Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂಸ್ಕೃತ ಸಾಹಿತ್ಯ ಜೀವನ ಮೌಲ್ಯವನ್ನು...

ಸಂಸ್ಕೃತ ಸಾಹಿತ್ಯ ಜೀವನ ಮೌಲ್ಯವನ್ನು ಬೋಧಿಸುತ್ತದೆ: ಅದಮಾರುಶ್ರೀ

ಸಂಸ್ಕೃತ ಪಾಠ್ಯ ವಿಷಯಗಳ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ15 March 2022 8:24 PM IST
share
ಸಂಸ್ಕೃತ ಸಾಹಿತ್ಯ ಜೀವನ ಮೌಲ್ಯವನ್ನು ಬೋಧಿಸುತ್ತದೆ: ಅದಮಾರುಶ್ರೀ

ಉಡುಪಿ : ಕಡಿಮೆ ಪದಗಳಲ್ಲಿ ಬಹ್ವರ್ಥಗಳನ್ನು, ಬಹುವಿಚಾರ ಗಳನ್ನು ನಿರೂಪಿಸುವ ಭಾಷೆ ಸಂಸ್ಕೃತ ಭಾಷೆ ಎಂದು ಅದಮಾರು ಮಠದ ಶ್ರೀ  ಈಶಪ್ರಿಯ ತೀರ್ಥರು ಹೇಳಿದ್ದಾರೆ.

ಮಂಗಳವಾರ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಸಹಯೋಗದಲ್ಲಿ ಮಂಗಳೂರು ವಿವಿ ಸಂಸ್ಕೃತ ಶಿಕ್ಷಕ ಸಂಘವು ಆಯೋಜಿಸಿದ ಪದವಿ ತರಗತಿಗಳ ಸಂಸ್ಕೃತ ಪಾಠ್ಯ ವಿಷಯಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಮಾತನಾಡುತಿದ್ದರು.

‘ಶಾಲಾಕಾಲೇಜುಗಳ ಪಠ್ಯ ಪುಸ್ತಕಗಳು ವಿದ್ಯಾರ್ಥಿಗಳಲ್ಲಿ ಸಂಸ್ಕೃತ ಭಾಷೆಯ ಬಗ್ಗೆ ಒಲವನ್ನೂ ಅಭಿಮಾನವನ್ನೂ ಮೂಡಿಸುವ ಕೆಲಸ ಮಾಡಬೇಕು. ಸಂಸ್ಕೃತ ದಲ್ಲೇ ಹೆಚ್ಚೆಚ್ಚು ಯೋಚನೆ ಮಾಡುವ ಮೂಲಕ, ಮಾತನಾಡುವ ಮೂಲಕ ಸತತ ಪರಿಶ್ರಮದಿಂದ ದೇವಭಾಷೆಯನ್ನು ಉಳಿಸಬಹುದು’ ಎಂದು ಸ್ವಾಮೀಜಿ ನುಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಮಧುಸೂದನ ಭಟ್ ಮಾತನಾಡಿ, ‘ಸಂಸ್ಕೃತ ಸಾಹಿತ್ಯವು ಜೀವನ ಮೌಲ್ಯವನ್ನು ಬೋಧಿಸುತ್ತದೆ. ಮಾತ್ರವಲ್ಲ ಎಲ್ಲರೂ  ಸಂಸ್ಕೃತದ ಪದಗಳನ್ನು ತಮ್ಮ ನಿತ್ಯದ ಆಡುಭಾಷೆಯಲ್ಲಿ ತಿಳಿದೋ ತಿಳಿಯದೆಯೋ ಬಳಸುತ್ತಿದ್ದಾರೆ. ಹೀಗಾಗಿ ಸಂಸ್ಕೃತವು ವ್ಯವಹಾರ ಭಾಷೆಯಲ್ಲ ಎಂಬ ಅಭಿಪ್ರಾಯ ಸರಿಯಲ್ಲ’ ಎಂದು ಹೇಳಿದರು.

ಮಂಗಳೂರು ವಿವಿ ಸಂಸ್ಕೃತ ಶಿಕ್ಷಕರ ಸಂಘದ ಅಧ್ಯಕ್ಷ ಡಾ.ರಮೇಶ್ ಟಿ. ಎಸ್. ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಂಗಳೂರು ವಿವಿಯ ಸಂಸ್ಕೃತದ ಶೇ.೮೦ರಷ್ಟು ಪಾಠಗಳು ರಾಜ್ಯ ಸಮಿತಿಯಿಂದ ಸ್ವೀಕೃತ ವಾಗಿವೆ ಎಂದರು.

ಇದೇ ಸಂದರ್ಭದಲ್ಲಿ ಸೇವಾನಿವೃತ್ತಿ ಹೊಂದಿದ ಪ್ರೊ.ಜಯರಾಮ ಬಿ., ಪ್ರೊ. ಲೀಲಾವತಿ ಬಾಯಿ, ಡಾಕ್ಟರೇಟ್ ಪದವಿ ಪಡೆದ ಡಾ.ವಸುಮತಿ ಭಟ್, ಡಾ. ವಿಜಯಲಕ್ಷ್ಮಿ ಎಂ. ಹಾಗೂ ಅಂಬಿಕಾ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ನಿಯುಕ್ತರಾದ ಡಾ. ವಿನಾಯಕ ಭಟ್ ಗಾಳಿಮನೆ ಇವರನ್ನು ಸಮ್ಮಾನಿಸ ಲಾಯಿತು.

ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ. ರಾಘವೇಂದ್ರ ಎ. ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿವಿ ಸಂಸ್ಕೃತ ಶಿಕ್ಷಕರ ಸಂಘದ ಕಾರ್ಯದರ್ಶಿ ಡಾ. ಮಂಜುನಾಥ ಭಟ್ ವಂದಿಸಿ, ಡಾ.ಆನಂದ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X