್ಲುತ್ತದೆ ಎಂದು ಆದೇಶ ಇದ್ದರೂ ಕೂಡ, ಏಕಾಏಕಿ ವಿವಾದವೆಬ್ಬಿಸಿ ತಕ್ಷಣದಲ್ಲೇ ಹೊಸ ಆದೇಶ ಹೊರಡಿಸಿದ್ದನ್ನು ಹೈಕೋರ್ಟ್ ಎತ್ತಿ ಹಿಡಿದಿರುವುದು ರಾಜಕೀಯ ಪ್ರೇರಿತ ಆದೇಶ ಎಂಬ ಸಂಶಯಕ್ಕೆ ಹೆಚ್ಚು ಪುಷ್ಠಿಯನ್ನು ನೀಡಿದಂತಾಗಿದೆ ಎಂದು ಎಸ್ಡಿಪಿಐ ಪ್ರಕಟನೆಯಲ್ಲಿ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X