ಮಂಗಳೂರು: ಮಾ. 21ರಿಂದ ಕಾರಾಗೃಹದಲ್ಲಿ ಬಂಧಿಗಳ ಸಂದರ್ಶನ ಅವಕಾಶ ಪುನಾರಂಭ

ಫೈಲ್ ಫೋಟೊ
ಮಂಗಳೂರು : ಕೋವಿಡ್ ಹಿನ್ನೆಲೆಯಲ್ಲಿ ನಗರದಲ್ಲಿರುವ ಜಿಲ್ಲಾ ಕಾರಾಗೃಹದ ಬಂಧಿಗಳ ನೇರ ಸಂದರ್ಶನಕ್ಕೆ ಸ್ಥಗಿತಗೊಳಿಸಲಾಗಿದ್ದ ಅವಕಾಶವನ್ನು ಮಾ. 21ರಿಂದ ಪುನರಾರಂಭಿಸುತ್ತಿರುವುದಾಗಿ ಕಾರಾಗೃಹದ ಅಧೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ ಸೋಂಕು ಇಳಿಕೆಯಾದ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ ಬಂಧಿಗಳ ನೇರ ಸಂದರ್ಶನಕ್ಕೆ ಇಲಾಖೆಯ ಮುಖ್ಯಸ್ಥರ ಅನುಮತಿಯೊಂದಿಗೆ ಅವಕಾಶ ನೀಡಲಾಗುತ್ತಿದೆ. ಆದರೆ ಈ ಸಂದರ್ಭ ಸಂದರ್ಶನಕ್ಕೆ ಬರುವ ಕುಟುಂಬ ಸದಸ್ಯರು, ಸಂಬಂಧಿಕರು, ಸ್ನೇಹಿತರು ಮತ್ತು ವಕೀಲರು ಮುಂಚಿತವಾಗಿಯೇ ಕಾರಾಗೃಹದ ಕೆಳಕಂಡ ಇಮೇಲ್/ ವಾಟ್ಸಾಪ್/ ದೂರವಾಣಿ ಮೂಲಕ ಸಂಪರ್ಕಿಸಿ ವಿವರಗಳೊಂದಿಗೆ ನೋಂದಾಯಿಸಿಕೊಂಡು ನಿಗದಿಪಡಿಸಿದ ದಿನ ಮತ್ತು ಸಮಯಕ್ಕೆ ಆಗಮಿಸಬಹುದು ಎಂದು ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ತಿಳಿಸಿದ್ದಾರೆ.
ಸಂದರ್ಶನಕ್ಕೆ ಬರುವವರು ಯಾವುದೇ ರೀತಿಯ ಕೋವಿಡ್ ರೋಗ ಲಕ್ಷಣ ಹೊಂದಿರಬಾರದು ಹಾಗೂ ಎರಡು ಡೋಸ್ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡಿರುವ ಪ್ರಮಾಣ ಪತ್ರವನ್ನು ಹಾಜರುಪಡಿಸಬೇಕು ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.





